Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ
Team Udayavani, Nov 13, 2024, 1:48 AM IST
ಪುತ್ತೂರು: ಒಂಭತ್ತು ವರ್ಷದ ಹಿಂದೆ ಬಾಲಕಿಯ ಜತೆಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಶಿಕ್ಷೆ, ದಂಡ ವಿಧಿಸಲಾಗಿದೆ.
ಪುತ್ತೂರು ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸರಿತಾ ಡಿ. ಅವರ ಪೀಠ ಈ ಆದೇಶ ನೀಡಿದೆ. ಕಬಕ ವಿದ್ಯಾಪುರ ನಿವಾಸಿ ಮಹಮ್ಮದ್ ಮುಸ್ತಾಫ ಯಾನೆ ಮುಸ್ತಾಫ ಶೇಖ್ ಶಿಕ್ಷೆಗೆ ಗುರಿಯಾದವ. 2015ರ ಡಿ. 4ರಂದು ಕಬಕ ಗ್ರಾಮದಲ್ಲಿ ನಡೆದು ಹೋಗುತ್ತಿದ್ದ ಬಾಲಕಿಯನ್ನು ಕೈ ಹಿಡಿದು ಎಳೆದು ಅನುಚಿತವಾಗಿ ವರ್ತಿಸಿದ್ದು, ಈ ಸಂದರ್ಭದಲ್ಲಿ ಬಾಲಕಿ ತಪ್ಪಿಸಿಕೊಂಡು ಹೋಗಿ ಮನೆಯವರಲ್ಲಿ ವಿಷಯ ತಿಳಿಸಿದ್ದಳು. ಬಾಲಕಿ ತಾಯಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ನಗರ ಠಾಣೆ ಪೊಲೀಸರು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
14 ಮಂದಿ ಸಾಕ್ಷಿದಾರರನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ 3 ವರ್ಷ ಜೈಲು ಮತ್ತು 21,400 ರೂ. ದಂಡ ನೀಡಲು ಆದೇಶಿಸಲಾಗಿದೆ. ದಂಡದ ಮೊತ್ತದಲ್ಲಿ 15 ಸಾವಿರ ರೂ. ಅನ್ನು ಬಾಲಕಿಗೆ ಪರಿಹಾರದ ರೂಪದಲ್ಲಿ ನೀಡಬೇಕೆಂದು ಆದೇಶಿಸಲಾಗಿದೆ. ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕ ಕುದ್ರಿಯ ಪುಷ್ಪರಾಜ ಅಡ್ಯಂತಾಯ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Aranthodu ಕಲ್ಲುಗುಂಡಿ: ಕಾರು ಪಲ್ಟಿ, ನಾಲ್ವರಿಗೆ ಗಾಯ
Vitla: ಉದ್ಘಾಟನೆಯಾದ ನಾಡಕಚೇರಿ ತೆರೆದಿಲ್ಲ !
Vitla: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾರಿನ ಬ್ರೇಕ್ ಫೇಲ್ ಆಗಿ ಪಲ್ಟಿ
Dharmasthala: ಸರಕಾರಿ ಶಾಲೆಗಳ ಶಿಕ್ಷಕರ ಹುದ್ದೆ ಭರ್ತಿ ಮಾಡಿ: ಡಾ.ವೀರೇಂದ್ರ ಹೆಗ್ಗಡೆ
MUST WATCH
ಹೊಸ ಸೇರ್ಪಡೆ
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.