ಟ್ವಿಟರ್‌ನಲ್ಲಿ ಪ್ರಧಾನಿ ಮೋದಿ ಎರಡನೇ ಅತ್ಯಂತ ಪ್ರಭಾವಶಾಲಿ ವ್ಯಕ್ತಿ
ಇಂಗ್ಲೆಂಡ್‌ನ ಬ್ರಾಂಡ್‌ವಾಚ್ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಉಲ್ಲೇಖ
Team Udayavani, Nov 11, 2021, 10:15 PM IST
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ, ಟ್ವಿಟರ್‌ನಲ್ಲಿ ಪ್ರಸಕ್ತ ವರ್ಷದ ಎರಡನೇ ಅತಿ ಪ್ರಭಾವಿ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಂಗ್ಲೆಂಡ್‌ನ ಗ್ರಾಹಕ ಬೌದ್ಧಿಕ ಸಮೀಕ್ಷಾ ಸಂಸ್ಥೆಯಾದ ಬ್ರಾಂಡ್‌ವಾಚ್, ಟ್ವಿಟರ್‌ನಲ್ಲಿ ಸಕ್ರಿಯವಾಗಿರುವ ಜಾಗತಿಕ ವ್ಯಕ್ತಿಗಳ ಬಗ್ಗೆ ಸಮೀಕ್ಷೆ ನಡೆಸಿ, ಟ್ವಿಟರ್‌ನ ಮೂಲಕ ಜನಸಾಮಾನ್ಯರ ಮೇಲೆ ಪ್ರಭಾವ ಬೀರುವಂಥ ವಿಶ್ವದ 50 ವ್ಯಕ್ತಿಗಳ ಪಟ್ಟಿಯನ್ನು ತಯಾರಿಸಿದೆ. ಶೇ. 70ರಷ್ಟು ಜನರು ಇವರನ್ನು, ಇವರ ಆಡಳಿತ ವೈಖರಿಯನ್ನು ಮೆಚ್ಚಿಕೊಂಡಿರುವುದಾಗಿ ಆ ಸಮೀûಾ ವರದಿಯಲ್ಲಿ ಹೇಳಲಾಗಿತ್ತು. ಅದರ ಬೆನ್ನಲ್ಲೇ, ಟ್ವಿಟರ್‌ನಲ್ಲೂ ಅವರು ಹೆಚ್ಚು ಪ್ರಭಾವಿ ಎಂಬ ವಿಚಾರ ಪ್ರಕಟವಾಗಿದೆ.
ಟ್ವಿಟರ್‌ನ ಪ್ರಭಾವಿಗಳ ಪಟ್ಟಿ ವಿಚಾರಕ್ಕೆ ಬರುವುದಾದರೆ, ಮೋದಿಯವರು ಈ ಪಟ್ಟಿಯಲ್ಲಿ ಅಮೆರಿಕದ ಅಧ್ಯಕ್ಷ ಜೊ ಬೈಡನ್, ಯು.ಕೆ. ಪ್ರಧಾನಿ ಬೋರಿಸ್ ಜಾನ್ಸನ್, ಕೆನಡಾದ ಪ್ರಧಾನಿ ಜಸ್ಟಿನ್ ಟ್ರಾಡ್ಯು ಹಾಗೂ ಜರ್ಮನಿಯ ಪ್ರಧಾನಿ ಏಂಜೆಲಾ ಮಾರ್ಕೆಲ್ ಅವರನ್ನು ಹಿಂದಿಕ್ಕಿದ್ದಾರೆ.
@narendramodi ಎಂಬ ಟ್ವಿಟರ್ ಹ್ಯಾಂಡಲ್‌ನಡಿ ಟ್ವೀಟ್ ಮಾಡುವ ಮೋದಿ, ಈವರೆಗೆ 7.25 ಕೋಟಿ ಫಾಲೋವರ್‌ಗಳನ್ನು ಹೊಂದಿದ್ದಾರೆ.
35ನೇ ಸ್ಥಾನದಲ್ಲಿ ಸಚಿನ್
ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮತ್ತೂಬ್ಬ ಭಾರತೀಯರೆಂದರೆ ಅವರು ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್. ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕರೂ ಆಗಿರುವ ಅವರು ಪಟ್ಟಿಯ 35ನೇ ಸ್ಥಾನದಲ್ಲಿದ್ದಾರೆ. ರಾಜ್ಯಸಭಾ ಸದಸ್ಯರಾಗಿದ್ದ ಅವರು, 2013ರಿಂದ ದಕ್ಷಿಣ ಏಷ್ಯಾದಲ್ಲಿ ಯೂನಿಸೆಫ್ನ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ : ಮುಂಬಯಿ : 6 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಸಹಿತ ನೈಜೀರಿಯನ್ ಪ್ರಜೆಯ ಬಂಧನ
ಟ್ವಿಟರ್‌ನ ಟಾಪ್ 10 ಪ್ರಭಾವಿ ವ್ಯಕ್ತಿಗಳು
1. ಟೇಲರ್ ಸ್ವಿಫ್ಟ್ ಅಮೆರಿಕ ಪಾಪ್ ಗಾಯಕಿ
2. ನರೇಂದ್ರ ಮೋದಿ ಭಾರತ ಪ್ರಧಾನಿ
3. ಕ್ಯಾಟಿ ಪೆರ್ರಿ ಅಮೆರಿಕ ಪಾಪ್ ಗಾಯಕಿ
4. ಎಲಾನ್ ಮಸ್ಕ್ ಅಮೆರಿಕ ಉದ್ಯಮಿ
5. ಬರಾಕ್ ಒಬಾಮ ಅಮೆರಿಕ ಮಾಜಿ ರಾಷ್ಟ್ರಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.