ವಂಶಾಡಳಿತ ಮಾರಕ;  ಸುದ್ದಿಸಂಸ್ಥೆಯೊಂದಕ್ಕೆ ಪ್ರಧಾನಿ ಮೋದಿ ಸಂದರ್ಶನ

 ಪರಿವಾರವಾದವೇ  ನಕಲಿ ಸಮಾಜವಾದಿಗಳ ಕಾಣಿಕೆ

Team Udayavani, Feb 10, 2022, 7:05 AM IST

ವಂಶಾಡಳಿತ ಮಾರಕ;  ಸುದ್ದಿಸಂಸ್ಥೆಯೊಂದಕ್ಕೆ ಪ್ರಧಾನಿ ಮೋದಿ ಸಂದರ್ಶನ

ಸತತ ಎರಡು ದಿನ ಸಂಸತ್‌ನಲ್ಲಿ ಕಾಂಗ್ರೆಸ್‌ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಬುಧವಾರವೂ ಕಾಂಗ್ರೆಸ್‌ ಸಹಿತ ವಿಪಕ್ಷಗಳ ವಿರುದ್ಧ ವಾಕ್ಸಮರವನ್ನೇ ನಡೆಸಿದ್ದಾರೆ. ಎಎನ್‌ಐ ಸುದ್ದಿ ಸಂಸ್ಥೆಗೆ ಸಂದರ್ಶನ ನೀಡಿರುವ ಅವರು, ಪಂಚರಾಜ್ಯ ಚುನಾವಣೆಯಿಂದ ಹಿಡಿದು, ಇತ್ತೀಚಿನ ಎಲ್ಲ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ್ದಾರೆ.

ವಂಶಾಡಳಿತ
ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವುದೇ ವಂಶಪಾರಂಪರ್ಯ ಆಡಳಿತ. ನೀವು ಜಮ್ಮು ಮತ್ತು ಕಾಶ್ಮೀರದಿಂದ ಹಿಡಿದು ಹರಿಯಾಣ, ಝಾರ್ಖಂಡ್‌, ಉತ್ತರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ವಂಶಾಡಳಿತ ರಾಜಕೀಯ ತುಂಬಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡು ಪಕ್ಷಗಳನ್ನು ಎರಡು ಪ್ರತ್ಯೇಕ ಕುಟುಂಬಗಳು ನಡೆಸುತ್ತಿವೆ.

ನಕಲಿ ಸಮಾಜವಾದಿಗಳು
ನಿಜವಾದ ಸಮಾಜವಾದಿಗಳು ಎಂದಾದರೂ ವಂಶಾಡಳಿತ ರಾಜಕಾರಣಕ್ಕೆ ಅವಕಾಶ ಮಾಡಿಕೊಟ್ಟಿದ್ದರೇ? ಈ ಹಿಂದೆ ಸಮಾಜವಾದಿ ಚಿಂತನೆ ಹೊಂದಿದ್ದ ರಾಮಮನೋಹರ ಲೋಹಿಯ, ಜಾರ್ಜ್‌ ಫೆರ್ನಾಂಡಿಸ್‌ ಅವರು ವಂಶಪಾರಂಪರ್ಯ ಆಡಳಿತ ನಡೆಸಿದ್ದರೇ?    ಬಿಹಾರ ಸಿಎಂ ನಿತೀಶ್‌ ಕುಮಾರ್‌  ಮನೆಯವರು ರಾಜಕೀಯದಲ್ಲಿ ದ್ದಾರೋ? ಇಲ್ಲ. ಆದ್ದರಿಂದ ಇವರೇ ನಿಜವಾದ ಸಮಾಜವಾದಿಗಳು. ಆದರೆ.  ಉತ್ತರ ಪ್ರದೇಶದ ಸಮಾಜವಾದಿ ಪಕ್ಷದಲ್ಲಿ ಒಂದು ಕುಟುಂಬದ 45 ಮಂದಿ ವಿವಿಧ ಹುದ್ದೆಗಳಲ್ಲಿ ಇದ್ದಾರೆ. ಇವರು ನಕಲಿ ಸಮಾಜವಾದಿಗಳು.

