PM Meets Paris Olympians: ಪ್ರಧಾನಿ ಮೋದಿ ಭೇಟಿಯಾದ ಒಲಿಂಪಿಕ್ಸ್ ಪದಕ ವಿಜೇತರು
ಪ್ರಧಾನಿಗೆ ಹಾಕಿ ಸ್ಟಿಕ್, ಆಟಗಾರರು ಸಹಿ ಮಾಡಿದ ಜೆರ್ಸಿಯ ಉಡುಗೊರೆ ಕೊಟ್ಟ ಹಾಕಿ ಟೀಮ್
Team Udayavani, Aug 15, 2024, 6:37 PM IST
ಹೊಸದಿಲ್ಲಿ: ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ಭಾಗಿಯಾಗಿ ತವರಿಗೆ ಆಗಮಿಸಿರುವ ಪದಕ ವಿಜೇತ ಸ್ಪರ್ಧಿಗಳಿಗೆ ಅದ್ಧೂರಿ ಸ್ವಾಗತ ಕೋರಿದ್ದು, ದಿಲ್ಲಿಯ ಕೆಂಪು ಕೋಟೆಯಲ್ಲಿ ಗುರುವಾರ ಜರುಗಿದ ಸ್ವಾತಂತ್ರ್ಯೋತ್ಸವದಲ್ಲಿ ಗಣ್ಯರ ಸಾಲಿನಲ್ಲಿ ಕೂರುವ ಅವಕಾಶ ಪಡೆದ ಒಲಿಂಪಿಕ್ಸ್ ಪದಕ ವಿಜೇತರು ಬಳಿಕ ಪ್ರಧಾನಿ ನಿವಾಸದಲ್ಲಿ ನರೇಂದ್ರ ಮೋದಿಯವರ ಭೇಟಿಯಾಗಿ ಗೌರವ ಸ್ವೀಕರಿಸಿದರು.
ಪ್ರಧಾನಿಗೆ ಜೆರ್ಸಿ, ಹಾಕಿ ಸ್ಟಿಕ್ ಉಡುಗೊರೆ:
ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಒಲಿಂಪಿಕ್ಸ್ ಪದಕ ವಿಜೇತ ಸ್ಪರ್ಧಿಗಳ ದೆಹಲಿಯ ತಮ್ಮ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಹಾಕಿ ತಂಡವನ್ನು ಭೇಟಿಯಾಗಿದ್ದಾರೆ. ಈ ವೇಳೆ ಆಟಗಾರರು ಪ್ರಧಾನಿಗೆ ತಮ್ಮ ಪದಕಗಳ ತೋರಿಸಿ ಜೊತೆಗೆ ಹಾಕಿ ಸ್ಟಿಕ್ ಹಾಗೂ ಆಟಗಾರರು ಸಹಿ ಮಾಡಿರುವ ಜೆರ್ಸಿಯ ಪ್ರಧಾನಿಗೆ ಉಡುಗೊರೆಯಾಗಿ ನೀಡಿದ್ದಾರೆ. ಬಳಿಕ ಒಲಿಂಪಿಕ್ಸ್‌ನ ಶೂಟಿಂಗ್ ವಿಭಾಗದಲ್ಲಿ ಎರಡು ಕಂಚಿನ ಪದಕಗಳ ಗೆದ್ದ ಮನು ಭಾಕರ್, ಮೋದಿಯವರಿಗೆ ಒಲಿಂಪಿಕ್ಸ್‌ನಲ್ಲಿ ಬಳಸಿದ ಪಿಸ್ತೂಲ್ ತೋರಿಸಿ ವಿವರಣೆ ನೀಡಿದ್ದಾರೆ. ಈ ವೇಳೆಯೇ ಸರಬ್ಜೋತ್ ಸಿಂಗ್, ಅಮನ್ ಸೆಹ್ರಾವತ್ ಮತ್ತು ಸ್ವಪ್ನಿಲ್ ಕುಸಾಲೆಯವರು ಕೂಡ ಪ್ರಧಾನಿ ಮೋದಿಯವರ ಭೇಟಿಯಾಗಿ ಪದಕ ತೋರಿಸಿದರು.
ಕೇಂದ್ರ ಸರಕಾರದಿಂದ ಕ್ರೀಡೆಗೆ ಪ್ರೋತ್ಸಾಹ: ಪ್ರಧಾನಿ
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳಿಗೆ ಅಭಿನಂದಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ” ಪ್ಯಾರಿಸ್ ಒಲಿಂಪಿಕ್ಸ್‌ಗೆ ತೆರಳಿದ ಪ್ರತಿಯೊಬ್ಬ ಆಟಗಾರರು ಕೂಡ ಚಾಂಪಿಯನ್. ಕೇಂದ್ರ ಸರಕಾರದಿಂದ ಕ್ರೀಡೆಗೆ ನಿರಂತರ ಪ್ರೋತ್ಸಾಹ ಹಾಗೂ ಕ್ರೀಡೆಯಲ್ಲಿ ಉನ್ನತ ಗುಣಮಟ್ಟದ ಮೂಲ ಸೌಕರ್ಯ ಒದಗಿಸುವ ಭರವಸೆ ನೀಡಿದರು.
VIDEO | PM Modi (@narendramodi) meets Indian Olympic contingent at his residence in Delhi.
(Source: Third Party) pic.twitter.com/K2Gb5dzaCL
— Press Trust of India (@PTI_News) August 15, 2024
ಟೋಕಿಯೊ ಒಲಿಂಪಿಕ್ಸ್‌ಗೆ ಹೋಲಿಸಿದರೆ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರದರ್ಶನ ಸ್ವಲ್ಪ ಕೆಳಮಟ್ಟದಲ್ಲಿದೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತ ಒಂದು ಬೆಳ್ಳಿ ಸೇರಿದಂತೆ ಆರು ಪದಕಗಳನ್ನು ಗೆದ್ದಿತ್ತು. ಶೂಟರ್ ಮನು ಭಾಕರ್ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚಿನ ಪದಕ ಮತ್ತು ನಂತರ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಅವರೊಂದಿಗೆ ಕಂಚಿನ ಪದಕ ಗೆದ್ದರು. ಸ್ವಾತಂತ್ರ್ಯದ ನಂತರ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಇತಿಹಾಸ ನಿರ್ಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.