ಒಕ್ಕಲಿಗರ ಮೀಸಲಿಗೆ ಸಿಎಂ ಮೇಲೆ ಒತ್ತಡ


Team Udayavani, Dec 22, 2022, 8:30 PM IST

tdy-10

ಸುವರ್ಣ ವಿಧಾನಸೌಧ: ಪಂಚಮಸಾಲಿ ಮೀಸಲಾತಿ ಬೆನ್ನಲ್ಲೇ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸುವ ಸಂಬಂಧ ಇದೀಗ ಸರ್ಕಾರದ ಮೇಲೆ ಒತ್ತಡ ಶುರುವಾಗಿದೆ.

ಗುರುವಾರ ಕಾಂಗ್ರೆಸ್‌ನ ಒಕ್ಕಲಿಗ ಸಮುದಾಯದ ವಿಧಾನಪರಿಷತ್‌ ಸದಸ್ಯರಾದ ಸಿ.ಎಂ. ಲಿಂಗಪ್ಪ , ಎಸ್‌. ರವಿ, ಕೆ. ಗೋವಿಂದರಾಜು, ಅನಿಲ್‌ ಕುಮಾರ್‌, ಮಂಜುನಾಥ ಭಂಡಾರಿ, ಮಧು ಜಿ. ಮಾದೇಗೌಡ, ದಿನೇಶ್‌ ಗೂಳಿಗೌಡ ಅವರು ತುರ್ತು ಪತ್ರಿಕಾಗೋಷ್ಠಿ ನಡೆಸಿ, ಒಕ್ಕಲಿಗ ಜನಾಂಗಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಲು ಸಮಾಜದ ಮಠಾಧೀಶರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಹಾಗೂ ಶ್ರೀ ನಂಜಾವಧೂತ ಸ್ವಾಮೀಜಿಗಳ ನೇತೃತ್ವದಲ್ಲಿ ಮೀಸಲಾತಿಯನ್ನು ಶೇ.12ಕ್ಕೆ ಹೆಚ್ಚಿಸಲು ಹಕ್ಕೊತ್ತಾಯ ಮಾಡುತ್ತೇವೆ ಎಂದು ಹೇಳಿದರು.

ಇದು ಕಾಂಗ್ರೆಸ್‌ ಪಕ್ಷದ ಆಗ್ರಹ ಮಾತ್ರವಲ್ಲ. ಪಕ್ಷಾತೀತವಾಗಿ ಸಮಾಜದ ಎಲ್ಲಾ ಸಂಘಟನೆಗಳು ಬೇಡಿಕೆಯನ್ನು ಈಡೇರಿಸಲು ಸರ್ಕಾರಕ್ಕೆ ಜನವರಿ 23ರ ವರೆಗೆ ಅಂತಿಮ ಗಡುವು ನೀಡಿದ್ದೇವೆ. ಈ ಅವಧಿಯ ಒಳಗಡೆ ಮೀಸಲಾತಿ ಹೆಚ್ಚಳದ ಬೇಡಿಕೆ  ಈಡೇರಿಸಬೇಕು. ಇಲ್ಲದಿದ್ದಲ್ಲಿ ಬೀದಿಗಿಳಿದು ಹೋರಾಟ ಮಾಡುವುದಾಗಿ  ಘೋಷಿಸಿದರು.

