ಬೆಳ್ತಂಗಡಿ: ಕಾಂಗ್ರೆಸ್‌ನಿಂದ ರಕ್ಷಿತ್ ಶಿವರಾಂ ನಾಮಪತ್ರ
Team Udayavani, Apr 19, 2023, 5:20 AM IST
ಬೆಳ್ತಂಗಡಿ: ಭ್ರಷ್ಟಾಚಾರ ದಿಂದ ಅಭಿವೃದ್ಧಿಗೆ ಹಿನ್ನಡೆಯಾಗಿರುವ ಧರ್ಮ ಭೂಮಿ ಬೆಳ್ತಂಗಡಿಯ ಸರ್ವ ತೋಮುಖ ಅಭಿವೃದ್ಧಿಯೇ ನನ್ನ ಗುರಿ. ಸ್ವಜನಪಕ್ಷಪಾತ, ದ್ವೇಷ ರಾಜಕೀಯ ಕ್ಷೇತ್ರದಲ್ಲಿ ತಾಂಡವವಾಡುತ್ತಿದೆ. ಈ ನೆಲ, ಜಲ, ಸಂಸ್ಕೃತಿಯನ್ನು ರಕ್ಷಣೆ ಮಾಡುವ ವಾಗ್ಧಾನ ನೀಡುತ್ತೇನೆ ಎಂದು ಬೆಳ್ತಂಗಡಿಯ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಹೇಳಿದ್ದಾರೆ.
ನಾಮಪತ್ರ ಸಲ್ಲಿಸುವ ಮುನ್ನ ನಗರದ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಸೇರಿದ ಬೃಹತ್ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.
ಈ ಪವಿತ್ರ ಭೂಮಿಯಲ್ಲಿ ನಾಮಪತ್ರ ಸಲ್ಲಿಸಿರುವುದು ನನ್ನ ಬದುಕಿನ ಭಾಗ್ಯವೆಂದೇ ಭಾವಿಸಿದ್ದೇನೆ. ನನಗೆ ಜನ್ಮಕೊಟ್ಟ ಈ ನೆಲದ ಋಣ ತೀರಿಸಲು ನನಗೆ ಒಂದು ಅವಕಾಶ ಕೊಡಿ ಎಂದು ಮನವಿ ಮಾಡುತ್ತೇನೆ. ತಾಲೂಕಿನ ಯುವಜನರು ಐಎಎಸ್, ಐಪಿಎಸ್ ಹುದ್ದೆಗಳಿಗೆ ಹೋಗಬೇಕೆಂಬುದು ನನ್ನ ಕನಸು. ಕ್ಷೇತ್ರದಲ್ಲಿ ಬಹುದೊಡ್ಡ ಸಂಖ್ಯೆಯಲ್ಲಿ ನಿರುದ್ಯೋಗ ಸಮಸ್ಯೆ ಎದುರಾಗಿದೆ. ನೆಲ, ಜಲ, ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಸ್ಥಳೀಯ ಉದ್ಯೋಗ ಸೃಷ್ಟಿಗೆ ನನ್ನ ಮೊದಲ ಆದ್ಯತೆ. ಸರಕಾರ ಬಡವರಿಗೆ ನೀಡುವ ಅನ್ನ ಭಾಗ್ಯ ಯೋಜನೆಯಲ್ಲಿ ಜಿಲ್ಲೆಗೆ ಕುಚ್ಚಲಕ್ಕಿ ನೀಡುವಂತೆ ಪ್ರಯತ್ನ ಮಾಡುತ್ತೇನೆ. ಗ್ರಾ.ಪಂ. ನೌಕರರು ಹಾಗೂ ಒಪಿಎಸ್ ಸರಕಾರಿ ನೌಕರರ ಸಮಸ್ಯೆಗಳ ಪರಿಹಾರಕ್ಕಾಗಿ ವಿಧಾನಸಭೆಯಲ್ಲಿ ಧ್ವನಿ ಎತ್ತುತ್ತೇನೆ ಎಂದು ಭರವಸೆ ನೀಡಿದರು.
ಬಹಿರಂಗ ಸಭೆಯನ್ನು ಉದ್ಘಾಟಿಸಿದ ಕ್ಷೇತ್ರದ ಮಾಜಿ ಶಾಸಕರಾದ ವಸಂತ ಬಂಗೇರ ಮಾತನಾಡಿ, ಹಾಲಿ ಬಿಜೆಪಿ ಶಾಸಕರ ಆಡಳಿತದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಅನ್ಯಾಯ, ಅನಾಚಾರಗಳನ್ನು ನಿಲ್ಲಿಸಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರನ್ನು 20 ಸಾವಿರಕ್ಕೂ ಅಧಿಕ ಬಹುಮತದಿಂದ ಗೆಲ್ಲಿಸುವ ಮೂಲಕ ಭ್ರಷ್ಟಾಚಾರ, ಅಹಂಕಾರಕ್ಕೆ ತಕ್ಕ ಪಾಠ ಕಲಿಸಬೇಕು ಎಂದರು.
