Rain Alert: ಉಡುಪಿ, ಉತ್ತರ ಕನ್ನಡ ಸೇರಿ 6 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ?
ಮುನ್ನೆಚ್ಚರಿಕೆ ಕ್ರಮವಾಗಿ ಹವಾಮಾನ ಇಲಾಖೆಯಿಂದ ಹಳದಿ ಅಲರ್ಟ್ ಘೋಷಣೆ
Team Udayavani, Sep 27, 2024, 12:44 AM IST
ಬೆಂಗಳೂರು: ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಶುಕ್ರವಾರ ( ಸೆ.27) ಭಾರೀ ಮಳೆಯಾಗುವ ಲಕ್ಷಣ ಇದ್ದು ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿ ಹಳದಿ ಅಲರ್ಟ್ ಘೋಷಿಸಿದೆ.
ಕರಾವಳಿ ಕರ್ನಾಟಕದಲ್ಲಿ ಬಿರುಗಾಳಿಯ ವೇಗವು ಗಂಟೆಗೆ ಸುಮಾರು 55 ಕಿ.ಮೀ. ವರೆಗೆ ಹೋಗುವ ಸಾಧ್ಯತೆಗಳಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಇನ್ನು ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳೀಯ ಮುನ್ಸೂಚನೆ ಗಮನಿಸಿದರೆ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ.
ಸಿನೋಪ್ಟಿಕ್ ಹವಾಮಾನ ಶಾಸ್ತ್ರದ ವೈಶಿಷ್ಟ್ಯ:
ಸಿನೋಪ್ಟಿಕ್ ಹವಾಮಾನಶಾಸ್ತ್ರದ ವೈಶಿಷ್ಟ್ಯ ಗಮನಿಸಿದಾಗ ಸುಳಿಗಾಳಿಯ ಪರಿಚಲನೆಯು ಈಗ ಉತ್ತರ ಮಧ್ಯ ಮಹಾರಾಷ್ಟ್ರ ಮತ್ತು ನೆರೆಹೊರೆಯಲ್ಲಿದ್ದು, ಸಮುದ್ರ ಮಟ್ಟದಿಂದ 5.8 ಕಿ.ಮೀ. ವರೆಗಿನ ಎತ್ತರದೊಂದಿಗೆ ದಕ್ಷಿಣಕ್ಕೆ ವಾಲುತ್ತದೆ. ಉತ್ತರ ಮಧ್ಯ ಮಹಾರಾಷ್ಟ್ರ ಮತ್ತು ನೆರೆಹೊರೆಯ ಸುಳಿಗಾಳಿಯ ಪರಿಚಲನೆಯಿಂದ ಉತ್ತರ ಬಾಂಗ್ಲಾದೇಶದವರೆಗೆ ವಿದರ್ಭ, ಛತ್ತೀಸ್‌ಗಢ, ಝಾರ್ಖಂಡ್, ಗಂಗಾನದಿ ಪಶ್ಚಿಮ ಬಂಗಾಲದ ಮೂಲಕ ಒಂದು ಟ್ರಫ್ ಸಾಗುತ್ತದೆ.
#Rainfall #Forecast: Widespread light to moderate rains with isolated heavy rains are likely over Coastal Karnataka dists; scattered to widespread light to moderate rains likely over NIK & Malnad dists; isolated to scattered very light to moderate rains are likely over SIK dists. pic.twitter.com/LreojBuL9y
— Karnataka State Natural Disaster Monitoring Centre (@KarnatakaSNDMC) September 26, 2024
ಮುಂದಿನ ಎರಡು ಮೂರು ದಿನಗಳಲ್ಲಿ ಪಶ್ಚಿಮ ಹಿಮಾಲಯ ಪ್ರದೇಶ, ಮಧ್ಯ, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಹವಾಮಾನ ಇಲಾಖೆ ಪ್ರಕಾರ, ಸೆ. 27 ಮತ್ತು 28 ರಂದು ಉಪ ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಅಕ್ಟೋಬರ್ 2 ರಂದು ಸಹ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.
ಇದು ಸಮುದ್ರ ಮಟ್ಟದಿಂದ 5.8 ಕಿ.ಮೀ. ವರೆಗಿನ ವ್ಯಾಪಿಸಿದೆ. ಪರಿಣಾಮ ಶುಕ್ರವಾರ ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.