ಸರ್ಕಾರಿ ಆಸ್ತಿ ಹಂಚಿಕೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಹಿಸಲ್ಲ: ಹೈಕೋರ್ಟ್ ಚಾಟಿ
Team Udayavani, Dec 2, 2022, 7:40 AM IST
ಬೆಂಗಳೂರು: ಸರ್ಕಾರಿ ಆಸ್ತಿ ಅಥವಾ ಜಾಗೆಗಳನ್ನು ಗುತ್ತಿಗೆ ಆಧಾರದಲ್ಲಿ ಹಂಚಿಕೆ ಮಾಡುವಲ್ಲಿ “ರಾಜಕೀಯ ಹಸ್ತಕ್ಷೇಪ’ ಹಾಗೂ “ಪಕ್ಷಪಾತ’ ಸಹಿಸುವುದಿಲ್ಲ ಎಂದು ಹೈಕೋರ್ಟ್ ಚಾಟಿ ಬೀಸಿದೆ.
ಅಲ್ಲದೆ, ಮಲ್ಪೆ ಬಂದರಿನ ಮೀನು ಸಂಸ್ಕರಣೆ ಘಟಕದಲ್ಲಿ 700 ಚದರ ಮೀಟರ್ ಜಾಗವನ್ನು ಇಬ್ಬರು ಶಾಸಕರ ಶಿಫಾರಸು ಪತ್ರ ಆಧರಿಸಿ ಸಂತೋಷ್ ವಿ. ಸಾಲ್ಯಾನ್ ಎಂಬುವರಿಗೆ ಗುತ್ತಿಗೆ ನೀಡಿ ಉಡುಪಿಯ ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದ ಹೈಕೋರ್ಟ್, ಸಾರ್ವಜನಿಕ ಆಸ್ತಿ ಹಂಚಿಕೆಯಲ್ಲಿ ಸಮಾನತೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವಂತೆ ತಾಕೀತು ಮಾಡಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸರ್ಕಾರಿ ಆಸ್ತಿಯನ್ನು ಹಂಚಿಕೆ ಮಾಡುವ ವಿಚಾರದಲ್ಲಿ ನಡೆಯವ “ರಾಜಕೀಯ ಹಸ್ತಕ್ಷೇಪ’ಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಸರ್ಕಾರಿ ಆಸ್ತಿಯನ್ನು ಸಾರ್ವಜನಿಕ ಹರಾಜು ಅಥವಾ ಟೆಂಡರ್ ಪ್ರಕ್ರಿಯೆ ಮೂಲಕವೇ ಗುತ್ತಿಗೆ ನೀಡಬೇಕು. ತಪ್ಪಿದರೆ ಅಧಿಕಾರದ ನಿರಂಕುಶವಾಗಿ ಬಳಕೆ ಮಾಡಿದಂತಾಗುತ್ತದೆ. ಸಾರ್ವಜನಿಕರ ಗಮನಕ್ಕೆ ಬರದಂತೆ ಸರ್ಕಾರಿ ಆಸ್ತಿಯನ್ನು ಹಿತಾಸಕ್ತಿಯ ವ್ಯಕ್ತಿಗೆ ಮನಸೋಯಿಚ್ಛೆ ಹಂಚಿಕೆ ಮಾಡಲು ಅವಕಾಶವಿಲ್ಲ. ಈ ಪ್ರಕರಣವು ಸರ್ಕಾರಿ ಆಸ್ತಿಯನ್ನು ಬೇಕಾಬಿಟ್ಟಿ ಹಂಚಿಕೆ ಮಾಡುತ್ತಿರುವ ಸರ್ಕಾರಕ್ಕೆ ಕೊನೆಯ ಎಚ್ಚರಿಕೆಯಾಗಿದೆ. ಈ ಪ್ರವೃತ್ತಿ ಮರುಕಳಿಸಿದರೆ ಅದನ್ನು ಗಂಭೀರವಾಗಿ ಪರಿಗಣಿಸಲಿದ್ದು, ಯಾವುದೇ ವಿನಾಯ್ತಿ ನೀಡಲಾಗುವುದಿಲ್ಲ ಎಂದು ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದೆ.
