7 ಕ್ಕೆ ಮೌಲ್ಯಾಂಕನ ಪರೀಕ್ಷೆ
ಕೆಎಸ್‌ಕ್ಯೂಎಎಸಿಗೆ ಮಾಹಿತಿಯೇ ಇಲ್ಲ!
Team Udayavani, Jan 22, 2020, 6:33 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: 7ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಆದರೆ ಪರೀಕ್ಷೆ ಉಸ್ತುವಾರಿ ವಹಿಸಬೇಕಿರುವ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ (ಕೆಎಸ್‌ಕ್ಯೂಎಎಸಿ)ಗೆ ಈವರೆಗೂ ಮಾಹಿತಿಯನ್ನು ಇಲಾಖೆ ನೀಡಿಲ್ಲ. ಈ ಸಂಬಂದ ಸರಕಾರಿ ಆದೇಶವೂ ಕೆಎಸ್‌ಕ್ಯೂಎಎಸಿಗೆ ತಲುಪಿಲ್ಲ. ಹೀಗಾಗಿ ಅಧಿಕಾರಿಗಳು ತಯಾರಿ ಮಾಡಿಲ್ಲ ಎಂದು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕೆಎಸ್‌ಕ್ಯೂಎಎಸಿ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
ಮಾ.27ರಿಂದ ಎ.9ರ ವರೆಗೆ 2,879 ಪರೀಕ್ಷಾ ಕೇಂದ್ರಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ನಡೆಯಲಿದೆ. ಇದಕ್ಕಾಗಿ ಸಿದ್ಧತೆ ಮಾಡಲಾಗುತ್ತಿದೆ. ಇದೇ ತಿಂಗಳಲ್ಲಿ 7ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಇವೆರಡೂ ಪರೀಕ್ಷೆ ಬೇರೆ ಬೇರೆಯಾದರೂ ಅಗತ್ಯ ಸಿದ್ಧತೆ ಅದೇ ಶಿಕ್ಷಕರು ಮಾಡಬೇಕಾಗುತ್ತದೆ. ಮೌಲ್ಯಾಂಕನ ಪರೀಕ್ಷೆಗೂ ರಾಜ್ಯ ಮಟ್ಟದಿಂದಲೇ ಪ್ರಶ್ನೆಪತ್ರಿಕೆ. ಅದನ್ನೂ ಗೌಪ್ಯತೆಯಿಂದ ಶಾಲೆಗಳಿಗೆ ತಲುಪಿಸಬೇಕು. ಇವೆಲ್ಲದರ ಜತೆಗೆ ಮೌಲ್ಯಾಂಕನ ಪರೀಕ್ಷೆಗೆ ಶಿಕ್ಷಕರು ಸ್ವತಃ ಸಜ್ಜಾಗಿ, ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಬೇಕು.
7ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ಮಾರ್ಚ್‌ನಲ್ಲಿ ನಡೆಸಲಿದ್ದೇವೆ. ಸರಕಾರಿ ಆದೇಶ ಹೊರಡಿಸಲು ಕ್ರಮ ತೆಗೆದುಕೊಂಡಿದ್ದೇವೆ. ಆದೇಶದ ಅನಂತರ ಪರೀಕ್ಷೆಯ ರೂಪುರೇಷೆ ತಿಳಿಯಲಿದೆ.
-ಉಮಾಶಂಕರ್, ಪ್ರ.ಕಾರ್ಯದರ್ಶಿ, ಪ್ರಾ. ಮತ್ತು ಪ್ರೌಢಶಿಕ್ಷಣ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.