ಶಕ್ತಿ ಕೇಂದ್ರವಾದ ಬಿಎಸ್‌ವೈ ಕಾವೇರಿ ನಿವಾಸ; ಶಿಫಾರಸು ಮಾಡುವಂತೆ ಒತ್ತಡ
ಮಂಗಳವಾರವೂ ಕೂಡಾ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಸಚಿವಾಕಾಂಕ್ಷಿಗಳ ದಂಡೇ ನೆರೆದಿತ್ತು.
Team Udayavani, Aug 3, 2021, 4:22 PM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಸಂಪುಟ ರಚನೆಯ ಕಸರತ್ತು ನಡೆಸುತ್ತಿದ್ದರೆ, ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಸಚಿವಾಕಾಂಕ್ಷಿಗಳು ಭೇಟಿ ಮಾಡಿ, ಸಂಪುಟದಲ್ಲಿ ತಮಗೂ ಅವಕಾಶಕಲ್ಪಿಸಲು ಶಿಫಾರಸು ಮಾಡುವಂತೆ ಒತ್ತಡ ಹೇರುವ ಪ್ರಯತ್ನ ನಡೆಸಿದರು.
ಇದನ್ನೂ ಓದಿ:ಸ್ವಾತಂತ್ರ್ಯ ದಿನಾಚರಣೆಗೆ ಒಲಿಂಪಿಕ್ಸ್ ಅಥ್ಲೀಟ್ ಗಳು ವಿಶೇಷ ಅತಿಥಿಗಳು: ಪ್ರಧಾನಿ ಆಹ್ವಾನ
ಯಡಿಯೂರಪ್ಪ ಅವರ ಕಾವೇರಿ ನಿವಾಸ ಸಚಿವಾಕಾಂಕ್ಷಿಗಳು ಹಾಗೂ ಅವರ ಬೆಂಬಲಿಗರಿಂದ ತುಂಬಿದ್ದು, ಬಿಜೆಪಿಯ ಪರ್ಯಾಯ ಶಕ್ತಿ ಕೇಂದ್ರವಾಗಿ ಮಾರ್ಪಟ್ಟಿತ್ತು. ಗಂಗಾ ಮತಸ್ಥ ಸಮುದಾಯಕ್ಕೆ ಸೇರಿರುವ ಮೂವರು ಶಾಸಕರಾದ ಎನ್.ರವಿಕುಮಾರ್, ಸಾಬಣ್ಣ ತಳವಾರ ಹಾಗೂ ಲಾಲ್‌ಜಿ ಮೆಂಡನ್ ಅವರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಶಾಂತ ಭೀಷ್ಮ ಚೌಡಯ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ
ಮಾಡಿದರು. ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್, ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ, ರಾಮದುರ್ಗ ಶಾಸಕ ಮಹದೇವಪ್ಪಯಾದವಾಡಅವರು ತಮ್ಮಬೆಂಬಲಿಗರೊಂದಿಗೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಈ ಬಾರಿ ತಮಗೂ ಸಚಿವ ಸಂಪುಟದಲ್ಲಿ ಸ್ಥಾನ ಕೊಡಿಸುವಂತೆ ಮನವಿ ಮಾಡಿದರು.
ಮಂಗಳವಾರವೂ ಕೂಡಾ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಸಚಿವಾಕಾಂಕ್ಷಿಗಳ ದಂಡೇ ನೆರೆದಿತ್ತು. ಯಾದಗಿರಿ ಶಾಸಕ ರಾಜುಗೌಡ, ರೇಣುಕಾಚಾರ್ಯ ಸೇರಿದಂತೆ ಹಲವರು ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದಾಗಿ ವರದಿ ತಿಳಿಸಿದೆ.
ಸಚಿವ ಸಂಪುಟದ ವಿಚಾರವಾಗಿ ಇನ್ನೂ ಯಾವುದೇ ಕರೆ ಬಂದಿಲ್ಲ. ಬುಧವಾರ ತಪ್ಪಿದರೆ ಗುರುವಾರದೊಳಗೆ ತೀರ್ಮಾನವಾಗಬಹುದು.ಮುಖ್ಯಮಂತ್ರಿಗಳು ದೆಹಲಿಯಲ್ಲಿ ಇರುವುದರಿಂದ ಇನ್ನೂ ಯಾವುದೇ ಸೂಚನೆ ಬಂದಿಲ್ಲ. ಎರಡನೇ ಬಾರಿ ಸಚಿವರಾಗುವ ವಿಚಾರಕ್ಕೆಕಾದು ನೋಡೋಣ.
●ಬಿ.ಸಿ. ಪಾಟೀಲ, ಮಾಜಿ ಸಚಿವ
ಸಂಪುಟಕ್ಕೆ ನನ್ನನ್ನು ಸೇರಿಸದಿರಲು ಯಾವುದೇ ಕಾರಣ ಇಲ್ಲ. ಯಡಿಯೂರಪ್ಪ ಅವರಿಗೆ ನನ್ನ ಮೇಲೆ ಅನುಕಂಪ ಇದೆ. ನಾನು ಅವರ ಜತೆ ಜತೆಯಲ್ಲಿ ಬೆಳೆದವನು. ನನ್ನನ್ನು ಯಡಿಯೂರಪ್ಪ ಗುರುತಿಸುತ್ತಾರೆ. ಸಂಘಸಹ ಗುರುತಿಸುತ್ತದೆ. ಈ ಬಾರಿ ಸಚಿವನಾಗುತ್ತೇನೆ.
●ಅರಗ ಜ್ಞಾನೇಂದ್ರ, ತೀರ್ಥಹಳ್ಳಿ ಶಾಸಕ
ಗಂಗಾ ಮತಸ್ಥ ಸಮುದಾಯಕ್ಕೆ ಸೇರಿರುವ ಲಾಲಾಜಿ ಮೆಂಡನ್, ಎಂಎಲ್‌ಸಿಗಳಾದ ಎನ್. ರವಿಕುಮಾರ್, ಸಾಬಣ್ಣ ತಳವಾರ ಮೂವರಲ್ಲಿ ಇಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಯಡಿಯೂರಪ್ಪ ಅವರಿಗೆ ಒತ್ತಾಯ ಮಾಡಿದ್ದೇವೆ. ಅವರು ಸಚಿವ ಸ್ಥಾನಕೊಡಿಸಲಿದ್ದಾರೆಂಬ ಭರವಸೆ ಇದೆ.
●ಭೀಷ್ಮ ಚೌಡಯ್ಯ ಸ್ವಾಮೀಜಿ,
ಅಂಬಿಗರ ಚೌಡಯ್ಯ ಗುರು ಪೀಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.