ನನ್ನ ರಾಜಕೀಯ ಜೀವನದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸಾವಿರಾರು ಸಂಖ್ಯೆಯಲ್ಲಿ ಜನಸಾಗರ ನೋಡಿದ್ದು ಇದೇ ಮೊದಲು. ಶಾಸಕರ ವಿರುದ್ಧ ಜನ ಸಿಡಿದೆದ್ದಿರುವುದಕ್ಕೆ ಈ ಜನರ ಸಮೂಹವೇ ಸಾಕ್ಷಿ ಎಂದು ಹಾಲಿ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ದ್ವೇಷ ರಾಜಕಾರಣ ನಮ್ಮದಲ್ಲ
ದಿಕ್ಸೂಚಿ ಭಾಷಣಕಾರರಾಗಿದ್ದ ಖ್ಯಾತ ವಾಗ್ಮಿ ನಿಕೇತ್ ರಾಜ್ ಮೌರ್ಯ ಮಾತನಾಡಿ, ಕರಾವಳಿಗರಿಗೆ ಭೂಮಿಯ ಹಕ್ಕನ್ನೂ ನೀಡಿದ್ದು ಕಾಂಗ್ರೆಸ್ ಪಕ್ಷ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕಾಂಗ್ರೆಸ್ ಪಕ್ಷ ಎಂದೂ ದ್ವೇಷ ರಾಜಕಾರಣ ನಡೆಸಿದ ಇತಿಹಾಸ ಇಲ್ಲ. ಯುವಕ ರಕ್ಷಿತ್ ಶಿವರಾಂ ಅವರನ್ನು ಗೆಲ್ಲಿಸುವ ಮೂಲಕ ರಾಜ್ಯಕ್ಕೆ ದೊಡ್ಡ ಸಂದೇಶ ನೀಡಬೇಕೆಂದು ಮನವಿ ಮಾಡಿದರು.
ರಕ್ಷಿತ್ ಶಿವರಾಂಗೆ ಭಾವ, ನಟ ವಿಜಯ್ ರಾಘವೇಂದ್ರ ಸಾಥ್
ಚಲನಚಿತ್ರ ನಟ ಹಾಗೂ ರಕ್ಷಿತ್ ಶಿವರಾಂ ಅವರ ಭಾವ ವಿಜಯ್ ರಾಘವೇಂದ್ರ ಕೂಡ ಬಹಿರಂಗ ಸಭೆ ಹಾಗೂ ಮೆರವಣಿಗೆಯಲ್ಲಿ ಭಾಗವಹಿಸಿ ಮೆರಗು ತಂದರು.
ಬೃಹತ್ ಮೆರವಣಿಗೆ
ಸಮಾವೇಶದ ಬಳಿಕ 2 ಕಿಲೋ ಮೀಟರ್ ಉದ್ದಕ್ಕೆ ಉರಿಬಿಸಿಲನ್ನೂ ಲೆಕ್ಕಿಸದೇ ಸಾವಿರಾರು ಕಾರ್ಯ ಕರ್ತರು ಹುಮ್ಮಸ್ಸಿನಿಂದ ಜಯ ಘೋಷಗೊಳಿಂದಿಗೆ ವಿವಿಧ ಕಲಾ ತಂಡದೊಂದಿಗೆ ಮೆರವಣಿಗೆ ನಡೆ ಸಿದರು. ಮೆರವಣಿಗೆಯಲ್ಲಿ ಯುವ ಕಾಂಗ್ರೆಸ್ ಹಾಗೂ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರ ಕೈಯಲ್ಲಿ ಹಿಡಿದ 500 ಮೀಟರ್ ಉದ್ದದ ತ್ರಿವರ್ಣ ಧ್ವಜ ಎಲ್ಲರ ಗಮನ ಸೆಳೆಯುತ್ತಿತ್ತು.
ಮೆರವಣಿಗೆಯ ಅನಂತರ ಮಿನಿ ವಿಧಾನಸೌಧಕ್ಕೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಸಚಿವ ಯು.ಟಿ. ಖಾದರ್, ಡಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿ’ಸೋಜಾ, ಗ್ರಾಮೀಣ ಮತ್ತು ನಗರದ ಬ್ಲಾಕ್ ಅಧ್ಯಕ್ಷರು, ಪಕ್ಷದ ಮುಖಂಡರು ಭಾಗವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.