ಕೃಷಿ ಉದ್ಯಮವನ್ನಾಗಿಸಲು ಪಣ


Team Udayavani, Mar 6, 2020, 7:00 AM IST

krushi-udya

ಮಳೆಯಾಶ್ರಿತ ಪ್ರದೇಶದಲ್ಲಿ ಕೃಷಿಯಿಂದ ತೋಟಗಾರಿಕೆ ಬೆಳೆಗೆ ವರ್ಗಾವಣೆಗೊಳ್ಳುವ ರೈತರ ಖಾತೆಗೆ ಪ್ರತಿ ಹೆಕ್ಟೇರ್‌ಗೆ 5 ಸಾವಿರ ರೂ., ಕೃಷಿಯನ್ನು ಉದ್ಯಮವನ್ನಾಗಿ ಪರಿಗಣಿಸಲು ಹೊಸ ಯೋಜನೆ, ರೈತರ ಮನೆ ಬಾಗಿಲಿಗೇ ಸಲಹೆ ನೀಡಲು ಬರಲಿದೆ “ಸಂಚಾರಿ ಕೃಷಿ ಹೆಲ್ತ್‌ ಕ್ಲಿನಿಕ್‌’, ಬರಪೀಡಿತ ಪ್ರದೇಶಗಳಿಗೆ ಸುಜಲಾ ಸೂಕ್ಷ್ಮ ನೀರಾವರಿ, ಕಳಸಾ-ಬಂಡೂರಿ ನಾಲಾ ಕಾಮಗಾರಿಗೆ 500 ಕೋಟಿ, ತೋಟಗಾರಿಕೆ ಉತ್ಪನ್ನಗಳ ದಾಸ್ತಾನು ಮತ್ತು ಪ್ಯಾಕೇಜಿಂಗ್‌ಗೆ ಹೊಸ ತಂತ್ರಜ್ಞಾನ…

ಸಂಕಷ್ಟದಲ್ಲಿ ಸಿಲುಕಿರುವ ಕೃಷಿ ಕ್ಷೇತ್ರದ ಪುನಃಶ್ಚೇತನಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ನೀಡಿದ ಕೊಡುಗೆಗಳಿವು. ರಾಜ್ಯದಲ್ಲಿ ಶೇ.75ರಷ್ಟು ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಇದರಲ್ಲಿ ಬಹುತೇಕ ಕೃಷಿ ಪದ್ಧತಿಯು ಮಳೆಯಾಶ್ರಿತ ಆಗಿದೆ. ಇದನ್ನು ತೋಟಗಾರಿಕೆ ಬೆಳೆಗಳ ಪ್ರದೇಶವನ್ನಾಗಿ ವಿಸ್ತರಿಸುವ ಸಾಧ್ಯತೆಗಳಿದ್ದು, ಹೀಗೆ ಕೃಷಿಯಿಂದ ತೋಟಗಾರಿಕೆ ವರ್ಗಾವಣೆಗೊಳ್ಳುವ ಸಣ್ಣ-ಅತಿ ಸಣ್ಣ ರೈತರಿಗೆ ಸರ್ಕಾರ ಸಮಗ್ರ ಯೋಜನೆ ರೂಪಿಸಲಿದೆ.

