ಪ್ರಧಾನಿ ಮೋದಿ ಜತೆ ಪರೀಕ್ಷಾ ಪೇ ಚರ್ಚಾ ಸಂವಾದ: ರಾಜ್ಯದಿಂದ 84 ಮಂದಿ ಆಯ್ಕೆ


Team Udayavani, Mar 31, 2022, 7:40 AM IST

ಪ್ರಧಾನಿ ಮೋದಿ ಜತೆ ಪರೀಕ್ಷಾ ಪೇ ಚರ್ಚಾ ಸಂವಾದ: ರಾಜ್ಯದಿಂದ 84 ಮಂದಿ ಆಯ್ಕೆ

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಕಲಿಕಾ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎ. 1ರಂದು ವಿದ್ಯಾರ್ಥಿಗಳೊಂದಿಗೆ “ಪರೀಕ್ಷಾ ಪೇ ಚರ್ಚಾ’ ಸಂವಾದ ನಡೆಸಲಿದ್ದಾರೆ. ಅದರಲ್ಲಿ ದೇಶವಷ್ಟೇ ಅಲ್ಲ ವಿದೇಶಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಕೂಡ ಭಾಗವಹಿಸಲಿದ್ದಾರೆ.

ರಾಜ್ಯದಿಂದ ವಿವಿಧ ಜಿಲ್ಲೆಗಳ 60 ವಿದ್ಯಾರ್ಥಿಗಳು, 12 ಜನ ಪೋಷಕರು ಮತ್ತು 12 ಮಂದಿ ಶಿಕ್ಷಕರು ಸೇರಿದಂತೆ ಒಟ್ಟು 84 ಮಂದಿ ಮೋದಿ ಅವರ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಮೈಸೂರಿನ ಜವಾಹರ್‌ ನವೋದಯ ವಿದ್ಯಾಲಯದ ವಿದ್ಯಾರ್ಥಿ ಎಂ.ಬಿ. ತರುಣ್‌ ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರೀಕ್ಷೆ ಸಂಬಂಧಿಸಿದಂತೆ ಪ್ರಶ್ನೆ ಕೇಳಿರುವುದು ವಿಶೇಷ. ಮಂಡ್ಯ ಮೂಲದ ಎಂ.ಬಿ. ತರುಣ್‌ ಮೈಸೂರಿನ ಜವಾಹರ್‌ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಯಲ್ಲಿ ಓದುತ್ತಿದ್ದಾನೆ ಎಂದು ಕೇಂದ್ರ ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

15.7 ಲಕ್ಷ ವಿದ್ಯಾರ್ಥಿಗಳು ಭಾಗಿ
ಮಕ್ಕಳಲ್ಲಿನ ಪರೀಕ್ಷಾ ಆತಂಕದ ಬಗ್ಗೆMY GOV ವೇದಿಕೆಯ ಮೂಲಕ ಡಿ. 28, 2021ರಿಂದ ಫೆ. 3ರ ವರೆಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಇದರಲ್ಲಿ 15.7 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಂಸಾ ಪತ್ರ ಕೂಡ ನೀಡಲಾಗುತ್ತದೆ. ಜತೆಗೆ “ಪರೀಕ್ಷಾ ಯೋಧರು” ವಿಶೇಷ ಪುಸ್ತಕ ಹೊಂದಿರುವ ಪರೀಕ್ಷಾ ಪೇ ಚರ್ಚಾ ಕಿಟ್ಟನ್ನು ಕೂಡ ವಿತರಣೆ ಮಾಡಲಾಗುತ್ತದೆ.

ಇದನ್ನೂ ಓದಿ:ವಿಧಾನ ಮಂಡಲ ಅಧಿವೇಶನ ಅನಿರ್ಧಿಷ್ಠಾವಧಿಗೆ ಮುಂದೂಡಿಕೆ

ರಾಜಭವನದಲ್ಲಿ ಕಾರ್ಯಕ್ರಮ
ಪ್ರಧಾನಿ ನರೇಂದ್ರ ಮೋದಿ ಅವರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಎ. 1ರ ಬೆಳಗ್ಗೆ 11 ಗಂಟೆಗೆ ರಾಜ್ಯಭವನದಲ್ಲಿ ನಡೆಯಲಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್‌ ಹೇಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಿಂದ ಓರ್ವ ವಿದ್ಯಾರ್ಥಿಗೆ ಮಾತ್ರ ಪ್ರಶ್ನೆ ಕೇಳುವ ಅವಕಾಶ ಸಿಕ್ಕಿದ್ದು, ಮೈಸೂರಿನ ಜವಾಹರ್‌ ನವೋದಯ ವಿದ್ಯಾಲಯದ 11ನೇ ತರಗತಿಯ ವಿದ್ಯಾರ್ಥಿ ತರುಣ್‌ ಪ್ರಶ್ನೆ ಕೇಳುವುದಕ್ಕೆ ಆಯ್ಕೆಯಾದ ವಿದ್ಯಾರ್ಥಿಯಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಪರೀಕ್ಷಾ ಭಯ ದೂರ
ಯುವ ಜನತೆಗೆ ಒತ್ತಡ ರಹಿತ ವಾತಾವರಣ ನಿರ್ಮಿಸಲು ಪರೀಕ್ಷಾ ಯೋಧರು ಅಭಿಯಾನವನ್ನು ಕೈಗೆತ್ತಿಕೊಳ್ಳಲಾಗಿದೆ. ಪರೀಕ್ಷೆ ವೇಳೆ ವಿದ್ಯಾರ್ಥಿಗಳಲ್ಲಿ ಒತ್ತಡ ಮತ್ತು ಆತಂಕ ಇದ್ದೇ ಇರುತ್ತದೆ. ಈ ಸಂದರ್ಭ ನೇರವಾಗಿ ಪ್ರಧಾನಿಗಳೇ ಮಕ್ಕಳೊಂದಿಗೆ ಚರ್ಚೆ ನಡೆಸುವುದರಿಂದ ಮಕ್ಕಳಲ್ಲಿ ಪರೀಕ್ಷಾ ಭಯ ದೂರವಾಗಲಿದೆ. ವ್ಯಕ್ತಿತ್ವ ವಿಕಸನಕ್ಕೂ ಕಾರಣವಾಗಲಿದೆ ಎಂದವರು ಹೇಳಿದ್ದಾರೆ.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

school

KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.