Punjalakatte: ಬಾಂಬಿಲ ಬಳಿ ಆಟೋರಿಕ್ಷಾ-ಕಾರು ಢಿಕ್ಕಿ; ಮಹಿಳೆ ಸ್ಥಳದಲ್ಲೇ ಮೃತ್ಯು!
ರಿಕ್ಷಾದಲ್ಲಿದ್ದ ಇತರ ಎಂಟು ಮಂದಿಗೆ ತೀವ್ರ ಗಾಯ, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ
Team Udayavani, Dec 5, 2024, 8:49 PM IST
ಪುಂಜಾಲಕಟ್ಟೆ: ಬಂಟ್ವಾಳ-ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ, ಗುಂಪಕಲ್ಲು ಎಂಬಲ್ಲಿ ಕಾರು ಮತ್ತು ಆಟೋ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇತರ ಎಂಟು ಮಂದಿಗೆ ಗಾಯಗೊಂಡಿರುವ ಘಟನೆ ಗುರುವಾರ ಸಂಭವಿಸಿದೆ.
ಘಟನೆಯಲ್ಲಿ ಪಂಜಿಕಲ್ಲು ಗ್ರಾಮದ ಬಾಂದೊಟ್ಟು ರೆಚ್ಚಾಡಿ ಹರೀಶ್ ಗೌಡ ಎಂಬವರ ಪತ್ನಿ ತಿಲಕಾ (35) ಮೃತಪಟ್ಟಿದ್ದಾರೆ. ಇತರ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಪುಂಜಾಲಕಟ್ಟೆ ಕಡೆಗೆ ಬರುತ್ತಿದ್ದ ರಿಟ್ಜ್ ಕಾರು ಹಾಗೂ ಬಂಟ್ವಾಳ ಕಡೆಗೆ ಸಾಗುತ್ತಿದ್ದ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ. ರಿಕ್ಷಾದಲ್ಲಿದ್ದ ಯಶಸ್ವಿನಿ, ಗೀತಾ, ರೇವತಿ, ಸರಸ್ವತಿ, ವೇದಾವತಿ, ರಾಜೀವಿ ಮತ್ತು ದಿಗಂತ್ ಹಾಗೂ ದಿಶಾನಿ ಗಾಯಗೊಂಡಿದ್ದಾರೆ.
ಚಕ್ರ ಸ್ಫೋಟಗೊಂಡು ಕಾರು ಪಲ್ಟಿ
ರಿಕ್ಷಾದಲ್ಲಿ ಪಂಜಿಕಲ್ಲುವಿನ ಒಂದೇ ಕುಟುಂಬದ ಮನೆ ಮಂದಿ ಮಧ್ವದಲ್ಲಿ ಸೀಮಂತ ಕಾರ್ಯಕ್ರಮಕ್ಕೆ ಹೋಗಿ ವಾಪಸ್ ಮನೆಗೆ ಬರುತ್ತಿದ್ದಾಗ ಕಾರಿನ ಚಕ್ರ ಸ್ಫೋಟ ಟಗೊಂಡು ಆಟೋರಿಕ್ಷಾಕ್ಕೆ ತಾಗಿ ಕಾರು ಪಲ್ಟಿಯಾಗಿತ್ತು. ಕಾರಿನಲ್ಲಿ ದಂಪತಿ ಇದ್ದು ಕಾರಿನ ಏರ್ ಬಲೂನ್ ಬಿಚ್ಚಿಕೊಂಡ ಪರಿಣಾಮ ಅವರಿಗೆ ಹೆಚ್ಚಿನ ಅಪಾಯ ಸಂಭವಿಸಲಿಲ್ಲ ಎನ್ನಲಾಗಿದೆ. ಮೃತಪಟ್ಟ ಮಹಿಳೆ ತಿಲಕಾ ಅವರು ಪತಿ, ಇಬ್ಬರು ಎಳೆಯ ಮಕ್ಕಳ ಅಗಲಿದ್ದಾರೆ.
ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯಕ್:
ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮರಣೋತ್ತರ ಪರೀಕ್ಷೆಗೆ ಸೂಚಿಸಿದರು. ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ಬಳಿ ಗಾಯಾಳುಗಳ ಆರೋಗ್ಯ ಕಾಳಜಿ ವಹಿಸಿ ವಿಚಾರಿಸಿದರು. ಘಟನೆಯ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.