ಕೇಂದ್ರದ ದ್ವೇಷದ ರಾಜಕಾರಣ : ಡಿಕೆಶಿ ಬಂಧನಕ್ಕೆ ಕೈ ನಾಯಕರು ಗರಂ

ಡಿಕೆಶಿ ಅರೆಸ್ಟ್: ವಿವಿಧ ರಾಜಕೀಯ ನಾಯಕರು ಹೆಳಿದ್ದೇನು?

Team Udayavani, Sep 3, 2019, 11:53 PM IST

Shivakumar-D-K-1-726

ಬೆಂಗಳೂರು: ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ನಾಯಕ ಮತ್ತು ಮಾಜೀ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೆಹಲಿಯಲ್ಲಿ ಬಂಧಿಸುತ್ತಿದ್ದಂತೆ ಇತ್ತ ಕರ್ನಾಟಕ ರಾಜಕೀಯ ವಲಯದಲ್ಲಿ ತಲ್ಲಣ ಪ್ರಾರಂಭವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರಂತೂ ಈ ಘಟನೆಯಿಂದ ಶಾಕ್ ಗೆ ಒಳಗಾಗಿದ್ದಾರೆ. ಡಿಕೆಶಿ ಬಂಧನವನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಕೇಂದ್ರ ಸರಕಾರದ ದ್ವೇಷದ ರಾಜಕಾರಣ ಎಂದು ವ್ಯಾಖ್ಯಾನಿಸಿದರೆ ಭಾರತೀಯ ಜನತಾ ಪಕ್ಷದ ನಾಯಕರು ಕಾನೂನು ತನ್ನ ಕೆಲಸವನ್ನು ಮಾಡುತ್ತಿದೆ ಎಂದು ಎಚ್ಚರಿಕೆಯ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದ ಪ್ರಮುಖ ರಾಜಕೀಯ ನಾಯಕರು ಡಿಕೆಶಿ ಬಂಧನದ ಕುರಿತು ನೀಡಿದ ಹೆಳಿಕೆಗಳು ಇಲ್ಲಿವೆ:
ಕೇಂದ್ರ ಸರಕಾರದ ಏಜೆನ್ಸಿಗಳನ್ನು ಛೂ ಬಿಟ್ಟು ವಿರೋಧ ಪಕ್ಷದ ನಾಯಕರನ್ನು ಸತತವಾಗಿ ಗುರಿ ಮಾಡಲಾಗುತ್ತಿದೆ. ಇದು ಬಿಜೆಪಿ ಸರಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಮತ್ತು ದೇಶದ ಜನರ ದಾರಿ ತಪ್ಪಿಸಲು ಮೋದಿ ಸರಕಾರ ಮಾಡುತ್ತಿರುವ ವ್ಯರ್ಥಪ್ರಯತ್ನವಾಗಿದೆ. ಡಿಕೆ ಶಿವಕುಮಾರ್ ಅವರು ನಿರ್ದೋಷಿಯಾಗಿ ಹೊರಬರಲಿದ್ದಾರೆ ಎಂಬ ವಿಶ್ವಾಸ ನಮಗಿದೆ ಹಾಗೂ ಈ ಸಂಕಷ್ಟದ ಸಮಯದಲ್ಲಿ ನಾವೆಲ್ಲರೂ ಡಿ ಕೆ ಶಿವಕುಮಾರ್ ಅವರ ಜೊತೆಗಿದ್ದೇವೆ ಎಂದು ಮಾಜೀ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸರಣಿ ಟ್ವೀಟ್ ಗಳ ಮೂಲಕ ತಿಳಿಸಿದ್ದಾರೆ.
ಸಹದ್ಯೋಗಿ ಡಿ.ಕೆ.ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗದ ಮೂಲಕ ದಮನಿಸುವ ಯತ್ನ ಹೇಡಿತನದ್ದು. ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ.@INCKarnataka


ದೇಶದ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿರುವ ಸಂದರ್ಭದಲ್ಲಿ ಅದನ್ನು ಸರಿಪಡಿಸುವುದು ಬಿಟ್ಟು ಕೇಂದ್ರ ಸರಕಾರವು ವಿರೋಧ ಪಕ್ಷಗಳನ್ನು ಬೆದರಿಸುತ್ತಿರುವುದು ದುರದೃಷ್ಟಕರ ಎಂದು ರಾಜ್ಯಸಭಾ ಸದಸ್ಯ ಮತ್ತು ಕಾಂಗ್ರೆಸ್ ಪ್ರಭಾವಿ ನಾಯಕ ಅಹಮ್ಮದ್ ಪಟೇಲ್ ಅವರು ಟ್ವೀಟ್ ಮಾಡಿದ್ದಾರೆ.
It is most unfortunate that when the economy is in doldrums the only priority of this government is intimidating the opposition


ವಿರೋಧ ಪಕ್ಷದ ನಾಯಕರ ತೇಜೋವಧೆ, ಬ್ಲ್ಯಾಕ್ ಮೇಲ್ ಮತ್ತು ಬೆದರಿಸುವ ದುರುದ್ದೇಶದಿಂದ ಮೋದಿ ಸರಕಾರ ಇಂತಹ ರಾಜಕೀಯ ಪ್ರೇರಿತ ದಾಳಿಗಳನ್ನು ನಡೆಸುತ್ತಿದೆ. ನಾವು ಡಿ ಕೆ ಶಿವಕುಮಾರ್ ಅವರ ಜೊತೆಗಿದ್ದೇವೆ ಮತ್ತು ಬಿಜೆಪಿಯ ಈ ಹಿಟ್ಲರ್ ರಾಜ್ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಡಿಕೆಶಿ ಬಂಧನಕ್ಕೆ ಪ್ರತಿಕ್ರಿಯಿಸಿದ್ದಾರೆ.
With an intention to defame, blackmail and threaten, the Modi govt has launched this politically motivated attack on their opponents.


