Ration Card; ಅನರ್ಹರ ಬಿಪಿಎಲ್ ಕಾರ್ಡ್ ರದ್ದುಪಡಿಸಿ: ಸಿಎಂ ನಿರ್ದೇಶನ
ನಕಲಿ ಕಾರ್ಡ್ ಹಾವಳಿ ಬಗ್ಗೆ ತೀವ್ರ ಕಳವಳ, ರಾಜ್ಯದ ಶೇ. 80 ಜನರ ಬಳಿ ಇದೆ ಪಡಿತರ ಚೀಟಿ
Team Udayavani, Jul 9, 2024, 7:30 AM IST
ಬೆಂಗಳೂರು: ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹಾರ ಹಾಗೂ ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಸಿಇಒಗಳ ಸಭೆಯಲ್ಲಿ ನಕಲಿ ಬಿಪಿಎಲ್ ಕಾರ್ಡ್ ಹಾವಳಿ ಬಗ್ಗೆ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದು ಅನರ್ಹರ ಕಾರ್ಡ್ ರದ್ದುಪಡಿಸಿ ಅರ್ಹರಿಗೆ ಮಾತ್ರ ಸರಕಾರಿ ಯೋಜನೆಗಳ ಫಲ ದೊರೆಯುವಂತೆ ಎಚ್ಚರಿಕೆ ವಹಿಸಿ ಎಂದು ನಿರ್ದೇಶನ ನೀಡಿದ್ದಾರೆ.
ರಾಜ್ಯದಲ್ಲಿ ಶೇ. 80 ಜನರು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ. ಆದರೆ ತಮಿಳುನಾಡಿನಲ್ಲಿ ಶೇ. 40ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ. 5.67 ಇರಬೇಕು. ಆದರೆ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಿದ್ದೇವೆ. ಇದರ ಅರ್ಥವೇನು ಎಂದು ಪ್ರಶ್ನಿಸಿದರು.
ಜನರನ್ನು ಅನಗತ್ಯ ಅಲೆದಾಡಿಸಬೇಡಿ. ಅವರ ದೂರುಗಳನ್ನು ಆಲಿಸಿ, ಅಗತ್ಯ ಪರಿಹಾರ ಒದಗಿಸಬೇಕು. ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ 3,784 ಅರ್ಜಿಗಳು ಇತ್ಯರ್ಥಪಡಿಸಲು ಬಾಕಿಯಿದ್ದು ಸಕಾಲದ ಅವಧಿಯ ಮಿತಿಯಲ್ಲಿಯೇ ಇವೆ. ಇನ್ನು ಮುಂದೆ 30 ದಿನಗಳ ಒಳಗಾಗಿ ವಿಲೇವಾರಿ ಮಾಡಬೇಕು ಎಂದರು.
ದೇಶದಲ್ಲೇ ಅಧಿಕ ಜನರಿಗೆ ಪಿಂಚಣಿ
ರಾಜ್ಯದಲ್ಲಿ 76 ಲಕ್ಷ ಜನರಿಗೆ ಪಿಂಚಣಿ ನೀಡುತ್ತಿದ್ದು, ದೇಶದಲ್ಲೇ ಅಧಿಕವಾಗಿದೆ. ಕೇಂದ್ರ ಸರಕಾರದ ನಿರ್ದೇಶನದಂತೆ ಎನ್‌ಪಿಸಿಐ ಮ್ಯಾಪಿಂಗ್ ಮಾಡುವಲ್ಲಿ 2 ಲಕ್ಷ ಪ್ರಕರಣಗಳು ಬಾಕಿಯಿವೆ. ಇದನ್ನು ಆದ್ಯತೆ ಮೇರೆಗೆ ಮಾಡಲು ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಎಷ್ಟು ಪಿಂಚಣಿ ಅರ್ಜಿಗಳು ಬಾಕಿಯಿವೆ ಎಂಬುವುದನ್ನು ಆಯಾ ಜಿಲ್ಲಾಧಿಕಾರಿಗಳು ಪರಿಶೀಲಿಸಿ ಕೂಡಲೇ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಬೇಕು.
ಗ್ರಾಮಗಳಲ್ಲಿ ಸಾವು ಸಂಭವಿಸಿದ ತತ್‌ಕ್ಷಣ ಆಯಾ ಪಿಂಚಣಿ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ 92 ಉಪ ನೋಂದಣಿ ಹಾಗೂ 15 ಜಿಲ್ಲಾ ನೋಂದಣಿ ಕಚೇರಿಗಳು ಖಾಸಗಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಅವುಗಳಿಗೆ ಸ್ವಂತ ಕಟ್ಟಡ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.