ಪಕ್ಷೇತರರಿಗೆ ಕೂಡಲೇ ಖಾತೆ ಕೊಡಿ, ಶಿಕ್ಷಣ ಸಚಿವರನ್ನು ನೇಮಿಸಿ: ವಿಶ್ವನಾಥ್
Team Udayavani, Jun 18, 2019, 3:14 PM IST
ಬೆಂಗಳೂರು:ಪಕ್ಷೇತರರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಈವರೆಗೂ ಖಾತೆ ಹಂಚಿಕೆ ಮಾಡದ ಬಗ್ಗೆ ಜೆಡಿಎಸ್ ಹಿರಿಯ ಮುಖಂಡ ಎಚ್.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದಲಿತರಿಗೆ, ಹಿಂದುಳಿದವರಿಗೆ ಅವಮಾನ ಮಾಡಬೇಡಿ. ಸಚಿವ ಸ್ಥಾನ ನೀಡಿ ಎಷ್ಟು ದಿನ ಆಯಿತು. ಆದರೆ ಖಾತೆ ಯಾಕೆ ಇನ್ನೂ ಕೊಟ್ಟಿಲ್ಲ ಎಂದು ಪ್ರಶ್ನಿಸಿದರು. ಪ್ರಮುಖವಾಗಿ ಶಿಕ್ಷಣ ಇಲಾಖೆಯಲ್ಲಿ ಪಠ್ಯ ಪುಸ್ತಕ ಸೇರಿದಂತೆ ಹತ್ತಾರು ಸಮಸ್ಯೆ ಗಳಿವೆ. ಮಹೇಶ್ ರಾಜೀನಾಮೆ ಕೊಟ್ಟ ನಂತರ ಇಲಾಖೆಗೆ ಮುಖ್ಯಸ್ಥರೇ ಇಲ್ಲದಂತಾಗಿದೆ. ಈ ಇಲಾಖೆಗೆ ತುರ್ತಾಗಿ ಒಬ್ಬ ಸಚಿವರು ಬೇಕಾಗಿದ್ದಾರೆ ಎಂದರು.
ಮುಖ್ಯಮಂತ್ರಿ ಬಳಿ ಅಬಕಾರಿ ಸೇರಿದಂತೆ ಹಲವು ಖಾತೆಗಳಿವೆ. ಕೆಲವನ್ನು ಬೇರೆಯವರಿಗೆ ಹಂಚಿಕೆ ಮಾಡಲಿ ಎಂದ ವಿಶ್ವನಾಥ್ ಅವರು, ಫಾರುಕ್ ಗೆ ಸಚಿವ ಸ್ಥಾನ ನೀಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಅಲ್ಪ ಸಂಖ್ಯಾತರಿಗೆ ಅವಕಾಶ ನೀಡಲೇ ಬೇಕಿತ್ತು. ಫಾರುಕ್ ಗೆ ಸ್ಥಾನ ಕೊಟ್ಟಿದ್ರೆ, ಒಬ್ಬ ಅಲ್ಪ ಸಂಖ್ಯಾತ, ಒಬ್ಬ ಹಿಂದುಳಿದ ವರ್ಗ, ಒಬ್ಬ ದಲಿತ ರಿಗೆ ಅವಕಾಶ ಕೊಟ್ಟಂತೆ ಆಗ್ತಿತ್ತು. ಜೆಡಿಎಸ್ ಒಂದು ಜಾತ್ಯಾತೀತ ಪಕ್ಷ. ಎಲ್ಲ ವರ್ಗಕ್ಕೂ ಅವಕಾಶ ನೀಡಬೇಕಿತ್ತು ಎಂದು ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.