Alert: ಕರಾವಳಿ ಸೇರಿ ರಾಜ್ಯದ 13 ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಆರೆಂಜ್ ಅಲರ್ಟ್ ಘೋಷಣೆ
ಬಂಗಾಲ ಉಪಸಾಗರದಲ್ಲಿ ವಾಯುಭಾರ ಕುಸಿತ, ಕರಾವಳಿ ಜಿಲ್ಲೆಗಳಲ್ಲಿ ಸೆ. 4ರವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ
Team Udayavani, Aug 31, 2024, 11:53 PM IST
ಬೆಂಗಳೂರು: ಬಂಗಾಲ ಉಪಸಾಗರದಲ್ಲಿ ವಾಯುಭಾರ ಕುಸಿತ ಮತ್ತು ಪೂರ್ವ ಅರಬ್ಬಿ ಸಮುದ್ರದ ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿಯ ಉದ್ದಕ್ಕೂ ಟ್ರಫ್ ಮುಂದುವರಿದ ಪರಿಣಾಮ ರಾಜ್ಯಾದ್ಯಂತ ಮತ್ತೆ ವರುಣನ ಆರ್ಭಟ ಹೆಚ್ಚಾಗುವ ಮುನ್ಸೂಚನೆ ಸಿಕ್ಕಿದೆ. ಸೆಪ್ಟೆಂಬರ್ 1 (ರವಿವಾರ) ಅರ್ಧ ಕರ್ನಾಟಕದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಗಳಿದ್ದು 13 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯಪುರ, ಗದಗ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಕಡೆ ಅತೀ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಸೆ. 1ರಂದು ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್, ಸೆ. 2ರಂದು ಹಳದಿ ಅಲರ್ಟ್ ಘೋಷಿಸಿದೆ.
ರಾಜ್ಯದಾದ್ಯಂತ ಮುಂದಿನ 2 ವಾರಗಳ ಸಂಚಿತ ಮಳೆಯ ಮುನ್ಸೂಚನೆ ನಕ್ಷೆಗಳು:
Cumulative Rainfall Forecast Maps for the next 2 weeks over the State pic.twitter.com/QsWpSlVrHZ— Karnataka State Natural Disaster Monitoring Centre (@KarnatakaSNDMC) August 31, 2024
ಕರಾವಳಿ ಜಿಲ್ಲೆಗಳಲ್ಲಿ ಸೆ. 4ರ ವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಗಳಿವೆ. ಜತೆಗೆ ಕರ್ನಾಟಕ ಕರಾವಳಿಯುದ್ದಕ್ಕೂ ಗಾಳಿಯ ವೇಗವು ಗಂಟೆಗೆ 55 ಕಿ.ಮೀ ಇರಲಿದೆ. ಹೀಗಾಗಿ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ
ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 30ರಿಂದ 40 ಕಿ.ಮೀ. ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿ.ಸೆ. ಮತ್ತು 20 ಡಿ.ಸೆ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Padubidri: ಮೊಬೈಲ್ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ
Bengaluru: ಕೀಪರ್ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
World Rapid Championships: ಕೊನೆರು ಹಂಪಿ ಚಾಂಪಿಯನ್; ಇರೆನ್ ವಿರುದ್ಧ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.