ಕೆಂಪೇಗೌಡರ ಕನಸಿನ ಬೆಂಗಳೂರನ್ನು ಸಾಕಾರಗೊಳಿಸಲು ಸರ್ಕಾರ ಬದ್ಧ: ಸಚಿವ ಆರ್. ಅಶೋಕ್

Team Udayavani, Jun 27, 2021, 8:38 PM IST

ಕೆಂಪೇಗೌಡರ ಕನಸಿನ ಬೆಂಗಳೂರನ್ನು ಸಾಕಾರಗೊಳಿಸಲು ಸರ್ಕಾರ ಬದ್ಧ: ಸಚಿವ ಆರ್ ಅಶೋಕ್

ಬೆಂಗಳೂರು : ನಾಡಪ್ರಭು ಕೆಂಪೇಗೌಡ ಅವರ ಬೆಂಗಳೂರಿನ ಕುರಿತು ಹೊಂದಿದ್ದ ಕನಸುಗಳನ್ನು ಸಾಕಾರಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿದ್ದು, ನಗರಕ್ಕೆ ಸೂಕ್ತ ಮೂಲಭೂತ ಸೌಕರ್ಯಗಳನ್ನು ಸೃಷ್ಟಿಸಲು ಅಗತ್ಯ ಯೋಜನೆಗಳನ್ನು ಜಾರಿ ತರಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.

ಭಾನುವಾರ ಕೆ.ಆರ್‌.ಪುರಂನಲ್ಲಿ ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು ನಗರ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡ ಅವರ 512ನೇ ಜನ್ಮ ಶತಮಾನೋತ್ಸವದಲ್ಲಿ ಪಾಲ್ಗೊಂಡು, ಕೆಂಪೇಗೌಡ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ನಾಡಪ್ರಭು ಕೇಂಪೇಗೌಡರು ಓರ್ವ ದೂರದೃಷ್ಟಿಯ ನಾಯಕರಾಗಿದ್ದರು ಮತ್ತು ಪ್ರಗತಿಪರ ಚಿಂತನೆ ಹೊಂದಿದ್ದರು. ಅವರ ಅವಧಿಯಲ್ಲಿ ರೈತರು ಹಾಗೂ ಬಡವರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದರು ಎಂದು ಸ್ಮರಿಸಿದರು.

ನಂತರ ಅವರು ಕೆ.ಆರ್‌.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ನೇತೃತ್ವದಲ್ಲಿ ಕೋವಿಡ್‌ ಸೋಂಕಿನಿಂದ ನಿಧನರಾದವರ ಕುಟುಂಬದವರಿಗೆ 1 ಲಕ್ಷ ರೂ. ಸಹಾಯಧನ ಹಾಗೂ ಕೋವಿಡ್‌ನಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ದಿನಸಿ ಕಿಟ್‌ಗಳನ್ನು ವಿತರಿಸಿದರು.

ಬಳಿಕ ಮಾತನಾಡಿದ ಸಚಿವರು ಕೋವಿಡ್‌ ನಿಂದ ಜನರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುತ್ತಿರುವುದು ದುಃಖಕರ ಸಂಗತಿ.’ ಎಂದರು.

ಇದನ್ನೂ ಓದಿ :ಹೊಸ ವೈರಾಣು ಪತ್ತೆಗೆ ಜೀನೋಮ್ ಸೀಕ್ವೆನ್ಸ್ : ಗಡಿಭಾಗಗಳಲ್ಲಿ ಹೆಚ್ಚಿನ ಪರೀಕ್ಷೆ : ಸುಧಾಕರ್

ಅನೇಕ ಮಕ್ಕಳು ಕೋವಿಡ್ ನಿಂದ ತಮ್ಮ ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಆದರೆ ಈ ಯಾವುದೇ ಮಕ್ಕಳು ಅನಾಥರಾಗದಂತೆ ನೆರವು ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ರೂಪಿಸಿದೆ ಎಂದರು.

ಇಂದು ಸಂಕಷ್ಟದ ಸಮಯದಲ್ಲಿ ಜನರಿಗೆ ಬೆಂಬಲವಾಗಿ ನಿಂತಿರುವ ಭೈರತಿ ಬಸವರಾಜು ಅವರ ನಡೆಯನ್ನು ನಾನು ಶ್ಲಾಘಿಸುತ್ತೇನೆ. ನಾನು ಗಂಗಾ ನದಿಯಲ್ಲಿ ಹೆಣಗಳನ್ನು ತೇಲಿ ಬಿಟ್ಟಿದ್ದನ್ನು ನೋಡಿದ್ದೇನೆ. ಆದರೆ, ಕರ್ನಾಟಕ ಸರ್ಕಾರ ವಾರಸುದಾರರಿಲ್ಲದ ಎಲ್ಲ ದೇಹಗಳ ಅಸ್ತಿ ವಿಸರ್ಜನೆಯ ಮಹತ್ವದ ಕ್ರಮ ಕೈಗೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಶ್ರೀ ಸದಾನಂದ ಗೌಡ, ಉಪಮುಖ್ಯಮಂತ್ರಿ ಶ್ರೀ ಲಕ್ಷ್ಮಣ ಸವದಿ, ಗೃಹ ಸಚಿವರಾದ ಶ್ರೀ ಬಸವರಾಜ ಬೊಮ್ಮಾಯಿ, ಅರಣ್ಯ ಮತ್ತು ಕನ್ನಡ ಸಂಸ್ಕ್ರತಿ ಇಲಾಖೆಯ ಸಚಿವರಾದ ಶ್ರೀ ಅರವಿಂದ ಲಿಂಬಾವಳಿ, ನಗರಾಭಿವೃದ್ಧಿ ಸಚಿವರಾದ ಶ್ರೀ ಭೈರತಿ ಬಸವರಾಜ್ ,ಸಹಕಾರ ಸಚಿವ ಎಸ್‌ ಟಿ ಸೋಮಶೇಖರ, ರಾಜ್ಯ ಮಹಿಳಾ ಬಿಜೆಪಿ ಅಧ್ಯಕ್ಷೆ ಗೀತಾ ವಿವೇಕಾನಂದ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.