![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jul 28, 2024, 6:33 AM IST
ಬೆಂಗಳೂರು: “ರಾಮನಗರ’ ಜಿಲ್ಲೆಯ ಹೆಸರನ್ನು “ಬೆಂಗಳೂರು ದಕ್ಷಿಣ’ ಎಂದು ಬದಲಾಯಿಸುವ ಬಗ್ಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿರುವ ವಿಚಾರದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಕದನ ತಾರಕಕ್ಕೇರಿದೆ.
ನನ್ನನ್ನು ಸರ್ವನಾಶ ಮಾಡಲು ಪ್ರತೀ ನಿತ್ಯ ರಾಜಕಾರಣ ಮಾಡುತ್ತಿದ್ದಾರೆ. ಅವರ ನಡೆ, ಹೆಜ್ಜೆ, ಭಾವನೆ, ಚಿಂತನೆ, ಅವರ ಆಚಾರ, ವಿಚಾರ ಎಲ್ಲವೂ ನಮಗೆ ಗೊತ್ತಿದೆ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ. ಬೇಕಿದ್ದರೆ ಈ ಮಾತನ್ನು ಬರೆದಿಟ್ಟುಕೊಳ್ಳಿ ಎಂದು ಶಿವಕುಮಾರ್ ಸವಾಲು ಹಾಕಿದ್ದಾರೆ.
2028ರ ಒಳಗೆ ನಾವು ಮತ್ತೆ ಅಧಿಕಾರಕ್ಕೆ ಬಂದು ರಾಮನಗರ ಎಂದು ಮರುನಾಮಕರಣ ಮಾಡುತ್ತೇವೆ. ರಾಮನಗರದ ಹೆಸರು ಬದಲಾವಣೆ ಮಾಡಿದರೆ ಸರ್ವನಾಶವಾಗುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಹೆಸರನ್ನು ಮತ್ತೆ ಬದಲಾವಣೆ ಮಾಡುವುದು ಕುಮಾರಸ್ವಾಮಿ ಅವರ ಹಣೆಯಲ್ಲಿ ಬರೆದಿಲ್ಲ, ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದರು.
ಜನರಿಗೆ ಸಂತೋಷ
ಈ ಜಿಲ್ಲೆಯ ಆಡಳಿತ ಕೇಂದ್ರ ರಾಮನಗರದಲ್ಲೇ ಇರುತ್ತದೆ. ನಮ್ಮ ತೀರ್ಮಾನಕ್ಕೆ ಪಕ್ಷಾತೀತವಾಗಿ ಜನರು ಸಂತೋಷವಾಗಿ ಒಪ್ರಿದ್ದಾರೆ ಎಂದು ಶಿವಕುಮಾರ್ ಹೇಳಿದರು.
ರಾಮನಗರ ಒಡೆದಿದ್ದು ಎಚ್‌ಡಿಕೆ:
ನಾನು ಬೆಂಗಳೂರು ಜಿ.ಪಂ. ಸದಸ್ಯನಾಗಿದ್ದೆ. ಕುಮಾರಸ್ವಾಮಿ ಹಾಗೂ ದೇವೇಗೌಡರು ಹಾಸನದಿಂದ ಬಂದಿದ್ದಾರೆ . ದೇವೇಗೌಡರು, ಕುಮಾರಸ್ವಾಮಿ ಅವರು ಇಲ್ಲಿಗೆ ಬಂದಾಗ ಇದು ಬೆಂಗಳೂರಾಗಿಯೇ ಇತ್ತು. ಅವರು ಪ್ರಧಾನಮಂತ್ರಿ, ಮುಖ್ಯಮಂತ್ರಿಯಾದಾಗಲೂ ಇದು ಬೆಂಗಳೂರಾಗಿಯೇ ಇತ್ತು.ಇದು ನಮ್ಮ ಜಿಲ್ಲೆ.
ನಾವು ಭಾರತೀಯರು ಎಂದು ಹೇಗೆ ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೋ, ಅದೇ ರೀತಿ ನಾವು ಬೆಂಗಳೂರಿನವರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದಾಗ ಜಿಲ್ಲೆಯನ್ನು ಒಡೆದು ಬೇರೆ ಹೆಸರು ಕೊಟ್ಟರು ಎಂದು ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.
ಬೆಂಗಳೂರು ಹೆಸರನ್ನುಏಕೆ ಕಳೆದುಕೊಳ್ಳಬೇಕು?
ಕೆಂಗಲ್ ಹನುಮಂತಯ್ಯ ವಿಧಾನಸೌಧ ಕಟ್ಟಿದ್ದು ಬೆಂಗಳೂರಿನಲ್ಲಿ, ರಾಮಕೃಷ್ಣ ಹೆಗಡೆ ಅವರು ಬಂದು ನಿಂತಿದ್ದು ಬೆಂಗಳೂರಿನಲ್ಲಿ. ಈ ಬೆಂಗಳೂರು ನಾಲ್ಕೈದು ಮುಖ್ಯಮಂತ್ರಿಗಳನ್ನು ಮಾಡಿದೆ. ನಮ್ಮ ಜಿಲ್ಲೆಯನ್ನು ಪ್ರತ್ಯೇಕ ಜಿಲ್ಲೆಯಾಗಿ ಮಾಡುವಾಗ ಬೆಂಗಳೂರು ಹೆಸರು ಉಳಿಸಿಕೊಳ್ಳುವಂತೆ ನಾವು ಸಲಹೆ ನೀಡಿದ್ದೆವು. ಬೆಂಗಳೂರು ಇಂದು ವಿಶ್ವಮಟ್ಟದಲ್ಲಿ ಹೆಸರು ಮಾಡಿದೆ. ನಮ್ಮ ಪೂರ್ವಜರು ಕೊಟ್ಟಿರುವ ಈ ಹೆಸರನ್ನು ನಾವು ಏಕೆ ಕಳೆದುಕೊಳ್ಳಬೇಕು? ಎಂದು ಪ್ರಶ್ನಿಸಿದರು.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.