Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್
Team Udayavani, Nov 8, 2024, 11:42 PM IST
ಮಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿ ಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡುಬಿದಿರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್ ಅನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ನ್ಯಾಯಾಲಯ ದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು.
ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ ಮುಖಾಂತರ ಇತ್ಯರ್ಥಪಡಿಸಿಕೊಳ್ಳ ಬಹುದಾದ ಪ್ರಕರಣಗಳು: ಮೋಟಾರು ವಾಹನ ಅಪಘಾತ ಪ್ರಕರಣಗಳು, ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳು, ಚೆಕ್ ಅಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ವಿಚ್ಚೇದನ ಪ್ರಕರಣವನ್ನು ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಗ್ರಾಹಕರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ಭೂಸ್ವಾ ಧೀನ ಹಾಗೂ ಭೂ ಸ್ವಾ ಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಪಟ್ಟ ಪ್ರಕರಣಗಳು, ವೇತನ ಭತ್ಯೆಗಳಿಗೆ ಸಂಬಂಸಿದ ಸೇವಾ ಪ್ರಕರಣಗಳು, ಪಿಂಚಣಿ ಪ್ರಕರಣಗಳು, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಪ್ರಕರಣಗಳು, ಕಾನೂನಿನಾತ್ಮಕವಾಗಿ ರಾಜಿಯಾಗಬಲ್ಲ ಎಲ್ಲ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು.
ಲೋಕ ಅದಾಲತ್‌ನಲ್ಲಿ ನ್ಯಾಯಾಧಿಧೀಶರು ಹಾಗೂ ಸಂಬಂಧಪಟ್ಟ ಪ್ರಕರಣಗಳ ವಿವಿಧ ಇಲಾಖೆಗಳ ಅ ಧಿಕಾರಿಗಳು ಮಧ್ಯಸ್ಥಿಕೆ ವಹಿಸುತ್ತಾರೆ. ಇಬ್ಬರು ಪಕ್ಷಗಾರರು ಪ್ರಕರಣವನ್ನು ರಾಜೀ ಮಾಡಕೊಳ್ಳಲು ಸೂಕ್ತ ಮಾರ್ಗದರ್ಶನ ವನ್ನು ನೀಡಲಾಗುತ್ತದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣ ವಾಗಿ ಮರುಪಾವತಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.