ಸಿಎಂಗೆ ಪೊಲೀಸ್‌ ಪತ್ರ! 25 ಬೇಡಿಕೆ ಈಡೇರಿಸಲು 95 ಸಾವಿರ ಸಿಬಂದಿ ಓಲೆ


Team Udayavani, Jan 27, 2020, 7:00 AM IST

police-patra

ಬೆಂಗಳೂರು: ಪೊಲೀಸರು ಹಾಗೂ ಸರಕಾರದ ನಡುವಿನ ಆಂತರಿಕ ಸಂಘರ್ಷ ಗುಪ್ತಗಾಮಿನಿಯಂತೆ ಹಾಗೆಯೇ ಮುಂದುವರಿದಿದೆ. ಹಿಂದೊಮ್ಮೆ ತಮ್ಮ ಬೇಡಿಕೆ ಈಡೇರಿಕೆಗೆ ಬಹಿರಂಗವಾಗಿ ಬೀದಿಗಿಳಿಯಲು ಇನ್ನೇನು ನಿರ್ಧರಿಸಿದ್ದ ಪೊಲೀಸರು ಈಗ ಲಿಖೀತ ಮನವಿ ರೂಪದಲ್ಲಿ ಬೇಡಿಕೆ ಹಾಗೂ ಅಸಮಾಧಾನವನ್ನು ಹೊರ ಹಾಕಿದ್ದಾರೆ.

ರಾಜ್ಯ ಸರಕಾರ ಎಡಿಜಿಪಿ ರಾಘವೇಂದ್ರ ಔರಾದ್ಕರ್‌ ವರದಿ ಜಾರಿಗೊಳಿಸಿ ಪೊಲೀಸರ ಎಲ್ಲ ಬೇಡಿಕೆಗಳನ್ನು ಈಡೇರಿಸಿದೆ ಎಂದು ಹೇಳಿಕೊಳ್ಳುತ್ತಿದೆ. ಆದರೆ ಪೊಲೀಸರು ತಮ್ಮ ಬೇಡಿಕೆಗಳಿಗಾಗಿ ರಾಜ್ಯ ಸರಕಾರದ ವಿರುದ್ಧ ಬಹಿರಂಗವಾಗಿ ಪ್ರತಿಭಟನೆ ಹಾಗೂ ಬೇಡಿಕೆಗಳನ್ನು ಸಲ್ಲಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ 25 ಪ್ರಮುಖ ಬೇಡಿಕೆಗಳ ಪಟ್ಟಿಯನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸುಮಾರು 95 ಸಾವಿರ ಪೊಲೀಸರ ಸಹಿ ಇದೆ ಎಂದು ಹೇಳಿಕೊಳ್ಳುವ “ಪೊಲೀಸರ ಹೆಸರಿನ’ ಪತ್ರದ ಮೂಲಕ ಕಳುಹಿಸಿಕೊಟ್ಟಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಪೊಲೀಸರ ವೇತನ ಹೆಚ್ಚಳ ಹಾಗೂ ಇತರ ಬೇಡಿಕೆಗಳ ಕುರಿತು ಸಮಗ್ರ ಅಧ್ಯಯನ ನಡೆಸಿ ಎಡಿಜಿಪಿ ರಾಘವೇಂದ್ರ ಔರಾದ್ಕರ್‌ ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಿದ್ದರು. ಆದರೆ ಆ ವರದಿಯನ್ನು ಕಾಂಗ್ರೆಸ್‌ ಸರಕಾರ, ಅನಂತರ ಬಂದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರ ಜಾರಿಗೊಳಿಸುವ ಪ್ರಯತ್ನ ಮಾತ್ರ ಮಾಡಿತ್ತು. ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಸರಕಾರ ಔರಾದ್ಕರ್‌ ವರದಿ ಜಾರಿಗೊಳಿಸಿದರೂ ಎಲ್ಲ ವರ್ಗಗಳ ಪೊಲೀಸರಿಗೆ ಅನ್ವಯ ಆಗಲಿಲ್ಲ ಎಂಬ ಅಳಲನ್ನು ಅವರು ತೋಡಿಕೊಂಡಿದ್ದರು. ಆದರೆ ತಮಗಾದ ಅಸಮಾ
ಧಾನವನ್ನು ಬಹಿರಂಗವಾಗಿ ಹೇಳಿಕೊಳ್ಳಲು ಅವಕಾಶವಿಲ್ಲದ ಕಾರಣ ಪೊಲೀಸರು ಮುಖ್ಯಮಂತ್ರಿಗೆ ಪತ್ರದ ಮೂಲಕ ಬೇಡಿಕೆ ಜತೆಗೆ ತಮಗಾಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಆಗ್ರಹಿಸಿದ್ದಾರೆ ಎಂದು
ಹೇಳಲಾಗಿದೆ.

