Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!
ಪುಟಿನ್ ಇನ್ನು ಆರು ವರ್ಷಗಳ ಕಾಲ ರಷ್ಯಾದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
Team Udayavani, Mar 18, 2024, 12:41 PM IST
ಮಾಸ್ಕೋ: ರಷ್ಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ವ್ಲಾದಿಮಿರ್ ಪುಟಿನ್ ಭರ್ಜರಿ ಶೇ.87ರಷ್ಟು ಮತಗಳಿಸುವ ಮೂಲಕ ಸತತ ಗೆಲುವು ಸಾಧಿಸಿದ್ದು, ರಷ್ಯಾದ ಇತಿಹಾಸದಲ್ಲೇ ದೀರ್ಘಕಾಲ ಅಧ್ಯಕ್ಷಗಾದಿ ಏರಿದ ಹೆಗ್ಗಳಿಕೆಗೆ ಪುಟಿನ್ ಪಾತ್ರರಾಗಿದ್ದಾರೆ.
ಇದನ್ನೂ ಓದಿ:ಯಡಿಯೂರಪ್ಪ ಕುತ್ತಿಗೆ ಹಿಸುಕಿದ್ದಾರೋ… ಬೆಳೆಸಿದ್ದಾರೋ ಎಂದು ಚುನಾವಣೆ ಬಳಿಕ ಗೊತ್ತಾಗಲಿದೆ
ಸೋವಿಯತ್ ರಷ್ಯಾದ ಮುಖಂಡ ಜೋಸೆಫ್ ಸ್ಟಾಲಿನ್ ನಂತರ ಪುಟಿನ್ ದೀರ್ಘಾವಧಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದಂತಾಗಿದೆ. 1999-2000ದವರೆಗೆ ಹಂಗಾಮಿ ಅಧ್ಯಕ್ಷರಾಗಿ, ನಂತರ 2000-2004ರವರೆಗೆ ಮೊದಲ ಬಾರಿ ಪುಟಿನ್ ಅಧ್ಯಕ್ಷರಾಗಿ ಆಯ್ಕೆ. 2004-2008ರವರೆಗೆ ಎರಡನೇ ಬಾರಿ ಅಧ್ಯಕ್ಷರಾಗಿ ಪುನರಾಯ್ಕೆ. 2012-2018ರಲ್ಲಿ ಮೂರನೇ ಬಾರಿ ಅಧ್ಯಕ್ಷರಾಗಿ ಆಯ್ಕೆ. 2012ರ ಚುನಾವಣೆಯ ನಂತರ ರಷ್ಯಾ ಅಧ್ಯಕ್ಷರ ಅವಧಿಯನ್ನು ನಾಲ್ಕರಿಂದ ಆರು ವರ್ಷಕ್ಕೆ ವಿಸ್ತರಿಸಿ ಕಾನೂನು ತಿದ್ದುಪಡಿ ಮಾಡಲಾಗಿತ್ತು. 2018ರಲ್ಲಿ ಪುಟಿನ್ ನಾಲ್ಕನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ದಾಖಲೆ ಬರೆದಿದ್ದರು. 2024ರಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲೂ ಪುಟಿನ್ ಗೆಲುವಿನ ನಗು ಬೀರಿದ್ದಾರೆ.
71ವರ್ಷದ ವ್ಲಾದಿಮಿರ್ ಪುಟಿನ್ ಇನ್ನು ಆರು ವರ್ಷಗಳ ಕಾಲ ರಷ್ಯಾದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಇದರೊಂದಿಗೆ ಜೋಸೆಫ್ ಸ್ಟಾಲಿನ್ ಅವರ ದಾಖಲೆಯನ್ನು ಮುರಿದಂತಾಗಿದೆ.
3ನೇ ವಿಶ್ವ ಯುದ್ಧದ ಎಚ್ಚರಿಕೆ:
ಅಮೆರಿಕ ನೇತೃತ್ವದ ನ್ಯಾಟೋ ಪಡೆಗಳು ಮತ್ತು ರಷ್ಯಾದ ನಡುವೆ ಯಾವುದೇ ನೇರ ಸಂಘರ್ಷ ನಡೆದಲ್ಲಿ ಅದು ಮೂರನೇ ವಿಶ್ವಯುದ್ಧಕ್ಕೆ ಮುನ್ನುಡಿ ಬರೆಯಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಎಚ್ಚರಿಕೆಯ ಸಂದೇಶ ರವಾನಿಸಿರುವುದಾಗಿ ವರದಿಯಾಗಿದೆ.
ರಷ್ಯಾ ಮತ್ತು ಉಕ್ರೈನ್ ನಡುವಿನ ಯುದ್ಧದ ಪರಿಣಾಮ ಮಾಸ್ಕೋ ಮತ್ತು ಇತರ ಪಾಶ್ಚಿಮಾತ್ಯ ದೇಶಗಳ ನಡುವೆ ಸಂಘರ್ಷಕ್ಕೆ ಕಾರಣವಾಗಿತ್ತು. ಉಕ್ರೈನ್ ಯುದ್ಧದಲ್ಲಿ ತನಗೆ ಪರಮಾಣು ಬಳಕೆಯ ಅಗತ್ಯ ಬಿದ್ದಿರಲಿಲ್ಲ ಎಂದು ಪುಟಿನ್ ಪ್ರತಿಪಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.