Putturu: ದೇಗುಲ: ನಿಯಮಾನುಸಾರ ಮೀಸಲಾತಿ ನೀಡಿ ಸಮಿತಿ ರಚಿಸಲು ಹೈಕೋರ್ಟ್ ಆದೇಶ
Team Udayavani, Dec 13, 2024, 2:58 AM IST
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕಾತಿ ಸಂಬಂಧಿಸಿ ಅರ್ಜಿ ಆಹ್ವಾನಿಸಲಾಗಿದ್ದ ಪ್ರಕ್ರಿಯೆ ವಿರುದ್ಧ ಸೇಡಿಯಾಪಿನ ವಸಂತಿ ಯಾನೆ ವಸಂತಲಕ್ಷ್ಮೀ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ನಿಯಮಾನುಸಾರ ಮೀಸಲಾತಿ ಒದಗಿಸಿ ಕಟ್ಟುನಿಟ್ಟಾಗಿ ಸಮಿತಿ ರಚನೆ ಪ್ರಕ್ರಿಯೆ ನಡೆಸುವಂತೆ ಹೈಕೋರ್ಟ್ ಮಧ್ಯಾಂತರ ಆದೇಶ ನೀಡಿದೆ.
ಧಾರ್ಮಿಕ ದತ್ತಿ ಇಲಾಖೆ ಕಾರ್ಯದರ್ಶಿ, ರಾಜ್ಯ ಧಾರ್ಮಿಕ ಪರಿಷತ್, ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಮತ್ತು ದೇಗುಲದ ಕಾರ್ಯ ನಿರ್ವಹಣಾಧಿಕಾರಿಯವರನ್ನು ಪ್ರತಿವಾದಿಗಳನ್ನಾಗಿಸಿ ಮಾಡಲಾಗಿತ್ತು. ನೂತನ ವ್ಯವಸ್ಥಾಪನ ಸಮಿತಿ ರಚನೆ ನಿಟ್ಟಿನಲ್ಲಿ ಆಸಕ್ತರಿಂದ ಅರ್ಜಿ ಆಹ್ವಾನಿಸಿ ಧಾರ್ಮಿಕ ದತ್ತಿ ಇಲಾಖಾ ಆಯುಕ್ತರು ಜು. 16ರಂದು ಅಧಿಸೂಚನೆ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು.
ಸಮಿತಿ ರಚನೆಯನ್ನು ಕಾಯ್ದೆ ನಂ.12/2012ರಂತೆ ಕಟ್ಟುನಿಟ್ಟಾಗಿ ಮಾಡುವಂತೆ ಹೈಕೋರ್ಟ್ ಸೂಚಿಸಿದೆ. ಇದರಂತೆ ಸಮಿತಿಯ ಒಂದು ಸ್ಥಾನವನ್ನು ಪ.ಜಾತಿ ಅಥವಾ ಪ.ಪಂಗಡಕ್ಕೆ ಮೀಸಲಿಡಬೇಕು. 2 ಸ್ಥಾನವನ್ನು ಮಹಿಳೆಯರಿಗೆ ಮತ್ತು ಕನಿಷ್ಠ ಒಂದು ಸ್ಥಾನವನ್ನು ದೇಗುಲದ ಪ್ರದೇಶದವರಿಗೆ ನೀಡಬೇಕು. ನಾನೂ ಇದರಲ್ಲಿ ಓರ್ವ ಆಕಾಂಕ್ಷಿಯಾಗಿದ್ದೇನೆ. ಸೆಕ್ಷನ್ 25(2)(ಡಿ)ಪ್ರಕಾರ ಯಾವುದೇ ರಾಜಕೀಯ ಪಕ್ಷದ ಪ್ರತಿನಿಧಿಗೆ ಸದಸ್ಯರಾಗುವ ಅರ್ಹತೆ ಇಲ್ಲ ಎಂದು ವಸಂತಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!
Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ
ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?
Horoscope: ಉದ್ಯೋಗ ಸ್ಥಾನದಲ್ಲಿ ಮತ್ತಷ್ಟು ಕೆಲಸದ ಹೊರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.