ಇದರಡಿ ಪ್ರತಿ ಹೆಕ್ಟೇರ್‌ಗೆ 5 ಸಾವಿರ ರೂ.ಗಳಂತೆ ಗರಿಷ್ಠ ಹತ್ತು ಸಾವಿರ ರೂ. ನೇರವಾಗಿ ರೈತರ ಖಾತೆಗೆ ವರ್ಗಾಯಿಸಲಾಗುವುದು ಎಂದು ಸರ್ಕಾರ ಹೇಳಿದೆ. ನೀರಿನ ಭದ್ರತೆ, ಭೂಸಂಚಯ, ಸಮೂಹ ಕೃಷಿಗೆ ಪ್ರೋತ್ಸಾಹ, ಸೂಕ್ಷ್ಮ ನೀರಾವರಿ ಕೃಷಿಕರಿಗೆ ಉತ್ತೇಜನ, ಕೃಷಿ ಉತ್ಪನ್ನಗಳ ಸಂಸ್ಕರಣೆ, ಮಾರುಕಟ್ಟೆ ಪ್ರೋತ್ಸಾಹ ಸೇರಿ ಎಲ್ಲವನ್ನೂ ಒಳಗೊಂಡ ಹೊಸ ಕೃಷಿ ನೀತಿಗೆ ಸರ್ಕಾರ ಮುಂದಾಗಿದ್ದು, ಇದು ಮುಂಬರುವ ದಿನಗಳಲ್ಲಿ ಕೃಷಿಯನ್ನು ಉದ್ಯಮವನ್ನಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾಗಲಿದೆ ಎಂಬ ನಿರೀಕ್ಷೆಯಿದೆ.

ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಘೋಷಿಸಿರುವ ಕೇಂದ್ರದ ಕನಸು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಇಂತಹ ಹಲವು ಯೋಜನೆ ಮತ್ತು ನೀತಿಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ. ಇದು ಹೊಸ ನಿರೀಕ್ಷೆ ಹುಟ್ಟುಹಾಕಿದೆ. ಆದರೆ, ಘೋಷಿಸಿದ ಆ ಯೋಜನೆಗಳಲ್ಲಿ ಕೃಷಿಗೆ ದಿಕ್ಸೂಚಿಯಾಗುವ ಸ್ಪಷ್ಟ “ರೋಡ್‌ ಮ್ಯಾಪ್‌’ ಕಾಣಿಸುತ್ತಿಲ್ಲ. ಉದಾಹರಣೆಗೆ ಬರಪೀಡಿತ ಪ್ರದೇಶಗಳಲ್ಲಿ ಸುಜಲಾ ಜಲಾನಯನ, ಸೂಕ್ಷ್ಮನೀರಾವರಿಗೆ ಸಹಾಯಧನದಂತಹ ಹಲವು ಪೂರಕ ಕ್ರಮಗಳನ್ನು ಕೈಗೊಳ್ಳುವುದಾಗಿ ಸರ್ಕಾರ ಹೇಳಿದೆ. ಆದರೆ ಕೊಡಗು, ಉತ್ತರ ಕರ್ನಾಟಕ ಸೇರಿ ಕೆಲ ಭಾಗಗಳಲ್ಲಿ ನೆರೆ ಹಾವಳಿ ಪುನರಾವರ್ತನೆ ಆಗುತ್ತಿದೆ.

ಅದಕ್ಕೆ ಪರಿಹಾರ ಕಂಡುಕೊಳ್ಳುವುದು ಹಾಗೂ ರೈತರು ಎದುರಿಸುತ್ತಿರುವ ಮಾರುಕಟ್ಟೆ ಬಗ್ಗೆ ಯಾವುದೇ ಸ್ಪಷ್ಟತೆಯಿಲ್ಲ. ಮಣ್ಣಿನ ಆರೋಗ್ಯ ಗುರುತಿನ ಚೀಟಿ ಈಗಾಗಲೇ ಇದೆ. ಈಗ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ, ರೈತರ ಮನೆಬಾಗಿಲಿಗೇ ತಜ್ಞರು ಆಗಮಿಸಲಿದ್ದಾರೆ. ಇದಕ್ಕಾಗಿ “ಸಂಚಾರಿ ಕೃಷಿ ಹೆಲ್ತ್‌ ಕ್ಲಿನಿಕ್‌’ಗಳನ್ನು ಆರಂಭಿ ಸಲು ಸರ್ಕಾರ ನಿರ್ಧ ರಿಸಿದೆ. ಈ ಕ್ಲಿನಿಕ್‌ಗಳು ಹಳ್ಳಿಗಳಿಗೆ ಭೇಟಿ ನೀಡಿ, ಮಣ್ಣು ಮತ್ತು ನೀರನ್ನು ಸ್ಥಳ ದಲ್ಲೇ ಪರೀಕ್ಷಿಸಿ, ರೈತರ ಮನೆ ಬಾಗಿಲಿನಲ್ಲೇ ಕೀಟ ನಾಶಕ ಮತ್ತು ರೋಗಗಳ ಬಗ್ಗೆ ತಾಂತ್ರಿಕ ಮಾಹಿತಿ ಹಾಗೂ ಪರಿ ಹಾರಗಳನ್ನು ಸೂಚಿಸಲಿದ್ದಾರೆ.

