ಬಿಎಸ್ ವೈ ಭೇಟಿಯಾದ ರಾಮಲಿಂಗ ರೆಡ್ಡಿ
Team Udayavani, Nov 2, 2019, 9:52 AM IST
ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ನಾಯಕ ರಾಮಲಿಂಗ ರೆಡ್ಡಿ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಶನಿವಾರ ಬೆಂಗಳೂರಿನಲ್ಲಿ ಭೇಟಿಯಾಗಿದ್ದಾರೆ.
ಭೇಟಿಯ ನಂತರ ಮಾತನಾಡಿದ ರಾಮಲಿಂಗಾರೆಡ್ಡಿ, ಕ್ಷೇತ್ರದ ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಸಿಎಂ ಜತೆ ಚರ್ಚಿಸಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಸಿಎಂ ನೀಡಿದ್ದಾರೆ ಎಂದು ಹೇಳಿದರು.
ಬಿಜೆಪಿ ಸರ್ಕಾರ ನೂರು ದಿನ ಪೂರೈಸಿದೆ. ಕೇಂದ್ರ ಸರ್ಕಾರದ ಸಹಕಾರ ಸಿಕ್ಕಿದ್ದರೆ ಬಿಜೆಪಿ ಸರ್ಕಾರದ ಆಡಳಿತಕ್ಕೆ ಒಳ್ಳೆಯ ಹೆಸರು ಬರುವ ಸಾಧ್ಯತೆಯಿತ್ತು. ಆದರೆ ಬರ, ಅತಿವೃಷ್ಟಿ ವಿಚಾರದಲ್ಲಿ ಕೇಂದ್ರದ ನಿಲರ್ಕ್ಷ್ಯ ರಾಜ್ಯ ಸರ್ಕಾರದ ಬಗ್ಗೆ ಜನರಲ್ಲಿ ಬೇಸರ ಉಂಟು ಮಾಡಿದೆ. ಅತಿವೃಷ್ಟಿ, ಬರದಂತ ಪರಿಸ್ಥಿತಿಯಲ್ಲಿ ಯಾವುದೇ ಸರ್ಕಾರವಿದ್ದರೂ ಕೇಂದ್ರದ ನೆರವು ಅಗತ್ಯ. ಆದರೆ ಬಿಜೆಪಿ ಸರ್ಕಾರಕ್ಕೆ ಕೇಂದ್ರ ಸರಿಯಾಗಿ ಸ್ಪಂದಿಸಿಲ್ಲ ಎಂದರು.
ಮಾಜಿ ಸಿಎಂ ಕುಮಾರಸ್ವಾಮಿ, ಸಿಎಂ ಯಡಿಯೂರಪ್ಪ ಭೇಟಿಯಾಗಿರುವುದಕ್ಕೆ ರಾಜಕೀಯ ಕಾರಣ ಹುಡುಕುವುದು ಸರಿಯಲ್ಲ. ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ ಎಂದಿದ್ದಾರೆ. ಅವರು ಪ್ರತಿಪಕ್ಷ ನಾಯಕರಾಗಿರುವುದರಿಂದ ಅಂಕಿ ಅಂಶದ ಮಾಹಿತಿ ಇಟ್ಟುಕೊಂಡು ಹೇಳಿರಬಹುದು. ನಾನು ಕೇವಲ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಹೊರತು ಪಡಿಸಿ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.