ಐದು ರಾಜ್ಯಗಳಲ್ಲೂ ನಮ್ಮದೇ ಗೆಲುವು
ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್‌, ಗೋವಾ ಮತ್ತು ಮಣಿಪುರದಲ್ಲಿ ಸಂಪೂರ್ಣ ಬಹುಮತದೊಂದಿಗೆ ನಾವೇ ಗೆಲ್ಲುತ್ತೇವೆ. ಅವಕಾಶ ಸಿಕ್ಕ ಕಡೆಗಳಲ್ಲಿ ನಾವು ಸ್ಥಿರವಾದ ಆಡಳಿತ ನೀಡಿದ್ದೇವೆ. ಈಗ ಆಡಳಿತ ವಿರೋಧಿ ಅಲೆ ಇಲ್ಲ, ಬದಲಾಗಿ ಆಡಳಿತ ಪರ ಅಲೆ ಇದೆ. ಈ ಅಲೆಯಿಂದಲೇ ಬಿಜೆಪಿ ಚುನಾವಣೆಗಳನ್ನು ಗೆಲ್ಲುತ್ತದೆ.

ಸೋಲಿನಿಂದಲೂ ಪಾಠ
ನಾವು ಚುನಾವಣೆಗಳನ್ನು ಗೆಲ್ಲುತ್ತೇವೆ ಹಾಗೂ ಸೋಲುತ್ತೇವೆ. ನಾವು ಸೋತಾಗ ಬೇರಿನ ಮಟ್ಟವನ್ನು ಸಂಪರ್ಕಿಸಲು ಪ್ರಯತ್ನಿಸುತ್ತೇವೆ. ಗೆದ್ದಾಗ ಜನರ ಮನಸ್ಸುಗಳನ್ನು ಗೆಲ್ಲುತ್ತೇವೆ. ನಮ್ಮಿಂದ ಗೆಲುವನ್ನು ಬೇರೆಯವರು ಕಿತ್ತುಕೊಳ್ಳಲು ಬಿಡದ ಹಾಗೆ ಕೆಲಸ ಮಾಡುತ್ತೇವೆ. ಸೋಲು ಅಥವಾ ಗೆಲುವಿನಲ್ಲೂ ನಾವು ಪಾಠ ಕಲಿಯುತ್ತೇವೆ.

ಸದನದಲ್ಲಿ ಕುಳಿತರೆ ಗೊತ್ತಾಗುತ್ತದೆ
ಸದನದಲ್ಲಿ ಪ್ರತಿಯೊಬ್ಬ ಸಂಸದರು ಕೇಳಿದ ಪ್ರಶ್ನೆಗೂ ನಾವು ಉತ್ತರಿಸುತ್ತೇವೆ. ವಿದೇಶಾಂಗ ಅಥವಾ ರಕ್ಷಣ ಇಲಾಖೆಗೆ ಸಂಬಂಧಿಸಿದ ಪ್ರಶ್ನೆಯಾದರೆ ಸಂಬಂಧಪಟ್ಟ ಸಚಿವರು ನೀಡುತ್ತಾರೆ. ಆದರೆ, ಪ್ರಶ್ನೆ ಕೇಳಿದವರೇ ನಮ್ಮ ಮಾತುಗಳನ್ನು ಕೇಳಿಸಿಕೊಳ್ಳಲು ಸದನದಲ್ಲಿ ಕುಳಿತುಕೊಳ್ಳುವುದಿಲ್ಲ. ಹಾಗಾದಾಗ ನಾವು ಮಾಡುವುದಾದರೂ ಏನು? (ಪರೋಕ್ಷವಾಗಿ ರಾಹುಲ್‌ ಗಾಂಧಿ ಅವರನ್ನು ಉದ್ದೇಶಿಸಿ.)

