Karnataka poll: ಉಡುಪಿ ನಗರದಲ್ಲಿ ಪಥಸಂಚಲನ
Team Udayavani, May 8, 2023, 7:25 AM IST
ಉಡುಪಿ: ಭಯಮುಕ್ತ ಚುನಾವಣೆ ಹಾಗೂ ಮತದಾರರಲ್ಲಿ ಆತ್ಮವಿಶ್ವಾಸ ಮೂಡಿಸಲು ಪೊಲೀಸ್ ಇಲಾಖೆ ವತಿಯಿಂದ ರವಿವಾರ ಉಡುಪಿ ನಗರದಲ್ಲಿ ಪಥ ಸಂಚಲನ ನಡೆಸಲಾಯಿತು.
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ನೇತೃತ್ವದಲ್ಲಿ ಬನ್ನಂಜೆ ನಾರಾಯಣ ಗುರು ಸಭಾ ಭವನದಿಂದ ಆರಂಭ ಗೊಂಡ ಪಥ ಸಂಚಲನ ಸಿಟಿ ಬಸ್ ನಿಲ್ದಾಣ, ಸರ್ವಿಸ್ ನಿಲ್ದಾಣ, ಕೆ.ಎಂ.ಮಾರ್ಗದ ಮೂಲಕ ಸಾಗಿ ಶೋಕಾ ಮಾತಾ ಚರ್ಚ್ ಎದುರು ಸಮಾಪನಗೊಂಡಿತು.
ಪಥಸಂಚಲನದಲ್ಲಿ ಸಶಸ್ತ್ರ ಪಡೆ, ಅರೆಸೇನಾ ಪಡೆ, ತಮಿಳುನಾಡು, ಮಹಾರಾಷ್ಟ್ರ ಹಾಗೂ ಉಡುಪಿ ಪೊಲೀಸರು ಪಾಲ್ಗೊಂಡಿದ್ದರು.
ಚುನಾವಣೆ ಹಿನ್ನೆಲೆಯಲ್ಲಿ ಭದ್ರತೆ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ. ಮುಕ್ತ, ನಿಟ್ನೇತಿ ಹಾಗೂ ನ್ಯಾಯ ಸಮ್ಮತವಾಗಿ ಮತದಾನ ಮಾಡಲು ಪೊಲೀಸ್ ಇಲಾಖೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದರು.
ಪ್ರಜಾಪ್ರಭುತ್ವದ ಹಬ್ಬವಾಗಿರುವ ಮತದಾನದಲ್ಲಿ ಎಲ್ಲರೂ ಮುಕ್ತವಾಗಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ಪಥಸಂಚಲನ ನಡೆಸಲಾಗಿದೆ. ಇಲಾಖೆ ಈ ಸಂಬಂಧ ಯಾವುದೇ ಸಮಸ್ಯೆಗಳನ್ನು ಎದುರಿಸಲು ಸಿದ್ಧ ವಾಗಿದೆ ಎಂದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿ ಕಾರಿ ಎಸ್.ಟಿ.ಸಿದ್ಧಲಿಂಗಪ್ಪ, ಡಿವೈಎಸ್ಪಿ ದಿನಕರ್ ಪಿ.ಕೆ., ಉಡುಪಿ ಪೊಲೀಸ್ ನಿರೀಕ್ಷಕ ಮಂಜಪ್ಪ ಡಿ.ಆರ್., ಬ್ರಹ್ಮಾವರ ವೃತ್ತ ನಿರೀಕ್ಷಕ ದಿವಾಕರ ಪಿ.ಎಂ., ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ ಟಿ.ವಿ. ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ
RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ
Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!
Mourning: ಮನಮೋಹನ್ ಸಿಂಗ್ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ
Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್ ಆಸ್ಪತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.