ದೇಶದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಪ್ರಧಾನಿ ಮೋದಿ ಕರೆ


Team Udayavani, Jun 27, 2021, 10:37 PM IST

ದೇಶದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ “ಮನ್‌ ಕೀ ಬಾತ್‌’ ರೇಡಿಯೋ ಕಾರ್ಯಕ್ರಮದಲ್ಲಿ ಮುಂಬರುವ ಒಲಿಂಪಿಕ್ಸ್‌ ಕ್ರೀಡಾಕೂಟದ ಬಗ್ಗೆ ಮಾತನಾಡಿದ್ದಾರೆ. ಜತೆಗೆ ಇತ್ತೀಚೆಗಷ್ಟೇ ಅಗಲಿದ ಲೆಜೆಂಡ್ರಿ ಆ್ಯತ್ಲೀಟ್‌ ಮಿಲಾV ಸಿಂಗ್‌ ಅವರನ್ನು ಸ್ಮರಿಸಿದ್ದಾರೆ.

“ನಾವು ಒಲಿಂಪಿಕ್ಸ್‌ ಬಗ್ಗೆ ಮಾತನಾಡುವಾಗ ಮಿಲ್ಕಾ ಸಿಂಗ್‌ ಅವರನ್ನು ಉಲ್ಲೇಖೀಸದೆ ಇರಲು ಸಾಧ್ಯವಿಲ್ಲ. ಅವರು ಆಸ್ಪತ್ರೆಗೆ ದಾಖಲಾಗಿದ್ದಾಗ ಮಾತನಾಡುವ ಅವಕಾಶ ನನಗೆ ಸಿಕ್ಕಿತ್ತು. ಆಗ, ಒಲಿಂಪಿಕ್ಸ್‌ಗೆ ತೆರಳುವ ಭಾರತೀಯ ಕ್ರೀಡಾಪಟುಗಳಿಗೆ ಸ್ಪೂರ್ತಿ ತುಂಬುವಂತೆ ಮನವಿ ಮಾಡಿದ್ದೆ. ಆದರೆ ಅವರೀಗ ನಮ್ಮ ಜತೆಗಿಲ್ಲ ಎಂಬುದು ಬೇಸರದ ಸಂಗತಿ’ ಎಂದು ಮೋದಿ ಭಾವುಕರಾದರು.

ಟೋಕಿಯೊ ಒಲಿಂಪಿಕ್ಸ್‌ ಬಗ್ಗೆ ಮಾತನಾಡಿದ ಮೋದಿ, ಈ ಅಂತಾರಾಷ್ಟ್ರೀಯ ಕ್ರೀಡಾಕೂಟದ ಭಾಗವಾಗುವಂತೆ ಯುವ ಜನತೆಗೆ ಮನವಿ ಮಾಡಿದರು. ದೇಶದ ಕ್ರೀಡಾಪಟುಗಳನ್ನು ಎಲ್ಲರೂ ಪ್ರೋತ್ಸಾಹಿಸುವಂತೆ ಕರೆಯಿತ್ತರು.

“ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಎಲ್ಲ ಕ್ರೀಡಾಪಟುಗಳೂ ಕಠಿನ ಪರಿಶ್ರಮಪಟ್ಟಿ¨ªಾರೆ. ಇವರನ್ನು ಬೆಂಬಲಿಸುವುದು ನಮ್ಮ ಕರ್ತವ್ಯ. ಇವರ ಮೇಲೆ ಯಾವುದೇ ಒತ್ತಡ ಹೇರಬಾರದು’ ಎಂದರು.

ಇದನ್ನೂ ಓದಿ : ಏಕದಿನ ಪಂದ್ಯ : ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 8 ವಿಕೆಟ್‌ ಸೋಲು

ಹಳ್ಳಿಗಳಿಂದ ಬಂದ ಸಾಧಕರು
“ನಮ್ಮ ದೇಶದ ಬಹುತೇಕ ಕ್ರೀಡಾ ಸಾಧಕರು ಸಣ್ಣ ಸಣ್ಣ ಪಟ್ಟಣಗಳಿಂದ ಅಥವಾ ಹಳ್ಳಿ ಪ್ರದೇಶದಿಂದ ಬಂದಿದ್ದಾರೆ. ಟೋಕಿಯೊಗೆ ತೆರಳುವ ತಂಡದಲ್ಲಿ ಇಂಥ ಅನೇಕರನ್ನು ಕಾಣಬಹುದು. ಇವರ ಕ್ರೀಡಾ ಬದುಕು ಎಲ್ಲರಿಗೂ ಸ್ಫೂರ್ತಿ’ ಎಂದರು. ಆರ್ಚರ್‌ ಪ್ರವೀಣ್‌ ಜಾಧವ್‌, ಹಾಕಿ ಆಟಗಾರ್ತಿ ನೇಹಾ ಗೋಯೆಲ್‌, ಬಾಕ್ಸರ್‌ ಮನೀಷ್‌ ಕೌಶಿಕ್‌, ರೇಸ್‌ ವಾಕರ್‌ ಪ್ರಿಯಾಂಕಾ ಗೋಸ್ವಾಮಿ, ಬ್ಯಾಡ್ಮಿಂಟನ್‌ ಜೋಡಿ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ, ಫೆನ್ಸರ್‌ ಭವಾನಿ ದೇವಿ ಮೊದಲಾದವರನ್ನು ಈ ಸಂದರ್ಭದಲ್ಲಿ ಮೋದಿ ಉಲ್ಲೇಖೀಸಿದರು.

“ಪ್ರವೀಣ್‌ ಜಾಧವ್‌ ಅವರ ಹೆತ್ತವರು ಕೂಲಿಯಾಳುಗಳಾಗಿದ್ದಾರೆ. ನೇಹಾ ಅವರ ತಾಯಿ, ಸಹೋದರಿಯರು ಸೈಕಲ್‌ ಫ್ಯಾಕ್ಟರಿಯೊಂದರಲ್ಲಿ ದುಡಿಯುತ್ತಿದ್ದಾರೆ. ಪ್ರಿಯಾಂಕಾ ಅವರ ತಂದೆ ಬಸ್‌ ಕಂಡಕ್ಟರ್‌ ಆಗಿದ್ದಾರೆ. ಭವಾನಿ ಅವರ ತಾಯಿ ಚಿನ್ನವನ್ನು ಅಡವಿಟ್ಟು ಮಗಳಿಗೆ ತರಬೇತಿ ಕೊಡಿಸಿದ್ದಾಗಿ ಓದಿದ್ದೇನೆ’ ಎಂದು ಮೋದಿ ಹೇಳಿದರು.

ಟಾಪ್ ನ್ಯೂಸ್

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.