ಅಂತರ್ಜಲ ಮಟ್ಟ ತೀವ್ರ ಕುಸಿತ ಕಂಡಿರುವ ರಾಜ್ಯದ 76 ತಾಲೂಕುಗಳಲ್ಲಿ ಜಲಸಂರಕ್ಷಣೆ ಮತ್ತು ಮಳೆನೀರು ಕೊಯ್ಲು ಚಟುವಟಿಕೆಗಳಿಗಾಗಿ 4.75 ಲಕ್ಷ ಹೆಕ್ಟೇರ್‌ಗಳಿಗೆ ನೂರು ಜಲಾನಯನ ನಿರ್ವಹಣಾ ಯೋಜನೆಗಳನ್ನು ಮಂಜೂರು ಮಾಡಲಾಗಿದೆ. ಅಲ್ಲದೆ, ಮುಂದಿನ ಮೂರು ವರ್ಷಗಳಲ್ಲಿ ನಾಲ್ಕು ಲಕ್ಷ ಹೆಕ್ಟೇರ್‌ಗಳಲ್ಲಿ 810 ಅತಿಸಣ್ಣ ಜಲಾನಯನ ಪ್ರದೇಶಗಳಲ್ಲಿ ಜಲಾಮೃತ ಯೋಜನೆಗಳನ್ನು ಅನುಷ್ಠಾನಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಆದರೆ, ಇದಕ್ಕಾಗಿ ಮೀಸಲಿಟ್ಟ ಅನುದಾನದ ಬಗ್ಗೆ ಎಲ್ಲಿಯೂ ಉಲ್ಲೇಖೀಸಿಲ್ಲ.

ಮಳೆಯ ಕಣ್ಣಾಮುಚ್ಚಾಲೆ ಬಗ್ಗೆ ಪ್ರಸ್ತಾಪಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ರೈತರಿಗೆ ಕೈಗೆಟಕುವ ದರದಲ್ಲಿ ಹನಿ ಮತ್ತು ತುಂತುರು ನೀರಾವರಿ ಅಳವಡಿಸಲು ಅನುಕೂಲ ಆಗುವಂತೆ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಯೋಜನೆ ಅಡಿ ಶೇ. 90ರಷ್ಟು ಸಹಾಯಧನ ಒದಗಿಸಲಾಗುವುದು. ಈ ಉದ್ದೇಶಕ್ಕಾಗಿ 2020-21ನೇ ಸಾಲಿನಲ್ಲಿ 627 ಕೋಟಿ ರೂ. ಕಲ್ಪಿಸಲಾಗುತ್ತಿದೆ. ಆದರೆ, ಪದೇಪದೆ ನೆರೆಹಾವಳಿ ಮತ್ತು ಅದರಿಂದ ತುತ್ತಾಗು ತ್ತಿರುವ ಬೆಳೆಗಳ ರಕ್ಷಣೆ ಬಗ್ಗೆ ಪ್ರಸ್ತಾಪಿಸಿಲ್ಲ. ಕೊಡಗಿನಲ್ಲೇ ಸತತ ಎರಡು ಬಾರಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ನೆರೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಕಾಣುವುದಿಲ್ಲ.

