Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರದಿಂದ ಅಸಹಕಾರ: ಎಚ್‌ಡಿಕೆ
ಕೇಂದ್ರ ಸರಕಾರದೊಂದಿಗೆ ಸಂಘರ್ಷ ಮಾಡಿದರೆ ಅಭಿವೃದ್ಧಿ ಅಸಾಧ್ಯ, ಕುದುರೆಮುಖ ಕಂಪನಿ ಬಗ್ಗೆ ಕೇಂದ್ರ ಸಚಿವರು ಹೇಳಿದ್ದೇನು?
Team Udayavani, Oct 18, 2024, 10:27 PM IST
ಮಂಡ್ಯ: ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆ ಹಾಗೂ ಉದ್ಯೋಗ ಸೃಷ್ಟಿಗೆ ರಾಜ್ಯ ಸರ್ಕಾರದಿಂದ ಯಾವುದೇ ಸಹಕಾರ ಸಿಗುತ್ತಿಲ್ಲ ಎಂದು ಕೇಂದ್ರದ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ “ಮಂಡ್ಯ ಟು ಇಂಡಿಯಾ’ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿ ಕೇಂದ್ರದ ಕೈಗಾರಿಕಾ ಸಚಿವನಾಗಿರುವ ನನ್ನ ಜೊತೆಗೆ ಕೈಗಾರಿಕಾಭಿವೃದ್ಧಿ ಬಗ್ಗೆ ಚರ್ಚಿಸಲು ರಾಜ್ಯ ಸರ್ಕಾರದ ಒಬ್ಬ ಮಂತ್ರಿಯೂ ಭೇಟಿಯಾಗಿಲ್ಲ. ಅವರಿಗೆ ರಾಜ್ಯವನ್ನು ಅಭಿವೃದ್ಧಿ ಮಾಡಬೇಕೆಂಬ ಹೃದಯ ವೈಶಾಲ್ಯತೆ ಇಲ್ಲ. ಪರಸ್ಪರ ವಿಶ್ವಾಸದಿಂದ ರಾಜ್ಯವನ್ನು ಅಭಿವೃದ್ಧಿ ಮಾಡಲು ಕೇಂದ್ರ ಸರ್ಕಾರದೊಂದಿಗೆ ರಾಜ್ಯ ಸರ್ಕಾರ ಕೈಜೋಡಿಸಬೇಕು. ಕೇಂದ್ರದೊಂದಿಗೆ ಸಂಘರ್ಷ ಮಾಡಿದರೆ ಅಭಿವೃದ್ಧಿ ಅಸಾಧ್ಯ ಎಂದರು.
ಕುದುರೆಮುಖ ಕಂಪನಿಗೆ ತೊಂದರೆ ಕೊಡುವ ಸಣ್ಣತನ ಬಿಡಲಿ:
ಕುದುರೆಮುಖದಲ್ಲಿ ಗಣಿಗಾರಿಕೆ ಅಗತ್ಯವಾಗಿದೆ. ಆದರೆ, ಅಲ್ಲಿನ ಕಂಪನಿಯ ಕಾರ್ಯ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ತೊಂದರೆ ನೀಡುತ್ತಿದೆ. ಅದರ ಬಗ್ಗೆ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವರಿಗೆ ಪತ್ರ ಬರೆದಿದ್ದೇನೆ. ಷರತ್ತು ಉಲ್ಲಂಘನೆಯಾಗಿದ್ದರೆ, ಕಂಪನಿಯಿಂದ ಬರಬೇಕಾದ ಹಣದ ಲೋಪ ಇದ್ದರೆ ಬಗೆಹರಿಸುವ ಜವಾಬ್ದಾರಿ ನನ್ನದು. ಆದರೆ, ತೊಂದರೆ ಕೊಡುವ ಸಣ್ಣತನ ಬಿಡುವಂತೆ ಹೇಳಿದ್ದೇನೆಂದರು. ಕರ್ನಾಟಕ ಸೇರಿದಂತೆ ದೇಶದ ನಿರುದ್ಯೋಗ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಕೈಗಾರಿಕೆ ಇಲಾಖೆಯಿಂದ ವಿಂಗ್ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.