“ದೈವನರ್ತಕ’ರ ಮಾಸಾಶನ ಘೋಷಣೆಯಲ್ಲೇ ಬಾಕಿ? ಪ್ರತ್ಯೇಕ ಮಾರ್ಗಸೂಚಿ ಇಲ್ಲದೆ ಎದುರಾದ ತೊಡಕು
Team Udayavani, Feb 5, 2023, 8:00 AM IST
ಮಂಗಳೂರು : “ಕಾಂತಾರ’ ಚಲನಚಿತ್ರ ವಿಶ್ವದೆಲ್ಲೆಡೆ ತುಳುನಾಡಿನ ದೈವಾರಾಧನೆಯ ಮಹತ್ವವನ್ನು ಪ್ರಚುರಪಡಿಸಿದ ಬೆನ್ನಲ್ಲೇ ರಾಜ್ಯ ಸರಕಾರ ದೈವ ನರ್ತಕರಿಗೆ 2 ಸಾವಿರ ರೂ. ಮಾಸಾಶನ ಘೋಷಿಸಿತ್ತು. ಆದರೆ ಅದಿನ್ನೂ ಜಾರಿಯಾಗಲು ಮುಹೂರ್ತವೇ ಕೂಡಿ ಬಂದಿಲ್ಲ.
ಕರ್ನಾಟಕ ಜಾನಪದ ಅಕಾಡೆಮಿಯಿಂದ ಈ ಹಿಂದಿನಿಂದಲೂ ದೈವ ನರ್ತಕರನ್ನು ಒಳಗೊಂಡು ಕಲಾವಿದರಿಗೆ ನೀಡಲಾಗುವ ಮಾಸಾಶನದಡಿ ಈಗಲೂ ಅರ್ಜಿಗಳನ್ನು ಪಡೆಯಲಾಗುತ್ತಿದೆ. ಆದರೆ ದೈವ ನರ್ತಕರಿ ಗೆಂದು ಯಾವುದೇ ಹೊಸ ಅಥವಾ ಪ್ರತ್ಯೇಕ ಮಾರ್ಗಸೂಚಿಯನ್ನು ಸರಕಾರ ಪ್ರಕಟಿಸಿಲ್ಲ.
ಅಕಾಡೆಮಿಯು ಜಾನಪದ ಕಲಾವಿದರಿಗೆ 2000 ರೂ. ಮಾಸಾಶನ ನೀಡುತ್ತಿದ್ದು, ಕರಾ ವಳಿ ಜಿಲ್ಲೆಗಳಲ್ಲಿ ಸುಮಾರು 25 ಮಂದಿ ದೈವ ನರ್ತಕರು ಮಾಸಾಶನ ಪಡೆಯುತ್ತಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಲ್ಲಿ ವಿಚಾರಿಸಿದರೆ, ಹೊಸ ಮಾರ್ಗ ಸೂಚಿ ಪ್ರಕಟವಾಗಿಲ್ಲ. ಈ ಹಿಂದಿನಂತೆಯೇ ದೈವ ನರ್ತಕರ ಅರ್ಜಿಯನ್ನು ಅಕಾಡೆಮಿಗೆ ಕಳುಹಿಸಲಾಗು ತ್ತಿದೆ ಎನ್ನುತ್ತಾರೆ.
ಕಳೆದ ಅಕ್ಟೋಬರ್‌ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅವರು ದೈವ ನರ್ತಕರಿಗೆ ತಲಾ 2 ಸಾವಿರ ರೂ. ಮಾಸಾಶನ ಘೋಷಿಸಿದ್ದರು. ದೈವ ನರ್ತಕರು ಸಂತಸವನ್ನೂ ವ್ಯಕ್ತಪಡಿಸಿದ್ದರು.
ದೈವ ನರ್ತಕರ ಕುರಿತು ಪ್ರತ್ಯೇಕ ಸಮೀಕ್ಷೆ ನಡೆದಿಲ್ಲ. ಇಲಾಖೆಯಲ್ಲೂ ನಿಖರ ಅಂಕಿ ಆಂಶಗಳಿಲ್ಲ. ದೈವಾರಾಧಕರಾಗಿ ದೈವ ನರ್ತಕರು, ಜೀಟಿಗೆ ಹಿಡಿಯುವವರು, ಪಾತ್ರಿಗಳು ಸೇರಿದಂತೆ ಹಲವರು ಈ ಕ್ಷೇತ್ರದಲ್ಲಿ ಇರುವ ಕಾರಣ ಯಾರನ್ನು ದೈವ ನರ್ತಕರಾಗಿ ಪರಿಗಣಿಸಬಹುದು ಎಂಬ ಬಗ್ಗೆ ಸ್ಪಷ್ಟತೆಯೂ ಇಲ್ಲ.
ಅಂದಾಜಿನ ಪ್ರಕಾರ ಕರಾವಳಿಯಲ್ಲಿ ಐದು ಸಾವಿರದಷ್ಟು ಮಂದಿ ದೈವನರ್ತಕರಿದ್ದಾರೆ ಎನ್ನಲಾಗಿದೆ.
ದ.ಕ. ಜಿಲ್ಲೆಯಲ್ಲಿ ಸುಮಾರು 10 ಹಾಗೂ ಉಡುಪಿ ಜಿಲ್ಲೆಯಲ್ಲಿ 15 ಮಂದಿ ದೈವ ನರ್ತಕರು ಮಾಸಾಶನ ಪಡೆಯುತ್ತಿದ್ದಾರೆ.