ಪೊಲೀಸರು ಬರೆದ ಪತ್ರದಲ್ಲಿ ಸಿಎಂ ಸುಮಾರು 40-45 ನಿಮಿಷಗಳ ಕಾಲ ಸಮಾಧಾನದಿಂದ ತಾವೇ ಖುದ್ದಾಗಿ ಓದಬೇಕೆಂದು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

5 ಸಾವಿರ ಕೋಟಿ ಮೀಸಲಿಗೆ ಮನವಿ
ಪ್ರಮುಖವಾಗಿ ಎಡಿಜಿಪಿ ರಾಘವೇಂದ್ರ ಔರಾದ್ಕರ್‌ ವರದಿಯನ್ನು ಸಂಪೂರ್ಣ ಜಾರಿಗೊಳಿಸಲು ಕನಿಷ್ಠ 5 ಸಾವಿರ ಕೋಟಿ ರೂಪಾಯಿ ಬಜೆಟ್‌ನಲ್ಲಿ ಮೀಸಲಿಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಔರಾದ್ಕರ್‌ ವರದಿಯಲ್ಲಿ ಎಎಸ್‌ಐ, ಎಚ್‌ಸಿ, ಪಿಸಿ ಸಹಿತ ಕೆಳ ಹಂತದ ಪೊಲೀಸ್‌ ಸಿಬಂದಿ ಮೂಲ ವೇತನದಲ್ಲಿ ಶೇ. 30ರಿಂದ 35ರಷ್ಟು ವೇತನ ಹೆಚ್ಚಳ ಮಾಡಬೇಕು ಎಂದು ಶಿಫಾರಸು ಮಾಡಲಾಗಿತ್ತು. ಅದರಂತೆ ನಡೆದುಕೊಳ್ಳಬೇಕೆಂದು ಆಗ್ರಹಿಸಲಾಗಿದೆ.

ಬೇಡಿಕೆಗಳು ಏನು?
– ಪೊಲೀಸ್‌ ಕಾನ್‌ಸ್ಟೆàಬಲ್‌ ಮತ್ತು ಹೆಡ್‌ ಕಾನ್‌ಸ್ಟೆàಬಲ್‌ (ಎಚ್‌ಸಿ)ಗಳಿಗೆ ವಾರದ ರಜೆಯ ಬದಲು 200 ರೂ. ನೀಡುವ ಭತ್ತೆ ವ್ಯವಸ್ಥೆಯನ್ನು ಶಾಶ್ವತವಾಗಿ ರದ್ದುಗೊಳಿಸಿ, ಆಂಧ್ರ ಪ್ರದೇಶ ಮಾದರಿಯಲ್ಲಿ ಕಡ್ಡಾಯ ವಾರದ ರಜೆ ನೀಡುವ ನಿರ್ಧಾರ ಪ್ರಕಟಿಸಬೇಕು.

