ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಕಿರುತೆರೆ ಕಲಾವಿದೆ ಮೇಲೆ ಅತ್ಯಾಚಾರ


Team Udayavani, Mar 1, 2020, 8:10 PM IST

telivision-artist-min

ಬೆಂಗಳೂರು: ಸಿನಿಮಾಗಳಲ್ಲಿ ಅವಕಾಶ ಕೊಡಿಸುವುದಾಗಿ ಕಿರುತೆರೆ ನಟಿಯೊಬ್ಬರ ಮೇಲೆ ನಿರ್ಮಾಪಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಈ ಸಂಬಂಧ ಹೆಬ್ಟಾಳ ನಿವಾಸಿ 26 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಹೈದ್ರಾಬಾದ್‌ ಮೂಲದ ಸಂಗಮೇಶ್‌ ಪಾಟೀಲ್‌ ಎಂಬಾತನ ವಿರುದ್ಧ ಅಮೃತಹಳ್ಳಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಸಂತ್ರಸ್ತೆ 2013ರಿಂದ ಕಿರುತೆರೆ ಕಲಾವಿದೆಯಾಗಿದ್ದು, ಈ ಸಂದರ್ಭದಲ್ಲಿ ಆರೋಪಿ ಕರೆ ಮಾಡಿ ಸಿನಿಮಾ ನಿರ್ಮಾಪಕ ಎಂದು ಪರಿಚಯಿಸಿಕೊಂಡು ಉತ್ತಮ ಅವಕಾಶ ಕೊಡುವುದಾಗಿ ನಂಬಿಸಿದ್ದಾನೆ. ಆರೋಪಿಯನ್ನು ಭೇಟಿಯಾದಾಗ ಅಸಭ್ಯವಾಗಿ ವರ್ತಿಸಿದ್ದಾನೆ. ಕೆಲ ದಿನಗಳ ನಂತರ ಮತ್ತೂಮ್ಮೆ ಕರೆ ಮಾಡಿ ಹೈದ್ರಾಬಾದ್‌ಗೆ ಬಂದರೆ ಸಿನಿಮಾವೊಂದರಲ್ಲಿ ನಾಯಕನಟಿ ಪಾತ್ರ ಕೊಡಿಸುವುದಾಗಿ ಹೇಳಿ ಕರೆಸಿಕೊಂಡು, ಜ್ಯೂಸ್‌ನಲ್ಲಿ ಮತ್ತು ಬರುವ ಔಷಧಿ ಹಾಕಿ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಆತನೇ ಸಮಾಧಾನಪಡಿಸಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದರು.

ವಿಡಿಯೋ ಬ್ಲಾಕ್ ಮೇಲ್
2014ರಲ್ಲಿ ಕರೆ ಮಾಡಿದ ಸಂಗಮೇಶ್‌ ಪಾಟೀಲ್‌, ಈ ಕೂಡಲೇ ಗೋವಾಗೆ ಬರುವಂತೆ ಹೇಳಿದ್ದಾನೆ. ಸಂತ್ರಸ್ತೆ ನಿರಾಕರಿಸಿದಾಗ “ನಿನ್ನ ನಗ್ನ ವಿಡಿಯೋಗಳು ತನ್ನ ಬಳಿ ಇದ್ದು, ಅವುಗಳನ್ನು ಸಾಮಾಜಿಕ ಜಾಲತಾಲಣಗಳಲ್ಲಿ ಅಪ್‌ಲೋಡ್‌ ಮಾಡುತ್ತೇನೆ’ ಹೆದರಿಸಿದ್ದಾನೆ. ಅದರಿಂದ ಗಾಬರಿಗೊಂಡ ಆಕೆ, ಗೋವಾಕ್ಕೆ ಹೋದಾಗ ಅಲ್ಲಿಯೂ ದೌರ್ಜನ್ಯ ಎಸಗಿದ್ದಾನೆ. ಅನಂತರ ಮುಂಬೈನಲ್ಲಿ ಹೀಗೆ ಐದಾರು ಬಾರಿ ಸಂತ್ರಸ್ತೆ ಮೇಲೆ ನಿರಂತರ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ, ಆಕೆಯ ಮನೆಗೆ ಬಂದು ಹೋಗುತ್ತಿದ್ದು, ಪ್ರತ್ಯೇಕ ಮನೆ ಮಾಡುವಂತೆ ಸೂಚಿಸಿದ್ದ. ಈ ಸಂದರ್ಭದಲ್ಲಿ ಮದುವೆ ಮಾಡಿಕೊಳ್ಳುವಂತೆ ಸಂತ್ರಸ್ತೆ ಕೇಳಿಕೊಂಡಾಗ ಒಪ್ಪಿಕೊಂಡಿದ್ದ. ಆದರೆ, ಆರೋಪಿ ಹಿನ್ನೆಲೆ ಪರಿಶೀಲಿಸಿದಾಗ ಆತನಿಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿರುವುದು ಗೊತ್ತಾಗಿದೆ. ಈ ವಿಚಾರ ಪ್ರಶ್ನಿಸಿದ ಸಂತ್ರಸ್ತೆಗೆ ಆರೋಪಿ, ಸುಪಾರಿ ಕೊಟ್ಟು ಕೊಲ್ಲಿಸುವುದಾಗಿ ಬೆದರಿಕೆ ಹಾಕಿದ್ದಾನೆ.

ಈ ಎಲ್ಲ ಬೆಳವಣಿಗೆಗಳ ಬಗ್ಗೆ ತಿಳಿದುಕೊಂಡ ಆರೋಪಿಯ ಪತ್ನಿ, ಸಂತ್ರಸ್ತೆಗೆ ಕರೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳುವುದಾಗಿ ಹೈದ್ರಾಬಾದ್‌ಗೆ ಕರೆಸಿಕೊಂಡು, ಆಕೆಯ ವಿರುದ್ಧವೇ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸಿದ್ದಳು ಎಂದು ಸಂತಸ್ತೆ ದೂರಿನಲ್ಲಿ ಉಲ್ಲೇಖೀಸಿದ್ದಾರೆ.

ಈ ಹಿನ್ನೆಲೆಯಲ್ಲಿ ತನ್ನ ನಗ್ನ ವಿಡಿಯೋ ಮತ್ತು ಚಿತ್ರಗಳನ್ನು ಅಪ್‌ಲೋಡ್‌ ಮಾಡುವುದಾಗಿ ಬ್ಲಾಕ್‌ವೆುàಲ್‌ ಮಾಡುತ್ತಿದಲ್ಲದೆ, ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ವಂಚಿಸಿದ ಆರೋಪಿಯ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಸಂತ್ರಸ್ತೆ ದೂರು ನೀಡಿದ್ದಾರೆ ಎಂದು ಅಮೃತಹಳ್ಳಿ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.