ಕಂದಾಯ ಇಲಾಖೆಯಲ್ಲಿ ಬಾಕಿ ಉಳಿದಿರುವ ಕಡತಗಳಿಗೆ ಮುಕ್ತಿ : ಆರ್ ಅಶೋಕ್
15-20 ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಬಾಕಿ ಉಳಿದಿರುವ ಕಡತಗಳು
Team Udayavani, Mar 2, 2022, 8:20 PM IST
ಬೆಂಗಳೂರು : ಸುಮಾರು 15-20 ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಬಾಕಿ ಉಳಿದಿರುವ ಕಡತಗಳಿಗೆ ಮುಕ್ತಿ ನೀಡಿ ಜನತೆಗೆ ಅನುಕೂಲ ಮಾಡಿಕೊಡುವ ವಿನೂತನ ಕಾರ್ಯಕ್ರಮವನ್ನು ಗುರುವಾರ ಮೈಸೂರಿನಲ್ಲಿ ಕಂದಾಯ ಸಚಿವ ಆರ್ ಅಶೋಕ್ ಪ್ರಾರಂಭಿಸಲಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಅವರು, ಕಡತಗಳು ಕೇವಲ ಕಾಗದ ಅಲ್ಲ. ಅದರಲ್ಲಿ ಜನರ ಹಿತ, ಭಾವನೆ ಅಡಕವಾಗಿದೆ ಎನ್ನುವುದು ನನ್ನ ಅಭಿಪ್ರಾಯ. ನಾನಾ ಕಾರಣಗಳಿಂದ ಇತ್ಯರ್ಥ ಆಗದೆ ಇದ್ದ ಹಳೆಯ ಕಡತಗಳನ್ನು 10 ದಿನಗಳ ಕಾಲ ನಡೆಯುವ ಈ ಅಭಿಯಾನದಲ್ಲಿ ತೀರ್ಮಾನ ಮಾಡಬೇಕು. ಜನರ ಅಲೆದಾಟ ತಪ್ಪಿಸಬೇಕು. ಪ್ರಾಯೋಗಿಕವಾಗಿ ಗುರುವಾರ ಮೈಸೂರಿನಲ್ಲಿ ಪ್ರಾರಂಭಿಸುತ್ತಿದ್ದೇನೆ. ನಂತರ ರಾಜ್ಯಾದ್ಯಂತ ಈ ಅಭಿಯಾನವನ್ನು ಕಂದಾಯ ಇಲಾಖೆ ಹಮ್ಮಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.
ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿಯೂ ಕಡತಗಳ ಸಮಸ್ಯೆ ಅರಿವಾಗಿತ್ತು. ಜಿಲ್ಲಾಧಿಕಾರಿಗಳ ನಿರ್ದೇಶನದಲ್ಲಿ ಈ ಅಭಿಯಾನ ನಡೆಯಲಿದೆ. ಉಪವಿಭಾಗಾಧಿಕಾರಿಗಳು, ತಹಶಿಲ್ದಾರರು ಇದರ ನೇತೃತ್ವ ವಹಿಸಲಿದ್ದಾರೆ. ಕಂದಾಯ ಇಲಾಖೆ ಎಲ್ಲ ಅಧಿಕಾರಿಗಳು ಈ ಅಭಿಯಾನದಲ್ಲಿ ಕೆಲಸ ಮಾಡುತ್ತಾರೆ. ಕಂದಾಯ ಇಲಾಖೆಗೆ ಹೊಸ ದಿಕ್ಕನ್ನು ನೀಡಬೇಕು. ಕಂದಾಯ ಇಲಾಖೆ ಜನಸ್ನೇಹಿ ಇಲಾಖೆ ಆಗಿರಬೇಕು ಎನ್ನುವುದು ನನ್ನ ಆಶಯ ಎಂದು ಅಶೋಕ್ ಹೇಳಿದರು.
ಇದನ್ನೂ ಓದಿ : ಉಕ್ರೇನ್ ನಿಂದ ಬೆಂಗಳೂರಿಗೆ ಸುರಕ್ಷಿತವಾಗಿ ತಲುಪಿದ ಚಾಮರಾಜನಗರದ ವಿದ್ಯಾರ್ಥಿ ಸಿದ್ಧೇಶ್
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.