– ಕಾನ್‌ಸ್ಟೆàಬಲ್‌ನಿಂದ ಪಿಎಸ್‌ಐವರೆಗೂ ನೀಡುವ ವಿಶೇಷ ಕಿಟ್‌ ಭತ್ತೆಯನ್ನು 40 ರೂ. ಗಳಿಂದ 500 ರೂ.ಗೆ ಏರಿಸಬೇಕು. ಸಾರಿಗೆ ಭತ್ತೆಯನ್ನು 600 ರೂ.ಗಳಿಂದ 2 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು.

– 2ನೇ ಹಾಗೂ 4ನೇ ಶನಿವಾರ ಪೊಲೀಸರಿಗೆ ಯಾವುದೇ ರಜೆ ದೊರೆಯದಿರುವುದರಿಂದ ವಾರ್ಷಿಕ ಒಂದು ತಿಂಗಳ ಹೆಚ್ಚುವರಿ ವೇತನ ನೀಡಬೇಕು. ಪೊಲೀಸರಿಗೆ ರಜೆ ನೀಡುವ ವ್ಯವಸ್ಥೆಯನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮಾದರಿಯಲ್ಲಿ ತಂತ್ರಾಂಶ ಮೂಲಕ ಜಾರಿಗೊಳಿಸಬೇಕು.

– ಪೊಲೀಸರಿಗೆ ನೀಡುವ ವಾರದ ರಜೆ ಭತ್ತೆ, ಸಮವಸ್ತ್ರ, ಉಚಿತ ಪಡಿತರ ಬದಲಿ ನೀಡುವ ಭತ್ತೆ, ವಿಶೇಷ ಕಿಟ್‌, ವೈದ್ಯಕೀಯ ಭತ್ತೆಗಳು ಪ್ರತಿ ಎರಡು ವರ್ಷಕ್ಕೊಮ್ಮೆ ನಿಯಮಿತವಾಗಿ ಹೆಚ್ಚಳವಾಗುವಂತೆ ಸೂಕ್ತ ನಿಯಮಗಳನ್ನು ರೂಪಿಸಬೇಕು.

– ಪೊಲೀಸ್‌ ಸಿಬಂದಿ ಹಾಗೂ ಅವರ ಕುಟುಂಬದವರಿಗೆ ವರ್ಷದಲ್ಲಿ ಒಂದು ತಿಂಗಳು ರೈಲು ಹಾಗೂ ಬಸ್‌ನಲ್ಲಿ ಉಚಿತ ಪ್ರವಾಸ ಕೈಗೊಳ್ಳಲು ಅವಕಾಶ ಕಲ್ಪಿಸಬೇಕು.

– ಪೊಲೀಸ್‌ ಸಿಬಂದಿಗೆ ಉಚಿತ್‌ ಬಸ್‌ ಪಾಸ್‌ ವ್ಯವಸ್ಥೆ ಮಾಡಬೇಕು. ಪೊಲೀಸ್‌ ಸಿಬಂದಿ ದಿನಕ್ಕೆ 8 ಗಂಟೆ ಮಾತ್ರ ಕೆಲಸ ಮಾಡಲು ಸೂಕ್ತ ನಿಯಮಗಳನ್ನು ರೂಪಿಸಿ, 8 ಗಂಟೆಗಳಿಗಿಂತಲೂ ಹೆಚ್ಚಿನ ಅವಧಿ ಕೆಲಸ ಮಾಡಿದರೆ, ಪ್ರತಿ ಗಂಟೆಗೂ ಕನಿಷ್ಠ 500 ರೂ. ಭತ್ತೆಯನ್ನು ನೀಡುವಂತೆ ಆರ್ಥಿಕ ಇಲಾಖೆಯಿಂದ ಸೂಕ್ತ ಆದೇಶ ಹೊರಡಿಸಲು ಕ್ರಮ ಕೈಗೊಳ್ಳಬೇಕು.

- ಶಂಕರ ಪಾಗೋಜಿ

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.