3 ತಿಂಗಳಿನಿಂದೀಚೆಗೆ ಮಾಸಾಶನಕ್ಕಾಗಿ 10ರಷ್ಟು ಅರ್ಜಿಗಳು ಬಂದಿವೆ.
ಅದನ್ನು ಜನಪದ ಅಕಾಡೆಮಿಗೆ ರವಾನಿಸಲಾಗಿದೆ ಎನ್ನುತ್ತಾರೆ ಇಲಾಖೆಯ ಅಧಿಕಾರಿಗಳು. ಉಡುಪಿ ಜಿಲ್ಲೆಯಲ್ಲೂ ಕೆಲವರು ಅರ್ಜಿ ಪಡೆದಿದ್ದಾರೆ ಎನ್ನುತ್ತಾರೆ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ.
ವಿವಿಧ ಜಾನಪದ ಕಲೆಗಳ ಕಲಾವಿದರ ಪಟ್ಟಿ ಇದ್ದು, ಇವರಿಗೂ ಕಲಾವಿದರ ಪಟ್ಟಿಯಿದ್ದು, ಮಾಸಾಶನ ಲಭ್ಯವಾಗುತ್ತಿದೆ. ಮಾನದಂಡದ ಪ್ರಕಾರ ಇದನ್ನು ಪಡೆಯಲು ಈಗಾಗಲೇ ವೃದ್ಧಾಪ್ಯ ಸೇರಿದಂತೆ ಇತರ ಪಿಂಚಣಿ ಪಡೆಯುವವರು ಅರ್ಹರಲ್ಲ. ಈ ಯಾವುದೇ ಸೌಲಭ್ಯ ಹೊಂದಿರದ ದೈವ ನರ್ತಕರ ಅರ್ಜಿಗಳನ್ನು ಮಾತ್ರ ಮಾಸಾಶನಕ್ಕೆ ಪರಿಗಣಿಸಲಾಗುತ್ತಿದೆ. ಇದನ್ನು ಪಡೆಯಲು 60 ವರ್ಷವಾಗಿರಬೇಕು. ತಹಶೀಲ್ದಾರರಿಂದ ದೃಢೀಕರಣವನ್ನು ಹೊಂದಿರಬೇಕಾಗುತ್ತದೆ.
ಈ ಮಧ್ಯೆ, ದೈವ ನರ್ತಕರು 50 ವರ್ಷ ಬಳಿಕ ನರ್ತನ ಮಾಡಲಾರರು. ಹಾಗಾಗಿ ಮಾಸಾಶನಕ್ಕಿರುವ ವಯೋಮಿತಿಯನ್ನು 50 ವರ್ಷಕ್ಕೆ ಇಳಿಸಬೇಕು ಎನ್ನುವುದು ಹಲವರ ಆಗ್ರಹ. ಈ ಕುರಿತಂತೆ ಸಚಿವರು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳಿಗೆ ಬೇಡಿಕೆಯೂ ದೈವನರ್ತಕರಿಂದ ಸಲ್ಲಿಕೆಯಾಗಿದೆ.
ನಿಯಮಾವಳಿಯಂತೆ 60 ವರ್ಷ ಮೇಲ್ಪಟ್ಟ ದೈವನರ್ತಕರು ಮಾಸಾಶನ ಪಡೆಯಲು ಪ್ರತ್ಯೇಕ ಮಾರ್ಗಸೂಚಿ ಅಗತ್ಯವಿಲ್ಲ. ಜನಪದ ಅಕಾಡೆಮಿಯಡಿ ನೀಡಲಾಗುವ ಕಲಾವಿದರಿಗೆ ನೀಡಲಾಗುತ್ತಿದ್ದು, ಇದೀಗ ದೈವನರ್ತಕರನ್ನು ಸೇರಿಸಲು ಸರಕಾರ ಸೂಚಿಸಿದೆ. ವಯೋಮಿತಿಯನ್ನು 60 ರಿಂದ 55ಕ್ಕೆ ಇಳಿಸುವಂತೆ ಬೇಡಿಕೆ ಇದೆ.
– ಸುನಿಲ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು
“ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷನಾಗಿದ್ದಾಗ ಅವಿಭಜಿತ ದ.ಕ. ಜಿಲ್ಲೆಯ ಮಾಶಾಸನಕ್ಕೆ ಅರ್ಹ 1500ರಷ್ಟು ನೈಜ ದೈವನರ್ತಕರ ಪಟ್ಟಿಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ಸಂದಿಪಾಡªನ ಗೊತ್ತಿದ್ದು, ದೈವಕಲೆಯ ವೇಷಭೂಷಣದೊಂದಿಗೆ ದೈವನರ್ತಕರಾಗಿ ಸೇವೆ ಸಲ್ಲಿಸುವವರಿಗೆ ಮೊದಲು ಸೌಲಭ್ಯ ನೀಡಬೇಕು. ಪ್ರತ್ಯೇಕ “ದೈವಾರಾಧಕರ ಅಕಾಡೆಮಿ’ ಸ್ಥಾಪಿಸಿ, ದಾಖಲೀಕರಣ ಆಗಬೇಕು. ಇದರಿಂದ ಸಂಶೋಧನೆ ಸಾಧ್ಯ’
– ದಯಾನಂದ ಕತ್ತಲಸಾರ್, ನಿಕಟಪೂರ್ವ ಅಧ್ಯಕ್ಷರು, ತುಳು ಸಾಹಿತ್ಯ ಅಕಾಡೆಮಿ
– ಸತ್ಯಾ ಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.