Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
ವಿರೋಧಿಗಳ ಸದೆಬಡೆಯಬೇಕೆಂದು ಅಧಿಕಾರ ದುರುಪಯೋಗ: ಕೇಂದ್ರ ಸಚಿವ, ಭದ್ರಾವತಿಯ ವಿಐಎಸ್‌ಎಲ್ ಪುನಶ್ಚೇತನಕ್ಕೆ ಡಿಪಿಆರ್
Team Udayavani, Dec 24, 2024, 6:45 AM IST
ಹಾಸನ: ರಾಜ್ಯದ ಪೊಲೀಸ್ ವ್ಯವಸ್ಥೆ ಇಡೀ ದೇಶಕ್ಕೆ ಮಾದರಿ ಆಗಿತ್ತು. ಈಗ ಕರ್ನಾಟಕ ಪೊಲೀಸರ ಘನತೆಯನ್ನು ಕಾಂಗ್ರೆಸ್ಸಿನವರು ಸರ್ವನಾಶ ಮಾಡಲು ಹೊರಟಿದ್ದಾರೆ. ಪೊಲೀಸರ ಗೌರವ ಮಣ್ಣುಪಾಲು ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್‌ನವರು ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರ ಜತೆ ಮಾತನಾಡಿ, ಸಿ.ಟಿ. ರವಿ ಜನಪ್ರತಿನಿಧಿ. ಅವರನ್ನು ರಾತ್ರಿಯೆಲ್ಲಾ ಸುತ್ತಿಸಬೇಕಿತ್ತಾ? ಇದರ ಆವಶ್ಯಕತೆ ಏನಿತ್ತು? ಇದಕ್ಕೆಲ್ಲ ನಿರ್ದೇಶಕರು ಯಾರು ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಬಿಜೆಪಿ ಸ್ನೇಹಿತರು ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡಿದರೆ ಎಲ್ಲ ಅಧಿಕಾರಿಗಳು ಸಸ್ಪೆಂಡ್ ಆಗುತ್ತಾರೆ. ಮಂತ್ರಿಯೊಬ್ಬರ ಚಿತಾವಣೆಯಿಂದ ಯಾವ ಪೊಲೀಸ್ ಅಧಿಕಾರಿಗಳು ರವಿಗೆ ಮಾನಸಿಕ ಹಿಂಸೆ ಕೊಟ್ಟಿದ್ದಾರೋ ಅವರು ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ನಾನು ಸಂಪೂರ್ಣವಾಗಿ ಪೊಲೀಸ್ ಇಲಾಖೆಗೆ ದೋಷ ಕೊಡಲು ಹೋಗುವುದಿಲ್ಲ. ಆದರೆ ಕೆಲವು ಮಂತ್ರಿಗಳು ಆಯ್ದ ಪೊಲೀಸ್ ಅಧಿಕಾರಿಗಳಿಗೆ ಡೈರೆಕ್ಷನ್ ಕೊಡುವ ಮೂಲಕ ಇಲಾಖೆಯಲ್ಲಿ ಕಾನೂನು ಬಾಹಿರ ತೀರ್ಮಾನಗಳಾಗುತ್ತಿವೆ. ತಮಗೆ ಬೇಕಾದಂತೆ ಕೇಸ್ ಬುಕ್ ಮಾಡುತ್ತಿದ್ದಾರೆ. ವಿರೋಧಿಗಳನ್ನು ಸದೆಬಡೆಯಬೇಕೆಂದು ಅಧಿಕಾರ ದುರುಪಯೋಗ, ಕಾನೂನು ಉಲ್ಲಂಘನೆ ಸರಕಾರದಿಂದಲೇ ಆಗುತ್ತಿದೆ ಎಂದು ಆರೋಪಿಸಿದರು.
ವಿಐಎಸ್‌ಎಲ್ ಪುನಶ್ಚೇತನಕ್ಕೆ ಡಿಪಿಆರ್: ಸಚಿವ ಎಚ್‌ಡಿಕೆ
ಭದ್ರಾವತಿಯ ವಿಐಎಸ್‌ಎಲ್ ಪುನಶ್ಚೇತನಕ್ಕೆ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಹೊಳೆನರಸೀಪುರ ತಾಲೂಕು ಹರದನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದೇಶದ ವಿವಿಧ ಭಾಗಗಳಲ್ಲಿರುವ ಉಕ್ಕು ಕಾರ್ಖಾನೆಗಳನ್ನು 1.30 ಲಕ್ಷ ಕೋಟಿ ರೂ. ವೆಚ್ಚದಲ್ಲಿ ಪುನಶ್ಚೇತನಕ್ಕೆ ಚಿಂತನೆ ನಡೆದಿದ್ದು, ದಕ್ಷಿಣ ಭಾರತದ ಪ್ರಮುಖ ಉಕ್ಕು ಕಾರ್ಖಾನೆಗಳಾದ ಭದ್ರಾವತಿ ಮತ್ತು ಸೇಲಂನ ಪ್ಲಾಂಟ್‌ಗಳ ಪುನಶ್ಚೇತನ ಸಂಬಂಧ ಮೂರು ಸಭೆಗಳನ್ನು ನಡೆಸಿದ್ದೇನೆ. ಚರ್ಚೆ ಆಧರಿಸಿ ಈಗ ಡಿಪಿಆರ್ ತಯಾರಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.