ರಾಮನಗರ ಜಿಲ್ಲೆಯ ಕೋವಿಡ್ ಸ್ಥಿತಿ ಪರಿಶೀಲಿಸಿದ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ
ರಾಮನಗರ, ಚನ್ನಪಟ್ಟಣ, ಮಾಗಡಿ ಆಸ್ಪತ್ರೆಗಳ ಆಮ್ಲಜನಕ ಘಟಕ ಈ ತಿಂಗಳೇ ಆರಂಭ
Team Udayavani, Aug 5, 2021, 9:00 PM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟಕ್ಕೆ ಸೇರ್ಪಡೆಯಾದ ಮರುದಿನವೇ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ರಾಮನಗರ ಜಿಲ್ಲೆಯ ಕೋವಿಡ್ ಪರಿಸ್ಥಿತಿಯನ್ನು ಅವಲೋಕನ ಮಾಡಿದರು.
ಮೂರನೇ ಅಲೆಯನ್ನು ಪರಿಣಾಮಕಾರಿಯಾಗಿ ತಡೆಯುವುದು ಸೇರಿ ಇಡೀ ಜಿಲ್ಲೆಯಲ್ಲಿ ಕೈಗೊಂಡಿರುವ ಲಸಿಕೀರಣ, ಆರೋಗ್ಯ ಮೂಲಸೌಕರ್ಯಗಳ ಅಭಿವೃದ್ಧಿ ಇನ್ನಿತರೆ ಕ್ರಮಗಳ ಬಗ್ಗೆ ವ್ಯಾಪಕ ಪರಿಶೀಲನೆ ನಡೆಸಿದರಲ್ಲದೆ, ಬಾಕಿ ಯಾವುದಾದರೂ ಕೆಲಸ ಇದ್ದರೆ ಅದನ್ನು ವೇಗವಾಗಿ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳಿಕ ಮಾತನಾಡಿದ ಸಚಿವರು, “ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ 0.22ರಷ್ಟಿದೆ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ. ಹಾಗಂತ ಎಚ್ಚರ ತಪ್ಪುವುದೂ ಬೇಡ. ಪರೀಕ್ಷೆ, ಲಸಿಕೆ ಹಾಗೂ ಆರೋಗ್ಯ ಮೂಲಸೌಕರ್ಯಗಳ ಬಗ್ಗೆ ನಿತ್ಯವೂ ಗಮನವಿಟ್ಟು ಕೆಲಸ ಮಾಡಬೇಕು’ ಎಂದರು.
ಅಗಸ್ಟ್ 15ರೊಳಗೆ ಬಳಕೆಗೆ ಮುಕ್ತ
ರಾಮನಗರ ಜಿಲ್ಲಾಸ್ಪತ್ರೆ ಹಾಗೂ ಚನ್ನಪಟ್ಟಣ, ಮಾಗಡಿ ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದಕ ಘಟಕಗಳನ್ನು ಸ್ಥಾಪಿಸುವ ಕಾಮಗಾರಿ ಭರದಿಂದ ಸಾಗುತ್ತಿದೆ. ಈ ಘಟಕಗಳಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ಇದೇ 15ರ ಹೊತ್ತಿಗೆ ಬಳಕೆ ಮಾಡಿಕೊಳ್ಳಲಾಗುವುದು. ಆ ದಿನದೊಳಗೆ ಬಾಕಿ ಇರುವ ಎಲ್ಲ ಕೆಲಸಗಳನ್ನು ಮುಗಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದರು
ಗುರಿಗಿಂತ ಹೆಚ್ಚು ಪರೀಕ್ಷೆ
ಪ್ರತಿ ದಿನವೂ ಜಿಲ್ಲೆಯಲ್ಲಿ 1,800 ಆರ್ಟಿಪಿಸಿಆರ್ ರಾಟ್ ಪರೀಕ್ಷೆಗಳನ್ನು ಮಾಡುವ ಗುರಿ ಹಾಕಿಕೊಳ್ಳಲಾಗಿದೆ. ಆದರೆ, ಆ ಗುರಿಯನ್ನು ಮೀರಿ 2,400 ಪರೀಕ್ಷೆಗಳನ್ನು ಮಾಡುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದು ಶ್ಲಾಘನೀಯವಾದ ಕೆಲಸ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.
ಲಸಿಕೀಕರಣವೂ ಬಿರುಸು
ಜಿಲ್ಲೆಯಲ್ಲಿ ಕೋವಿಡ ಲಸಿಕೆ ನೀಡುವುದನ್ನು ಚುರುಕುಗೊಳಿಸಲಾಗಿದೆ. ಈಗಾಗಲೇ 18 ವರ್ಷ ಮೇಲ್ಪಟ್ಟ ಶೇ.54 ರಷ್ಟು ಜನಕ್ಕೆ ಲಸಿಕೆ ನೀಡಲಾಗಿದೆ. ಇದರಲ್ಲಿ ಸೆಕೆಂಡ್ ಡೋಸ್ ಪಡೆದವರು ಶೇ.34ರಷ್ಟು ಇದ್ದಾರೆಂದು ಸಚಿವರು ಮಾಹಿತಿ ನೀಡಿದರು.
ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ರಾಕೇಶ್ ಸಿಂಗ್, ಜಿಪಂ ಸಿಇಒ ಇಕ್ರಂ ಸೇರಿ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.