ಕೋವಿಡ್ -19 ಪೀಡಿತರಿಗೆ ಪ್ಲಾಸ್ಮಾ ಚಿಕಿತ್ಸೆ
ಕರ್ನಾಟಕದಲ್ಲೂ ಚಾಲನೆ; ಕೇರಳದಲ್ಲಿ ಈಗಾಗಲೇ ಯಶಸ್ವಿಯಾಗಿರುವ ವಿಧಾನ
Team Udayavani, Apr 26, 2020, 6:15 AM IST
ಬೆಂಗಳೂರು: ಕೋವಿಡ್ -19 ಸೋಂಕು ಪೀಡಿತರಿಗೆ ಹೆಚ್ಚು ಪರಿಣಾಮಕಾರಿ ಎಂದು ಸಾಬೀತಾ ಗಿರುವ ಪ್ಲಾಸ್ಮಾ ಚಿಕಿತ್ಸೆಗೆ ಶನಿವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಈ ಉಪಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಸಚಿವ ಡಾ| ಸುಧಾಕರ್, ರಾಜ್ಯಕ್ಕೆ ಇದು ಐತಿಹಾಸಿಕ ಕ್ಷಣ. ಕೋವಿಡ್ -19 ಪೀಡಿತರಿಗೆ ಪ್ಲಾಸ್ಮಾ ಚಿಕಿತ್ಸೆ ಪರಿ ಣಾಮಕಾರಿಯಾಗುವುದು ಕಂಡುಬಂದಿದೆ.
ಪ್ಲಾಸ್ಮಾ ಚಿಕಿತ್ಸೆಯಿಂದ ಸೋಂಕುಪೀಡಿತರು ಗುಣ ಮುಖರಾದರೆ ಅತ್ಯಂತ ಸಂತೋಷ ಎಂದರು.
ಇದರ ಕ್ಲಿನಿಕಲ್ ಪ್ರಯೋಗ ಆರಂಭವಾಗಿದೆ. ಕೋವಿಡ್‌ನಿಂದ ಗುಣಮುಖರಾದ ವ್ಯಕ್ತಿಯೊಬ್ಬರು ಪ್ಲಾಸ್ಮಾ ನೀಡುವ ಮೂಲಕ ಚಿಕಿತ್ಸೆಗೆ ಸಹಕರಿಸಲು ಮುಂದೆ ಬಂದಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಸಚಿವರು ಹೇಳಿದರು.
ಕೋವಿಡ್ -19ದಿಂದ ಗುಣ ಹೊಂದಿರುವವರು ಚಿಕಿತ್ಸೆಗೆ ಸಹಕರಿಸಬೇಕು. ಇಂಥವರು 2 ವಾರಗಳ ಅಂತರದಲ್ಲಿ ಕನಿಷ್ಠ ಇಬ್ಬರು ಅಥವಾ ಮೂವರಿಗೆ ಪ್ಲಾಸ್ಮಾ ನೆರವು ನೀಡಬಹುದು ಎಂದು ಸಚಿವರು ಮನವಿ ಮಾಡಿಕೊಂಡರು.
ಕೇರಳದಲ್ಲಿ ಯಶಸ್ವಿ
ಪ್ಲಾಸ್ಮಾ ಥೆರಪಿಯು ನೆರೆಯ ಕೇರಳ ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿದೆ. ಹೀಗಾಗಿ ಕರ್ನಾಟಕದಲ್ಲೂ ಅನುಮತಿ ನೀಡುವಂತೆ ಕೋರಿ ಕೇಂದ್ರಕ್ಕೆ ಕರ್ನಾಟಕ ಸರಕಾರ ಮನವಿ ಸಲ್ಲಿಸಿತ್ತು. ಇತ್ತೀಚೆಗಷ್ಟೇ ಕೇಂದ್ರ ಸಾರ್ವಜನಿಕ ಆರೋಗ್ಯ ನಿರ್ದೇಶನಾಲಯವು ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕಾಲಜಿಯ ವೈದ್ಯ ಡಾ| ವಿಶಾಲ್ ರಾವ್ ಅವರಿಗೆ ಪ್ಲಾಸ್ಮಾ ಚಿಕಿತ್ಸೆ ಒದಗಿಸಲು ಅನುಮತಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಪ್ಲಾಸ್ಮಾ ಥೆರಪಿಯನ್ನು ಈ ಹಿಂದೆ ಎಬೋಲಾ ಮತ್ತು ಸ್ವೆ„ನ್ ಫ್ಲೂನಂತಹ ಕಾಯಿಲೆಗಳ ವಿರುದ್ಧ ಯಶಸ್ವಿಯಾಗಿ ಉಪಯೋಗಿಸಲಾಗಿದೆ.
ಏನಿದು ಪ್ಲಾಸ್ಮಾ ಥೆರಪಿ?
ಈಗಾಗಲೇ ಕೋವಿಡ್ -19 ತಗುಲಿ ಗುಣಮುಖರಾಗಿರುವ ವ್ಯಕ್ತಿಗಳ ರಕ್ತದಲ್ಲಿ ಉತ್ಪತ್ತಿ ಯಾಗಿರುವ ಪ್ರತಿಕಾಯ ( ಆ್ಯಂಟಿ ಬಾಡಿ)ಗಳನ್ನು ತೆಗೆದು, ಅವನ್ನು ಹಾಲಿ ಸೋಂಕಿಗೀಡಾಗಿರುವ ರೋಗಿಯ ರಕ್ತಕ್ಕೆ ನೀಡುವುದು. ರೋಗಿಯ ದೇಹ ಸೇರಿದ ಈ ಪ್ರತಿಕಾಯಗಳು ಅಲ್ಲಿ ಹೊಸ ಪ್ರತಿಕಾಯ ಉತ್ಪಾದನೆಯನ್ನು ಹೆಚ್ಚಿಸಿ ಕೋವಿಡ್ -19 ನಿವಾರಣೆಯಲ್ಲಿ ಸಹಕರಿಸುತ್ತವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.