ಜತೆಗೆ ಸುಜಲಾ-3 ಯೋಜನೆಯನ್ನು 12 ಜಿಲ್ಲೆಗಳಲ್ಲಿನ ಮಳೆಯಾಶ್ರಿತ ಜಲಾನಯನ ಪ್ರದೇಶಗಳ 14 ಲಕ್ಷ ಹೆಕ್ಟೇರ್‌ಗೂ ಹೆಚ್ಚಿನ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸುವ ಸಂಬಂಧ ವೈಜ್ಞಾನಿಕ ಸಂಸ್ಥೆಗಳು ನೀಡಿದ ಶಿಫಾರಸುಗಳ ಪ್ರಸಾರಕ್ಕಾಗಿ ಹತ್ತು ಕೋಟಿ ರೂ. ವೆಚ್ಚದಲ್ಲಿ 2,500 ಗ್ರಾಮಗಳಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಮಳೆಯಾಶ್ರಿತ ಕೃಷಿಕರಿಗೆ ಭೂಸಂಪನ್ಮೂಲ ಯಾದಿಯ ತರಬೇತಿ ನೀಡಿ, ಕಾರ್ಡ್‌ಗಳನ್ನು ವಿತರಿಸಲು ಉದ್ದೇಶಿಸಲಾಗಿದೆ.

ಎತ್ತಿನಹೊಳೆಗೆ 1500 ಕೋ.: ಇತ್ತೀಚೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ ಮಹದಾಯಿ ಯೋಜನೆಗೆ ಪೂರಕವಾಗಿ ಕಳಸಾ-ಬಂಡೂರಿ ನಾಲಾ ಕಾಮಗಾರಿಗಳಿಗಾಗಿ ಸರ್ಕಾರ 500 ಕೋಟಿ ರೂ. ಮೀಸಲಿಟ್ಟಿದೆ. ಜತೆಗೆ ಕುಡಿಯುವ ನೀರು ಪೂರೈಕೆಗಾಗಿ ಕೈಗೆತ್ತಿಕೊಂಡ ಎತ್ತಿನಹೊಳೆ ಯೋಜನೆಗೆ 1,500 ಕೋಟಿ ರೂ. ಒದಗಿಸಲಾಗಿದೆ. ತುಂಗಭದ್ರಾ ಜಲಾಶಯಕ್ಕೆ ಪರ್ಯಾಯವಾಗಿ ನವಲೆ ಹತ್ತಿರ ನಿರ್ಮಿಸಲು ಉದ್ದೇಶಿಸಿರುವ ಸಮತೋಲನಾ ಜಲಾಶಯಕ್ಕೆ 20 ಕೋಟಿ ರೂ.,

ರಾಯಚೂರು, ಯಾದಗಿರಿ, ಕಲಬುರಗಿ ಭಾಗದ ಜನರಿಗೆ ಕುಡಿಯುವ ನೀರು ಸರಬರಾಜಿಗೆ ಅನುಕೂಲವಾಗುವಂತೆ ತಿಂತಿಣಿ ಬ್ರಿಡ್ಜ್ ಬಳಿ ಕೃಷ್ಣಾ ನದಿಗೆ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಡಿಪಿಆರ್‌ತಯಾರಿಸಲಾಗುವುದು. ವಿವಿಧ ಭಾಗಗಳಿಂದ ಏತ ನೀರಾವರಿ ಯೋಜನೆ ಕೈಗೆತ್ತಿಕೊಳ್ಳಲು ಸಾಕಷ್ಟು ಬೇಡಿಕೆಗಳು ಬಂದಿವೆ. ಅಲ್ಲಿನ ನೀರಿನ ಮೂಲ ಮತ್ತು ತಾಂತ್ರಿಕ ಅನುಕೂಲತೆ ಆಧರಿಸಿ ಹೊಸ ಏತ ನೀರಾವರಿ ಯೋಜನೆ ಆರಂಭಿಸಲು ಐದು ಸಾವಿರ ಕೋಟಿ ರೂ. ತೆಗೆದಿಡಲಾಗಿದೆ.

ಟಾಪ್ ನ್ಯೂಸ್

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.