ಅದೇ ರೀತಿ ಪ್ರಕರಣದಲ್ಲಿನ ವಿವಾದಿತ ಸರ್ಕಾರಿ ಜಾಗವನ್ನು ಸಾರ್ವಜನಿಕ ಹರಾಜು ಮೂಲಕವೇ ಗುತ್ತಿಗೆ ನೀಡಲಾಗುವುದು ಎಂದು ತಿಳಿಸಿ ಅರ್ಜಿದಾರ ಮತ್ತು ಸಂತೋಷ್ ಅವರ ಅರ್ಜಿಗಳನ್ನು ಮೊದಲು ವಜಾಗೊಳಿಸಲಾಗಿತ್ತು. ಅದಾದ ಬಳಿಕವೂ ಸಂತೋಷ್ ಪರವಾಗಿ ಆದೇಶ ಹೊರಡಿಸಿರುವುದು ಸಂಪೂರ್ಣವಾಗಿ ರಾಜಕೀಯ ಮಧ್ಯಪ್ರವೇಶದಿಂದಾಗಿದೆ. ಈ ಕ್ರಮ ಅಚ್ಚರಿ ಮೂಡಿಸಿದೆ. ಅರ್ಜಿದಾರರ ವಿಚಾರದಲ್ಲಿ ಸರ್ಕಾರ ಪಕ್ಷಪಾತಿಯಾಗಿ ನಡೆದುಕೊಂಡಿದ್ದು, ನ್ಯಾಯಾಲಯ ಇದನ್ನು ಸಹಿಸುವುದಿಲ್ಲ. ಸರ್ಕಾರಿ ಆಸ್ತಿಯನ್ನು ಹಂಚಿಕೆ ಮಾಡುವ ಪ್ರಕ್ರಿಯೆಯಲ್ಲಿ ಸಮಾನತೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಹರಾಜು ಪ್ರಕ್ರಿಯೆ ನಡೆಸಿ ಅದರಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಮಾಡಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶಿಸಿದೆ.
ಹಾಗಯೇ ಸರ್ಕಾರವು ವಿವಾದಿತ ಸರ್ಕಾರಿ ಜಾಗವನ್ನು ಸಾರ್ವಜನಿಕ ಹರಾಜು ಮೂಲಕವೇ ಗುತ್ತಿಗೆ ನೀಡಬೇಕು. ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅರ್ಜಿದಾರ ಹಾಗೂ ಸಂತೋಷ್‌ಗೆ ಈ ಆದೇಶ ಯಾವುದೇ ಅಡ್ಡಿ ಉಂಟು ಮಾಡುವುದಿಲ್ಲ. ಎಂದು ನಿರ್ದೇಶಿಸಿ ನ್ಯಾಯಪೀಠ ಅರ್ಜಿ ಇರ್ತ್ಯಪಡಿಸಿದೆ.
ಏನಿದು ವಿವಾದ:
ಶೀತಲ ಘಟಕ ನಿರ್ಮಾಣಕ್ಕಾಗಿ ಮಲ್ಪೆ ಬಂದರಿನ ಮೀನು ಸಂಸ್ಕರಣಾ ಕೇಂದ್ರದಲ್ಲಿರುವ ಸರ್ವೇ ನಂ.262/ಸಿ ರಲ್ಲಿ ಖಾಲಿಯಿರುವ ಜಾಗ ಗುತ್ತಿಗೆ ನೀಡಲು ಉಡುಪಿ ಜಿಲ್ಲೆಯ ಕೊಡವೂರು ನಿವಾಸಿ ಗ್ರಾಮದ ಚಂದ್ರ ಸುವರ್ಣ ಮತ್ತುಅನಂತ ಕೃಷ್ಣ ನಗರ ನಿವಾಸಿ ಸಂತೋಷ್ ವಿ. ಸಾಲ್ಯಾನ್ ಅರ್ಜಿ ಸಲ್ಲಿಸಿದ್ದರು. ಕೇವಲ ಸಾರ್ವಜನಿಕ ಹರಾಜು ಮೂಲಕವಷ್ಟೇ ಸರ್ಕಾರಿ ಆಸ್ತಿಯನ್ನು ಹಂಚಿಕೆ ಮಾಡಲಾಗುವುದು ಎಂದು ತಿಳಿಸಿ ಅವರ ಅರ್ಜಿಗಳನ್ನು ತಿರಸ್ಕರಿಸಲಾಗಿತ್ತು.
ನಂತರ ಶಾಸಕ ಲಾಲಾಜಿ ಆರ್.ಮೆಂಡನ್ ಅವರು ಉಡುಪಿ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಿಗೆ ಪತ್ರ ಬರೆದು, ಮಲ್ಪೆ ಬಂದರಿನಲ್ಲಿ 700 ಚದರ ಮೀಟರ್ ಭೂಮಿಯನ್ನು ಸಂತೋಷ್ ವಿ.ಸಾಲ್ಯಾನ್‌ಗೆ ಗುತ್ತಿಗೆ ನೀಡಬೇಕು ಎಂದು ತಿಳಿಸಿದ್ದರು. ಈ ಮಧ್ಯೆ ಶಾಸಕ ಕೆ. ರಘುಪತಿ ಭಟ್ ಸಹ ಪತ್ರ ಬರೆದು, ಆ ಜಾಗವನ್ನು 10 ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ಸಂತೋಷ್‌ಗೆ ಹಂಚಿಕೆ ಮಾಡಬೇಕು ಎಂದು ಕೋರಿದ್ದರು. ಈ ಪತ್ರಗಳನ್ನು ಪರಿಗಣಿಸಿ ಸಂತೋಷ್‌ಗೆ ಜಾಗವನ್ನು ಗುತ್ತಿಗೆಗೆ ನೀಡಿ 2021ರ ಸೆ.23ರಂದು ಆದೇಶಿಸಲಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಚಂದ್ರ ಸುವರ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.