ಶೀಘ್ರ ವಿದ್ಯುತ್ ಶಾಕ್?
Team Udayavani, May 17, 2019, 6:10 AM IST
ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆಯಿದ್ದು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಪರಿಷ್ಕೃತ ದರ ವಿವರ ಸಂಬಂಧ ಆದೇಶ ಹೊರಡಿಸುವ ನಿರೀಕ್ಷೆ ಇದೆ. ಪರಿಷ್ಕೃತ ದರಗಳು ಕಳೆದ ಎಪ್ರಿಲ್ 1ರಿಂದ ಪೂರ್ವಾನ್ವಯವಾಗುವ ಸಂಭವವಿದೆ.
ಎಲ್ಲ ಐದು ಎಸ್ಕಾಂಗಳು 2019- 2020ನೇ ಸಾಲಿನಲ್ಲಿ ವಿದ್ಯುತ್ ದರ ಏರಿಕೆಗೆ ಕಳೆದ ಡಿಸೆಂಬರ್‌ನಲ್ಲಿ ಪ್ರಸ್ತಾವ ಸಲ್ಲಿಸಿದ್ದು, ಪ್ರತಿ ಯೂನಿಟ್‌ಗೆ ಕನಿಷ್ಠ 1 ರೂ.ನಿಂದ ಗರಿಷ್ಠ 1.65 ರೂ. ವರೆಗೆ ಏರಿಕೆಗೆ ಮನವಿ ಮಾಡಿವೆ. ಪ್ರತಿ ಎಸ್ಕಾಂಗಳು ವಿಭಿನ್ನ ಮೊತ್ತದ ದರ ಏರಿಕೆಗೆ ಕೋರಿಕೆ ಸಲ್ಲಿಸಿವೆ.
ಈಗಾಗಲೇ ಕೆಇಆರ್‌ಸಿ ಎಲ್ಲ ಎಸ್ಕಾಂ, ಕೆಪಿಟಿಸಿಎಲ್ ಸಹಿತ ದರ ಪರಿಷ್ಕರಣೆಗೆ ಸಂಬಂಧಪಟ್ಟಂತೆ 9 ವಿಚಾರಣೆ ನಡೆಸಿದೆ. ದರ ಏರಿಕೆ ಪ್ರಸ್ತಾವಕ್ಕೆ ಎಸ್ಕಾಂಗಳು, ಕೆಪಿಟಿಸಿಎಲ್ ಸಹಿತ ಇತರ ಸಂಸ್ಥೆಗಳು ನೀಡಿರುವ ಸಮಜಾಯಿಷಿ, ಸಮರ್ಥನೀಯ ಅಂಶಗಳು, ಹಣಕಾಸು ಸ್ಥಿತಿಗತಿ, ವಿದ್ಯುತ್ ಪ್ರಸರಣ ಮತ್ತು ವಿತರಣೆ ಪ್ರಕ್ರಿಯೆಯಲ್ಲಿನ ನಷ್ಟ , ಇತರ ಅಂಶಗಳ ಜತೆಗೆ ಸಾರ್ವಜನಿಕ ಅಭಿಪ್ರಾಯವನ್ನು ಆಯೋಗ ಆಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.