ಶಿವಕುಮಾರ್ ಅವರನ್ನು ಬಂಧಿಸಿರುವುದು ನೂರು ಪ್ರತಿಶತ ರಾಜಕೀಯ ದುರುದ್ದೇಶದಿಂದ ಕೂಡಿದ್ದು ಎಂದು ಮಾಜೀ ಸಚಿವ ಮತ್ತು ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಅವರು ಅಭಿಪ್ರಾಯಪಟ್ಟಿದ್ದಾರೆ. ಮಾತ್ರವಲ್ಲದೇ ಕೇಂದ್ರ ಸರಕಾರ ಇಡಿ, ಆದಾಯ ತೆರಿಗೆ ಇಲಾಖೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಚುನಾವಣಾ ಆಯೋಗ ಸೇರಿದಂತೆ ಎಲ್ಲಾ ಸರಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ರಾಮಲಿಂಗ ರೆಡ್ಡಿ ಅವರು ಆರೋಪಿಸಿದ್ದಾರೆ.


ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಗಾಡ್ ಫಾದರ್ ಡಿ ಕೆ ಶಿವಕುಮಾರ್ ಅವರ ಬಂಧನಕ್ಕೆ ಪ್ರತಿಕ್ರಿಯಿಸಿದ್ದು ಹೀಗೆ.
ಪಕ್ಷದ ನಿಷ್ಠಾವಂತ ವ್ಯಕ್ತಿ ಸನ್ಮಾನ್ಯ ಶ್ರೀ @DKShivakumar ಜೀ ಅವರ ಬಂಧನ ಅತ್ಯಂತ ಖಂಡನೀಯವಾದದ್ದು, ಯಾವುದೇ ಕಾರಣಕ್ಕೂ ಪಕ್ಷದ ಕಾರ್ಯಕರ್ತರು ಧೈರ್ಯವನ್ನು ಕಳೆದುಕೊಳ್ಳಬೇಡಿ, ಇವತ್ತು ಲಕ್ಷಾಂತರ ಕಾರ್ಯಕರ್ತರನ್ನು ಬೆಳೆಸಿದ ಅವರು ಆದಷ್ಟೂ ಬೇಗ ಹೊರಗಡೆ ಬರ್ತಾರೆ ಅಂತಾ ಹೇಳ್ತಾ ನಾವೆಲ್ಲರೂ ಅವರ ಬೆಂಬಲಕ್ಕೆ ಒಗ್ಗಟ್ಟಾಗಿ ಸದಾಸಿದ್ದರಾಗಿರೋಣಾ pic.twitter.com/qx1dyitU4M


ಡಿ ಕೆ ಶಿವಕುಮಾರ್ ಅವರನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜೀ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಹೆಚ್.ಡಿ, ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

India Cricket: The star all-rounder announced his retirement from limited over cricket

India Cricket: ಸೀಮಿತ ಓವರ್‌ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಸ್ಟಾರ್‌ ಆಲ್‌ ರೌಂಡರ್

Trump-Maga

Make America Great Again: ಅಮೆರಿಕದಲ್ಲಿ ಸ್ವದೇಶಿ vs ವಲಸಿಗರು ಜಟಾಪಟಿ

Prashant Kishor

Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

supreme-Court

Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್‌ ರದ್ದು: ಸುಪ್ರೀಂ ಕೋರ್ಟ್‌

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK–Siddu

Alleged: ಇದು 60 ಪರ್ಸೆಂಟ್‌ ಲಂಚದ ಕಾಂಗ್ರೆಸ್‌ ಸರಕಾರ: ಎಚ್‌.ಡಿ.ಕುಮಾರಸ್ವಾಮಿ ಆರೋಪ

CT-Ravi

Compliant: ಸಿಆರ್‌ಪಿಎಫ್ ಭದ್ರತೆ ಕೊಡಿಸಿ, ನನ್ನ ಜೀವಕ್ಕೆ ಅಪಾಯ ಇದೆ: ಸಿ.ಟಿ.ರವಿ

Asha-workers

Protest: ಆಶಾ ಕಾರ್ಯಕರ್ತೆಯರು ಪ್ರತಿಭಟಿಸದಂತೆ ಮನವೊಲಿಸುವ ಹೊಣೆ ಜಿಲ್ಲಾಧಿಕಾರಿಗಳಿಗೆ

mogveera-Samavesha

Convention: ಮೊಗವೀರರ ಬೇಡಿಕೆ ಮುಂದಿನ ಬಜೆಟ್‌ನಲ್ಲಿ ಈಡೇರಿಸಲು ಬದ್ಧ: ಸಿದ್ದರಾಮಯ್ಯ

prabhu-Chowan

Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

India Cricket: The star all-rounder announced his retirement from limited over cricket

India Cricket: ಸೀಮಿತ ಓವರ್‌ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಸ್ಟಾರ್‌ ಆಲ್‌ ರೌಂಡರ್

Trump-Maga

Make America Great Again: ಅಮೆರಿಕದಲ್ಲಿ ಸ್ವದೇಶಿ vs ವಲಸಿಗರು ಜಟಾಪಟಿ

Prashant Kishor

Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

1

Udupi: ಇನ್‌ಸ್ಟಾಗ್ರಾಂ ಲಿಂಕ್‌ ಬಳಸಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.