Policy: ವಿಮಾನ ನಿಲ್ದಾಣದಲ್ಲಿ ಅಪ್ಪುಗೆಗೆ ಸಮಯ ಮಿತಿ ಹೇರಿದ ನ್ಯೂಜಿಲೆಂಡ್ ಸರಕಾರ!
Team Udayavani, Oct 21, 2024, 1:36 AM IST
ಹೊಸದಿಲ್ಲಿ: ನ್ಯೂಜಿಲೆಂಡ್‌ನ ಡುನೆಡಿನ್ ವಿಮಾನ ನಿಲ್ದಾಣದಲ್ಲಿ ಆಲಂಗಿಸಲು ಸಮಯ ಮಿತಿ ಹೇರಲಾಗಿದೆ. ಈ ಬಗ್ಗೆ ಹಾಕಲಾದ ಫಲಕವೊಂದು ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಅದರಲ್ಲಿ “ಅಪ್ಪಿಕೊಳ್ಳಲು ಗರಿಷ್ಠ ಸಮಯ 3 ನಿಮಿಷ. ಹೆಚ್ಚು ಪ್ರೀತಿಯ ವಿದಾಯಕ್ಕಾಗಿ ದಯವಿಟ್ಟು ಕಾರ್ ಪಾರ್ಕಿಂಗ್ ಸ್ಥಳ ಬಳಸಿ’ ಎಂದು ಬರೆಯಲಾಗಿದೆ.
ಈ ಬಗ್ಗೆ ಸಂದರ್ಶನವೊಂದರಲ್ಲಿ ಡುನೆಡಿನ್ ವಿಮಾನ ನಿಲ್ದಾಣದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡೇನಿಯಲ್ ಡೆ ಬೊನೊ ಮಾತನಾಡಿ “ವಿಮಾನ ನಿಲ್ದಾಣಗಳು ಭಾವನೆಗಳು ಹೆಚ್ಚಾಗಿರುವ ತಾಣ. ಸಂಶೋಧನೆಯ ಪ್ರಕಾರ 20 ಸೆಕೆಂಡ್ ಅಪ್ಪಿಕೊಂಡರೆ ಸಾಕು. ಪ್ರೀತಿಯ ಹಾರ್ಮೋನು ಆಕ್ಸಿಟೋಸಿನ್ ಉತ್ಪತ್ತಿಯಾಗುತ್ತದೆ’ ಎಂದು ಹೇಳಿದ್ದಾರೆ. ಈ ನಿರ್ಣಯಕ್ಕೆ ನೆಟ್ಟಿಗರು ವಿವಿಧ ಅಭಿಪ್ರಾಯಗಳನ್ನು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Bhagyanagar: ಹೈದರಾಬಾದ್ ಅಲ್ಲ, ಭಾಗ್ಯನಗರ: ಆರೆಸ್ಸೆಸ್ ಮತ್ತೆ ಹಕ್ಕೊತ್ತಾಯ
Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Bhagyanagar: ಹೈದರಾಬಾದ್ ಅಲ್ಲ, ಭಾಗ್ಯನಗರ: ಆರೆಸ್ಸೆಸ್ ಮತ್ತೆ ಹಕ್ಕೊತ್ತಾಯ
Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.