Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ
ದೇಶಕ್ಕಾಗಿ ಎಲ್ಲರೂ ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಿ, ಉಡುಪಿಯ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಕೆ.ಎಸ್. ಗಂಗಣ್ಣನವರ್
Team Udayavani, Oct 22, 2024, 2:09 AM IST
ಉಡುಪಿ: ಹುತಾತ್ಮರ ತ್ಯಾಗ, ಬಲಿದಾನಗಳು ದೇಶದ ಅಖಂಡತೆ ಮತ್ತು ಸಾರ್ವಭೌಮತೆಯನ್ನು ಎತ್ತಿ ಹಿಡಿಯಲು ಕಾರಣವಾಗಿದೆ ಎಂದು ಜಿಲ್ಲಾ ಸತ್ರ ನ್ಯಾಯಾಧೀಶರಾದ ಕೆ.ಎಸ್. ಗಂಗಣ್ಣನವರ್ ಹೇಳಿದರು.
ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಪರೇಡ್ ಮೈದಾನದಲ್ಲಿ ಪೊಲೀಸ್ ಹುತಾತ್ಮ ದಿನದ ಅಂಗವಾಗಿ ಹುತಾತ್ಮ ಸ್ಮಾರಕಕ್ಕೆ ಸೋಮವಾರ ಪುಷ್ಪಗುಚ್ಛ ಅರ್ಪಿಸಿ ಮಾತನಾಡಿ ದೇಶವೆಂದರೆ ಕೇವಲ ಭೌಗೋಳಿಕ ವಸ್ತುಗಳಿಂದ ಆಗಿರುವಂಥದ್ದಲ್ಲ. ಬದಲಾಗಿ ಅದು ಎಲ್ಲ ರೀತಿಯ ಮಾನವ, ಪ್ರಾಣಿ ಹಾಗೂ ಸಸ್ಯ ಸಂಕುಲಗಳನ್ನು ಒಳಗೊಂಡ ವ್ಯವಸ್ಥೆ. ಈ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ಬಲಿಕೊಟ್ಟ ಹುತಾತ್ಮರ ಬಲಿದಾನಗಳನ್ನು ನಾವು ನೆನೆದುಕೊಂಡು ಅದರ ಮೂಲಕ ದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯ ಪ್ರತೀಕವಾಗಬೇಕು. ದೇಶಕ್ಕಾಗಿ ಎಲ್ಲ ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ. ಮಾತನಾಡಿ, 1959ರ ಅ.21 ರಂದು ಲಡಾಕ್ ಬಳಿಯಲ್ಲಿ ಭಾರತ ಹಾಗೂ ಚೀನದ ಸೈನಿಕರ ಮಧ್ಯೆ ನಡೆದ ಗುಂಡಿನ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧರು ಮೃತಪಟ್ಟಿದ್ದರು. ಅಂದಿನಿಂದ ದೇಶಾದ್ಯಂತ ಪೊಲೀಸ್ ಸಿಬಂದಿಯ ಗೌರವಾರ್ಥ ಪೊಲೀಸ್ ಹುತಾತ್ಮ ದಿನ ಆಚರಿಸಲಾಗುತ್ತಿದೆ. ಒಂದು ವರ್ಷದಲ್ಲಿ ದೇಶದಲ್ಲಿ 216 ಪೊಲೀಸ್ ಅಧಿಕಾರಿಗಳು ಹಾಗೂ ಸಿಬಂದಿ ಕರ್ತವ್ಯದ ವೇಳೆ ಪ್ರಾಣಾರ್ಪಣೆ ಮಾಡಿದ್ದಾರೆ. ಅದರಲ್ಲಿ ಕರ್ನಾಟಕದ ಐದು ಮಂದಿ ಅಧಿಕಾರಿಗಳು ಮತ್ತು ಸಿಬಂದಿ ಸೇರಿದ್ದಾರೆ ಎಂದರು.
ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾ ಕುಮಾರಿ, ಕರಾವಳಿ ಕಾವಲು ಪೊಲೀಸ್ ಪಡೆಯ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಹೆಚ್ಚುವರಿ ಎಸ್‌ಪಿಗಳಾದ ಎಸ್.ಟಿ. ಸಿದ್ದಲಿಂಗಪ್ಪ, ಪಿ.ಎ. ಹೆಗ್ಡೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್. ಲಕ್ಷ್ಮಣ್ ಭೇಟಿ
Kundapura: ಬಾವಿಗೆ ಬಿದ್ದು ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.