Panaji ಗೋವಾಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
Team Udayavani, Aug 22, 2023, 5:40 PM IST
ಪಣಜಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ರವರು ಮೂರು ದಿನಗಳ ಭೇಟಿಗಾಗಿ ಗೋವಾಕ್ಕೆ ಆಗಮಿಸಿದ್ದಾರೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ವಾಸ್ಕೊ ಡಾಬೋಲಿಮ್ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ, ರಾಜ್ಯಸಭಾ ಸದಸ್ಯ ಸದಾನಂದ ಶೇಟ್ ತಾನಾವಡೆ, ಸಾರಿಗೆ ಸಚಿವ ಮಾವಿನ್ ಗೂಡಿನ್ಹೊ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದಿನಿಂದ ಮೊದಲ ಮೂರು ದಿನಗಳ ಭೇಟಿಗಾಗಿ ಗೋವಾಕ್ಕೆ ಆಗಮಿಸಿದ್ದಾರೆ. ಸ್ಮಾರಕಗಳ ಭೇಟಿ, ಪದವಿ ಪ್ರದಾನ ಸಮಾರಂಭಗಳು, ವಿಧಾನಸಭೆಯ ಸದಸ್ಯರಿಗೆ ಮಾರ್ಗದರ್ಶನ ಮತ್ತು ಪಾರಂಪರಿಕ ತಾಣಗಳಿಗೆ ಭೇಟಿ ನೀಡುವುದನ್ನು ಒಳಗೊಂಡಿರುತ್ತದೆ. ರಾಷ್ಟ್ರಪತಿಗಳು ಮಂಗಳವಾರ ಪಣಜಿಯ ಆಜಾದ್ ಮೈದಾನಕ್ಕೆ ಭೇಟಿ ನೀಡಿ ಹುತಾತ್ಮರಾದ ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ. ನಂತರ ಪಣಜಿ ಸಮೀಪದ ದೋನಾಪಾವುಲ್‍ನಲ್ಲಿರುವ ರಾಜಭವನಕ್ಕೆ ತೆರಳಿದ್ದು, ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಮಂಗಳವಾರ ರಾಷ್ಟ್ರಪತಿಗಳು ಗೋವಾದ ರಾಜಭವನದಲ್ಲಿ ಅವರ ಗೌರವಾರ್ಥವಾಗಿ ಗೋವಾ ಸರ್ಕಾರ ಆಯೋಜಿಸಿರುವ ನಾಗರಿಕ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿದರು. ಈ ವೇಳೆ ಆಯ್ದ ಫಲಾನುಭವಿಗಳಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಸನದ್ ವಿತರಣೆ ಮಾಡಿದರು.
ಬುಧವಾರ ಬೆಳಗ್ಗೆ ಗೋವಾ ವಿಶ್ವವಿದ್ಯಾಲಯದ 34ನೇ ಪದವಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿಗಳು ಪಾಲ್ಗೊಳ್ಳಲಿದ್ದಾರೆ. ನಂತರ ಸಂಜೆ 4 ಗಂಟೆಗೆ ಗೋವಾ ವಿಧಾನಸಭೆಯ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಅಲ್ಲಿ ವಿಧಾನಸಭೆಯ ಸದಸ್ಯರಿಗೂ ಮಾರ್ಗದರ್ಶನ ನೀಡಲಿದ್ದಾರೆ. ರಾಷ್ಟ್ರಪತಿಗಳು ಸಂಜೆ ರಾಜ್ಯದ ಕೆಲ ಗಣ್ಯರನ್ನು ಭೇಟಿ ಮಾಡಲಿದ್ದಾರೆ.
ಬಿಗಿ ಪೋಲಿಸ್ ಬಂದೋಬಸ್ತ್
ಗೋವಾಕ್ಕೆ ರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಪೋಲಿಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಪಣಜಿಯಲ್ಲಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ರಾಷ್ಟ್ರಪತಿಗಳು ಮೂರು ದಿನಗಳ ಕಾಲ ರಾಜಭವನ ಆವರಣದಲ್ಲಿ ತಂಗಲಿದ್ದಾರೆ. ಹಾಗಾಗಿ ಮಾಂಡವಿ ನದಿ, ಅರಬ್ಬೀ ಸಮುದ್ರ , ಅರಮನೆ ಸಂಕೀರ್ಣ ಹಾಗೂ ಜುವಾರಿ ನದಿಯಲ್ಲಿ ನೀರಿನಲ್ಲಿ ಬೋಟಿಂಗ್ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಗೋವಾ ರಾಜಧಾನಿ ಸುತ್ತಮುತ್ತಲಿನ ಪ್ರದೇಶದಲ್ಲಿ ಡ್ರೋನ್ ಬಳಕೆಯನ್ನು ನಿಷೇಧಿಸಲಾಗಿದೆ.ಡೊನಾ ಪೌಲಾದಲ್ಲಿರುವ ಪ್ರವಾಸಿ ತಾಣಕ್ಕೆ ಪ್ರವಾಸಿಗರು ಭೇಟಿ ನೀಡಲು ಹಲವಾರು ನಿರ್ಬಂಧ ಹೇರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.