ದೇಶದ ಸಂಪತ್ತು ವಶ
ಭ್ರಷ್ಟಾಚಾರದಿಂದ ದೇಶಕ್ಕೆ ಮಾರಕವಾಗಿದ್ದು, ಇದರಿಂದ ದೇಶದ ಸಂಪತ್ತು ಸೋರಿ ಹೋಗುತ್ತಿದೆ. ಆದರೆ, ತನಿಖಾ ಸಂಸ್ಥೆಗಳು ಅಡ್ಡದಾರಿಯಲ್ಲಿ ಗಳಿಸಿದವರನ್ನು ಪತ್ತೆ ಹಚ್ಚಿ ಅವರಿಂದ ದೇಶದ ಸಂಪತ್ತನ್ನು ವಶ ಮಾಡಿಕೊಳ್ಳುತ್ತಿವೆ. ತನಿಖಾ ಸಂಸ್ಥೆಗಳ ವಿಚಾರದಲ್ಲಿ ಕೇಂದ್ರ ಸರಕಾರ ಮೂಗು ತೂರಿಸುವುದಿಲ್ಲ. ಚುನಾವಣೆ ಕಾರಣಕ್ಕಾಗಿಯೇ ಈ ದಾಳಿಗಳು ನಡೆಸಲಾಗುತ್ತಿದೆ ಎಂಬ ವಿಪಕ್ಷಗಳ ಆರೋಪವನ್ನು ಒಪ್ಪುವುದಿಲ್ಲ. ಚುನಾವಣೆಯಿಂದಾಗಿಯೇ ಆಗುತ್ತಿದೆ ಎಂದಾದಲ್ಲಿ  ವಿಪಕ್ಷಗಳು ಒಂದು ದೇಶ, ಒಂದು ಚುನಾವಣೆಗೆ ಒಪ್ಪಿಕೊಳ್ಳಲಿ. ಆಗ ಇಂಥ ಆರೋಪಗಳೇ ಇರದು.

ದೇಶದ ರೈತರ ಹಿತಕ್ಕಾಗಿ ಕೃಷಿ ಕಾಯ್ದೆ ತಂದಿದ್ದೆವು
ದೇಶದ ರೈತರ ಹಿತಕ್ಕಾಗಿಯೇ ಮೂರು ಕೃಷಿ ಕಾಯ್ದೆಗಳನ್ನು ತಂದಿದ್ದೆವು. ಆದರೆ, ರಾಷ್ಟ್ರೀಯ ಹಿತಾಸಕ್ತಿಗಾಗಿ  ಆ ಕಾಯ್ದೆಗಳನ್ನು ವಾಪಸ್‌ ಪಡೆದೆವು. ಈಗ ಈ ಕೃಷಿ ಕಾಯ್ದೆಗಳ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ನಾವು ಇಂಥ ಕ್ರಮಗಳನ್ನು ಯಾಕೆ ತೆಗೆದುಕೊಂಡೆವು ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ.

ವಿವಿಧತೆಯಲ್ಲೇ ಏಕತೆ
ನಾವು ಪ್ರಾದೇಶಿಕ ಸಮಸ್ಯೆಗಳತ್ತ ಗಮನ ಕೊಡುವುದಿಲ್ಲ ಎಂಬ ಆರೋಪ ಸುಳ್ಳು. ನಾವು ಎಲ್ಲರನ್ನೂ ಜತೆಯಾಗಿಯೇ ಕರೆದುಕೊಂಡು ಹೋಗುತ್ತೇವೆ.  ವಿವಿಧತೆಯಲ್ಲಿ ಏಕತೆಯೇ ನಮ್ಮ ಮಂತ್ರ. ಆದರೆ, ಕೆಲವರು ಸ್ವಹಿತಾ

ಸಕ್ತಿಗಾಗಿ ಸಲ್ಲದ  ಆರೋಪ ಮಾಡುತ್ತಿದ್ದಾರೆ. ಅಲ್ಲದೆ, ಭಾರತ ದಲ್ಲಿ ಇದೇ ಮೊದಲ ಬಾರಿಗೆ ರಾಜ್ಯವೊಂದರಲ್ಲಿ ದೀರ್ಘಾವಧಿ ವರೆಗೆ ಮುಖ್ಯಮಂತ್ರಿಯಾಗಿದ್ದ ಒಬ್ಬರು, ದೇಶದ ಪ್ರಧಾನಮಂತ್ರಿಯಾಗಿದ್ದಾರೆ. ನನಗೆ ಎಲ್ಲ ರಾಜ್ಯಗಳ ಸ್ಥಳೀಯ ಸಮಸ್ಯೆಗಳು ಗೊತ್ತು.

ಟಾಪ್ ನ್ಯೂಸ್

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.