ಒಕ್ಕಲಿಗ ಜನಾಂಗಕ್ಕೆ ಶೇ.12ರ ಮೀಸಲಾತಿ ಕಲ್ಪಿಸಲು ಕೇಂದ್ರಕ್ಕೆ ಯಾವುದೇ ಶಿಫಾರಸು ಮಾಡುವ ಅವಶ್ಯಕತೆ ಕಂಡುಬರುವುದಿಲ್ಲ. ಒಕ್ಕಲಿಗ ಜನಾಂಗ ಈಗಾಗಲೇ ಕೇಂದ್ರದ ಒಬಿಸಿ ಪಟ್ಟಿಯಲ್ಲಿರುವುದರಿಂದ ರಾಜ್ಯ ಸರ್ಕಾರವೇ ಸ್ವಯಂ ನಿರ್ಣಯದೊಂದಿಗೆ ಒಕ್ಕಲಿಗರಿಗೆ ಶೇ.12ರ ಮೀಸಲು ಹೆಚ್ಚಳ ಘೋಷಣೆ ಮಾಡಬಹುದು. ಇತರೆ ಸಮುದಾಯಗಳ  ಮೀಸಲಾತಿ ಹೋರಾಟಕ್ಕೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ. ಅದರೆ ನಮಗೆ ಆಗಿರುವ ಮೀಸಲಾತಿ ಅನ್ಯಾಯದ ವಿರುದ್ಧ ನಮ್ಮ ಹೋರಾಟ ನಡೆಯಲಿದೆ ಎಂದು ಹೇಳಿದರು.

ಒಕ್ಕಲಿಗರ ಜನಸಂಖ್ಯೆಯು ರಾಜ್ಯದಲ್ಲಿ ಅಂದಾಜು ಒಂದು ಕೋಟಿ ಇಪ್ಪತ್ತು ಲಕ್ಷ ಇದೆ. ಹಳೆ ಮೈಸೂರು, ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಒಕ್ಕಲಿಗ ಜನಾಂಗ ವಾಸಿಸುತ್ತಿದೆ. ಒಕ್ಕಲಿಗ ಜನಾಂಗಕ್ಕೆ ಮೀಸಲಾತಿ ವಿಚಾರವಾಗಿ ಹಿಂದಿನಿಂದಲೂ ರಾಜಕೀಯ, ಶೈಕ್ಷಣಿಕ, ಆರ್ಥಿಕವಾಗಿ ಉದ್ಯೋಗದಲ್ಲಿ ಅನ್ಯಾಯವಾಗುತ್ತಿದೆ. ಹಾವನೂರು ಆಯೋಗದ ವರದಿಯನುಸಾರ ಈ ಜನಾಂಗಕ್ಕೆ ಶೇ.11ರಷ್ಟು ಮೀಸಲಾತಿ ಸಿಕ್ಕಿದ್ದು ಬಿಟ್ಟರೆ ನಂತರ ಬಂದ ಚೆನ್ನಪ್ಪರೆಡ್ಡಿ ಆಯೋಗ ಕೇವಲ ಶೇ. 4ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಈ ಶೇ.4 ಮೀಸಲಾತಿ ಒಕ್ಕಲಿಗ ಜನಾಂಗಕ್ಕೆ ಮಾತ್ರ ಸೀಮಿತವಾಗದೆ ಇನ್ನಿತರ ವರ್ಗಗಳಿಗೂ ಸೇರಿ ಹಂಚಿಕೆಯಾಗಿದೆ ಎಂದು  ತಿಳಿಸಿದರು.

ಸದ್ಯ ಇರುವ ಮೀಸಲಾತಿಯಲ್ಲಿ ಶೇ.4 ಗ್ರಾಮೀಣ ಪ್ರದೇಶ ಒಕ್ಕಲಿಗರಿಗೆ ಮೀಸಲಿದೆ. ನಗರ ಪ್ರದೇಶದ ಒಕ್ಕಲಿಗರಿಗೆ ಯಾವುದೇ ಮೀಸಲಾತಿಯಿಲ್ಲ. ಇದನ್ನು ಸರಿಪಡಿಸುವಂತೆಯೂ ಕೋರಲಾಗುತ್ತಿದೆ ಎಂದು ಹೇಳಿದರು.

ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಬೇಡಿಕೆಗೆ ಸಂಬಂಧಿಸಿದಂತೆ ಸಮುದಾಯದ ನಾಯಕರ ಜತೆ ಸಭೆ ನಡೆಸಿ, ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಲಾಗುವುದು.-ಆರ್‌.ಅಶೋಕ್‌, ಕಂದಾಯ ಸಚಿವ

 

ಟಾಪ್ ನ್ಯೂಸ್

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.