Power sharing: ನಮ್ಮಲ್ಲಿ ಒಪ್ಪಂದ ನಿಜ: ಡಿ.ಕೆ.ಶಿವಕುಮಾರ್ ಪ್ರಥಮ ಹೇಳಿಕೆ
ಪಕ್ಷ ನಿಷ್ಠೆಗೆ ಫಲ ಸಿಗುವ ವಿಶ್ವಾಸವಿದೆ ಎಂದ ಡಿಸಿಎಂ, ಆಂಗ್ಲ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಸ್ಪಷ್ಟೋಕ್ತಿ
Team Udayavani, Dec 4, 2024, 7:50 AM IST
ಹೊಸದಿಲ್ಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿ ಸಾಕಷ್ಟು ವದಂತಿಗಳು ಸೃಷ್ಟಿಯಾಗಿರುವ ನಡುವೆಯೇ, “ಪಕ್ಷದಲ್ಲಿ ಒಪ್ಪಂದವಾಗಿರುವುದು ನಿಜ’ ಎಂದು ಇದೇ ಮೊದಲ ಬಾರಿಗೆ ಹೇಳುವ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇದಕ್ಕೆ ಪುಷ್ಟಿ ನೀಡಿದ್ದಾರೆ.
ಆಂಗ್ಲ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ, “ಪಕ್ಷದ ಹೈಕಮಾಂಡ್ ನನ್ನನ್ನು ಅವಗಣಿಸಿಲ್ಲ. ಗೌರವಗಳು ಸಿಕ್ಕಿವೆ. ನಮ್ಮ ನಡುವೆ ಈಗಾಗಲೇ ಒಪ್ಪಂದ ಆಗಿದೆ. ಇದನ್ನು ನಾನು ಮಾಧ್ಯಮದ ಎದುರು ಮಾತನಾಡುವುದಿಲ್ಲ. ಸಮಯ ಬಂದಾಗ ಈ ಬಗ್ಗೆ ಮಾತನಾಡೋಣ’ ಎಂದಿದ್ದಾರೆ.
ಬ್ಲಾಕ್ ಮೇಲ್ ಮಾಡಿಲ್ಲ
“ನಾನು ಗಾಂಧಿ ಕುಟುಂಬಕ್ಕೆ ನಿಷ್ಠ. ಏಕೆಂದರೆ ಇಷ್ಟು ವರ್ಷಗಳ ಕಾಲ ಪಕ್ಷ ಒಟ್ಟಾಗಿರಲು ಈ ಕುಟುಂಬ ಶ್ರಮಿಸಿದೆ. ಈ ನಿಷ್ಠೆಗೆ ಒಂದು ದಿನ ಫಲ ಸಿಗುತ್ತದೆ ಎಂದು ನಾನು ನಂಬಿದ್ದೇನೆ. ಪಕ್ಷದಲ್ಲಿ ಮೂರ್ನಾಲ್ಕು ಡಿಸಿಎಂ ಸೃಷ್ಟಿಯ ಬಗ್ಗೆಯೂ ಮಾತುಕತೆಗಳು ಕೇಳಿ ಬರುತ್ತಿವೆ. ಇವೆಲ್ಲವೂ ಅವರವರ ಆಸೆಗಳು. ಆಸೆ ಪಡುವುದರಲ್ಲಿ ತಪ್ಪಿಲ್ಲ. ಆದರೆ ರಾಜ್ಯ ಸರಕಾರದಲ್ಲಿ ಯಾವುದೇ ಸ್ಥಾನ ಖಾಲಿ ಇಲ್ಲ. ಇಷ್ಟು ವರ್ಷ ನಾನು ಹೈಕಮಾಂಡ್‌ಗೆ ಬ್ಲಾಕ್‌ವೆುàಲ್ ಮಾಡದೆ ಕೆಲಸ ಮಾಡಿದ್ದೇನೆ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ’ ಎಂದು ಡಿಕೆಶಿ ಹೇಳಿದ್ದಾರೆ.
ಶೇ. 99 ಗ್ಯಾರಂಟಿಗಳು ಜಾರಿ
ಕರ್ನಾಟಕದಲ್ಲಿ ಘೋಷಣೆ ಮಾಡಲಾಗಿದ್ದ ಗ್ಯಾರಂಟಿಗಳನ್ನು ಶೇ. 99ರಷ್ಟು ನಾವು ಜಾರಿ ಮಾಡಿದ್ದೇವೆ. ಕಷ್ಟದಲ್ಲಿರುವ ಜನರನ್ನು ಮೇಲೆತ್ತುವ ಪಕ್ಷದ ನೀತಿಯಂತೆಯೇ ನಾವು ನಡೆದುಕೊಳ್ಳುತ್ತಿದ್ದೇವೆ. ಗ್ಯಾರಂಟಿಗಳಿಗೆ ಸಂಬಂಧಿಸಿ ಸಾಕಷ್ಟು ಟೀಕೆಗಳು ಕೇಳಿಬಂದಿವೆ. ಆದರೆ ನಾವು ಜನರ ಕಲ್ಯಾಣವನ್ನು ಅವಗಣಿಸಿಲ್ಲ. ಇತ್ತೀಚೆಗೆ ದಿನಗಳಲ್ಲಿ ಬಿಜೆಪಿ ಕೂಡ ನಮ್ಮ ಗ್ಯಾರಂಟಿಗಳನ್ನು ನಕಲು ಮಾಡುತ್ತಿದೆ ಎಂದರು.
ಭಾರತ ಒಂದಾಗಿರಬೇಕು
ದಕ್ಷಿಣ ಭಾರತವನ್ನು ಪ್ರತ್ಯೇಕ ದೇಶ ಮಾಡಬೇಕು ಎಂದು ಕೇಳುತ್ತಿಲ್ಲ. ಆದರೆ ನಾವು ಕಟ್ಟುತ್ತಿರುವ ತೆರಿಗೆಗೆ ಸರಿಯಾದ ಫಲವನ್ನಷ್ಟೇ ಕೇಳುತ್ತಿದ್ದೇವೆ. ನಾವು ಕಟ್ಟುತ್ತಿರುವ ತೆರಿಗೆಗಳು ಉತ್ತರ ಪ್ರದೇಶ ಮತ್ತು ಬಿಹಾರಗಳನ್ನು ತಲುಪುತ್ತಿವೆ. ನಮಗೆ ಅನ್ಯಾಯವಾಗುತ್ತಿದೆ. ಇದನ್ನು ಪಡೆದುಕೊಳ್ಳಲು ಬೇಕಿರುವುದನ್ನು ನಾವು ಮಾಡುತ್ತೇವೆ ಎಂದರು. ಅಲ್ಲದೆ ಜಾತಿ ಗಣತಿ ವರದಿಯನ್ನು ಬಹಿರಂಗಗೊಳಿಸುವುದಾಗಿ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.