ಪ್ರಧಾನಮಂತ್ರಿ ಆವಾಸ್ ಯೋಜನೆ : 80 ಸಾವಿರ ಬಹುಮಹಡಿ ಮನೆಗಳಿಗೆ ಸೀಮಿತ : ವಿ.ಸೋಮಣ್ಣ
Team Udayavani, Jun 25, 2021, 8:30 PM IST
ಬೆಂಗಳೂರು: ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಬಡ ಜನರಿಗೆ ವಿತರಿಸಲು ಬೆಂಗಳೂರು ನಗರ ಜಿಲ್ಲೆಯಲ್ಲಿ ನಿರ್ಮಾಣ ಮಾಡುತ್ತಿರುವ ಒಂದು ಲಕ್ಷ ಬಹುಮಹಡಿ ಮನೆಗಳ ಯೋಜನೆ 80 ಸಾವಿರಕ್ಕೆ ಸೀಮಿತಗೊಳ್ಳಲಿದೆ.
ಜಮೀನು ಕೊರತೆ ಹಿನ್ನೆಲೆಯಲ್ಲಿ ಒಂದು ಲಕ್ಷ ಮನೆಗಳ ಬದಲಿಗೆ 80 ಸಾವಿರ ಮನೆ ಮಾತ್ರ ನಿರ್ಮಾಣವಾಗಲಿದೆ. ಆಗಸ್ಟ್ 15 ರೊಳಗೆ 5 ಸಾವಿರ ಮನೆಗಳು ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ವಿಕಾಸಸೌಧಲ್ಲಿ ಶುಕ್ರವಾರ ರಾಜೀವ್‌ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳಿಂದ 515 ಎಕರೆ ಭೂಮಿ ಪಡೆಯಲಾಗಿದೆ.
ಮೊದಲ ಹಂತದಲ್ಲಿ 46,998 ಮನೆಗಳ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದ್ದು, 42361 ಮನೆಗಳ ನಿರ್ಮಾಣ ಕಾರ್ಯ ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದೆ, 2022ರ ನವೆಂಬರ್ ವೇಳೆಗೆ 80,000 ಮನೆಗಳನ್ನು ನಿರ್ಮಿಸಿ ಅರ್ಹರಿಗೆ ವಿತರಿಸಲಾಗುವುದು ಎಂದು ಹೇಳಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಸೀಮಿತವಾಗಿದ್ದ ಸೌಲಭ್ಯವನ್ನು ಬೆಂಗಳೂರು ನಗರ ಜಿಲ್ಲೆಗೆ ವಿಸ್ತರಿಸಲಾಗಿದ್ದು, ವಾರ್ಷಿಕ ಆದಾಯದ ಮಿತಿಯನ್ನು 87,600 ರೂ.ಗಳಿಂದ 3 ಲಕ್ಷಕ್ಕೆ ಏರಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಸವರಾಜ್ ಮತ್ತಿತರರು ಪಾಲ್ಗೊಂಡಿದ್ದರು.
ಹೊಸದಾಗಿ ಅರ್ಜಿ ಹಾಕಬೇಕು
ಯೋಜನೆಯಡಿ ಈಗಾಗಲ 65 ಸಾವಿರ ಅರ್ಜಿ ಸಲ್ಲಿಸಲಾಗಿತ್ತಾದರೂ ಆದಾಯ ಮಿತಿ 87,600 ರೂ.ನಿಂದ ಮೂರು ಲಕ್ಷ ರೂ.ಗೆ ಏರಿಕೆ ಮಾಡಿರುವುದು ಹಾಗೂ ಬಿಬಿಎಂಪಿ ವ್ಯಾಪ್ತಿಯೂ ಸೇರಿ ಬೆಂಗಳೂರು ನಗರ ಜಿಲ್ಲೆಗೆ ಯೋಜನೆ ವ್ಯಾಪ್ತಿ ವಿಸ್ತರಿಸಿರುವುದರಿಂದ ಜುಲೈ 30 ರಿಂದ (ಬುಧವಾರ) ಹೊಸದಾಗಿ ಅರ್ಜಿ ಸ್ವೀಕಾರ ಮಾಡಲಾಗುವುದು. ಈ ಹಿಂದೆ ಅರ್ಜಿ ಸಲ್ಲಿಸಿದವರೂ ಹಾಕಬಹುದು.
– ವಿ.ಸೋಮಣ್ಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.