ಪಾಕ್ ಪರವಾಗಿರುವವರನ್ನು ಗುಂಡಿಕ್ಕಿ ಕೊಲ್ಲಬೇಕು:ಅಶೋಕ್
Team Udayavani, Jan 23, 2020, 6:32 PM IST
ಬೆಂಗಳೂರು: ದೇಶಕ್ಕೆ ದ್ರೋಹ ಬಗೆಯುವ ಮತ್ತು ಪಾಕಿಸ್ಥಾನ ಪರವಾಗಿರುವವರನ್ನು ಗುಂಡು ಹೊಡೆದು ಕೊಲ್ಲಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುಭಾಸ್ ಚಂದ್ರ ಬೋಸ್ ಜನ್ಮದಿನಾಚರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ಕಾನೂನು ಎಲ್ಲರಿಗೂ ಒಂದೇ. ಕಳ್ಳ ಕಳ್ಳನೇ. ಅವನು ಯಾವ ಧರ್ಮದವನೇ ಆಗಿರಲಿ. ಪಾಕಿಸ್ಥಾನದ ಪ್ರೇರಣೆಯಿಂದ ಅಲ್ಲಿ ತರಬೇತಿ ಪಡೆದು ಹಿಂದೂವೇ ಉಗ್ರವಾದ ಮಾಡಿದರೆ, ಅವನನ್ನು ಅದೇ ರೀತಿ ನೋಡುತ್ತೇವೆ ಎಂದು ಹೇಳಿದರು.
ನಮ್ಮ ದೇಶದ ಸೈನಿಕರನ್ನು ಕೊಲ್ಲುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ಪಾಕಿಸ್ಥಾನದ ಧ್ವಜ ಕಂಡರೆ ನಮಗೆ ಸಿಟ್ಟು ಬರುತ್ತದೆ. ಪಾಕಿಸ್ಥಾನದ ಪರವಾಗಿರುವ ಹಿಂದೂ ಆಗಲಿ, ಕ್ರೆಸ್ತನಾಗಲಿ, ಮುಸ್ಲಿಂ ಆಗಲಿ, ಯಾರೇ ಆಗಲಿ ಪಾಕಿಸ್ಥಾನ ನಮ್ಮ ವೈರಿ ರಾಷ್ಟ್ರ. ಸದಾ ನಮ್ಮ ದೇಶವನ್ನು ನಾಶ ನಾಡಲು ಹೊರಟಿರುವ ದೇಶ. ಆ ದೇಶವನ್ನು ಮಟ್ಟ ಹಾಕುವಂಥ ಕೆಲಸ ಮಾಡುವುದು ನಮ್ಮ ಕರ್ತವ್ಯ. ಅದನ್ನು ನಾವು ಮಾಡುತ್ತೇವೆ ಎಂದರು.
ಎಚ್‌ಡಿಕೆ ವಿರುದ್ಧ ಕಿಡಿ
ಮಂಗಳೂರು ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಾವು ಜಾಗರೂಕತೆಯಿಂದ ತನಿಖೆ ಮಾಡುತ್ತಿದ್ದೇವೆ. ಏನೇ ತನಿಖೆ ಮಾಡಿದರೂ ಅದನ್ನು ನಾಟಕ, ಅಣಕು ಪ್ರದರ್ಶನ ಎನ್ನಲಾಗುತ್ತಿದೆ. ಸಿನೆಮಾಗಳಲ್ಲಿ ತೋರಿಸುವಂತೆ ಪೊಲೀಸರನ್ನು ವ್ಯಂಗ್ಯವಾಗಿ ಬಿಂಬಿಸಲಾಗುತ್ತಿದೆ. ಸಿನೆಮಾ ನಿರ್ಮಾಪಕರಾದ ಕುಮಾರಸ್ವಾಮಿ ಅವರು ಕೂಡ ಪೊಲೀಸರ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡುತ್ತಿದ್ದಾರೆ. ಅವರು ಮಾಜಿ ಮುಖ್ಯಮಂತ್ರಿ ಆಗಿದ್ದಾಗ ಅವರಿಗೆ ಪೊಲೀಸರು ಬೇಕಾಗಿದ್ದರು. ಆದರೆ ಅಧಿಕಾರದಿಂದ ಇಳಿದ ತತ್‌ಕ್ಷಣ ಅವರಿಗೆ ಪೊಲೀಸರು ವಿಲನ್ ಆಗಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.
ಹ್ಯಾರಿಸ್ ಮೇಲಾದ ದಾಳಿ ಕೂಡ ಬಹಳ ನೋವಿನ ಸಂಗತಿ. ಅವರು ಬೇಗ ಗುಣಮುಖರಾಗಲಿ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈಗಲೇ ಏನಾದರು ಹೇಳಿದರೆ ಅದು ಪಟಾಕಿ ಅಂತ ಕುಮಾರಸ್ವಾಮಿ ಹೇಳುತ್ತಾರೆ. ಹ್ಯಾರಿಸ್ ಮೇಲಿನ ದಾಳಿ ಹಿಂದೆ ಕುತಂತ್ರ ಇದೆ. ಪೂರ್ವ ನಿಯೋಜಿತ ಎಂಬಂತೆ ಕಾಣುತ್ತಿದೆ ಎಂದು ವಿವರಿಸಿದರು.
ಬೊಮ್ಮಾಯಿ ಹೇಳಿಕೆಗೆ ಸಮರ್ಥನೆ
ಆದಿತ್ಯ ರಾವ್ ಮಾನಸಿಕ ಅಸ್ವಸ್ಥ ಎಂಬ ಗೃಹ ಸಚಿವ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆಯನ್ನು ನಾನು ಸಮರ್ಥಿಸುತ್ತೇನೆ. ಆತನ ಮಾನಸಿಕ ಸ್ಥಿತಿ ಬಗ್ಗೆ ವೈದ್ಯರು ದೃಢೀಕರಿಸಬೇಕು. ಆರೋಪಿಯ ಹೇಳಿಕೆ ನೋಡಿದರೆ ಹಾಗೆ ಅನಿಸುತ್ತದೆ. ಡಬಲ್ ಡಿಗ್ರಿ ಆದರೂ ಕೆಲಸ ಇಲ್ಲ. ಮನೆಯವರೂ ಅವನನ್ನು ದೂರ ಮಾಡಿದ್ದಾರೆ. ಅವನಿಗೆ ಮಾನಸಿಕವಾಗಿ ಏನೋ ಸಮಸ್ಯೆ ಇರಬಹುದು. ಈ ಬಗ್ಗೆ ತನಿಖೆ ಅನಂತರ ಗೊತ್ತಾಗುತ್ತದೆ. ಅವನನ್ನು ಯಾವುದೇ ರೀತಿ ಕ್ಷಮಿಸುವ ಪ್ರಶ್ನೆಯೇ ಇಲ್ಲ. ಗೃಹ ಸಚಿವರಿಗೆ ಈ ಬಗ್ಗೆ ಮಾಹಿತಿ ಇದೆ. ಅದಕ್ಕಾಗಿ ಹೀಗೆ ಹೇಳುತ್ತಿರಬಹುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.