Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Team Udayavani, Sep 22, 2024, 3:44 AM IST
ಮೈಸೂರು: ಜನರಿಗೆ ಸತ್ಯ ಹೇಳುವ ಕೆಲಸವನ್ನು ಪತ್ರಿಕೆಗಳು ಮಾಡಬೇಕು. ಆದರೆ ಇತ್ತೀಚೆಗೆ ಸುಳ್ಳು ಸುದ್ದಿ ಸೃಷ್ಟಿಸಿ ಮತ್ತೂಬ್ಬರ ತೇಜೋವಧೆ ಮಾಡುವ ಕೆಲಸ ಹೆಚ್ಚಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಬೇ ಕಿದೆ. ಅದಕ್ಕಾಗಿ ಸುದ್ದಿಗಳನ್ನು ಫ್ಯಾಕ್ಟ್ ಚೆಕ್ ಮಾಡಲು ಸರಕಾರ ಮುಂದಾಗಿದೆ. ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ತಂಡ ಸುಳ್ಳು ಸುದ್ದಿಯ ಫ್ಯಾಕ್ಟ್ ಚೆಕ್ ಮಾಡಲಿದೆ ಎಂದರು.
ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ನಮಗೆ ನಮ್ಮ ಸಂವಿಧಾನ ನೀಡಿರುವ ಅತ್ಯುನ್ನತ ಮೌಲ್ಯಗಳಾಗಿವೆ. ಹಾಗೆಂದು ಸುಳ್ಳು ಸುದ್ದಿಗಳಿಗೆ ತಡೆ ಹಾಕದಿದ್ದರೆ ಸಮಾಜ, ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ ಎಂದರು.
ಕೆಲವು ತಿಂಗಳ ಹಿಂದೆ “ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಡಿದ ಮಾತನ್ನು ಉದಾಹರಿಸಿದ್ದೆ. ” ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ” ಎಂದು ಯಡಿಯೂರಪ್ಪ ಅವರು ಸದನದಲ್ಲೇ ಹೇಳಿದ್ದರು. ಈ ಮಾತನ್ನು ನಾನು ಉದಾಹರಿಸಿದ್ದೆ. ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ನಾನೇ ಆ ಮಾತು ಹೇಳಿದ್ದಾಗಿ ನಕಲಿ ಸುದ್ದಿ ಸೃಷ್ಟಿಸಿ, ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೆರೆಸಿ ತಪ್ಪು ಸಂದೇಶ ಹರಡಿದರು. ಇದರಿಂದ ನಷ್ಟ ಆಗಿದ್ದು ಸಮಾಜಕ್ಕೇ ಹೊರತು ನನಗಲ್ಲ ಎಂದು ಉದಾಹರಣೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.