Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
ಪರಿಷ್ಕರಿಸುವಾಗ ಅರ್ಹರಿಗೆ ಬಿಪಿಎಲ್ ಕಾರ್ಡ್ ಕೊಡುತ್ತೇವೆ
Team Udayavani, Nov 17, 2024, 7:10 AM IST
ಮಂಗಳೂರು: ರಾಜ್ಯದಲ್ಲಿ ಪಡಿತರ ನೀಡುವುದಕ್ಕೆ ಹಣದ ಕೊರತೆ ಇಲ್ಲ. ಪರಿಷ್ಕರಣೆ ಮಾಡಿದಾಗ ಬಿಪಿಎಲ್ ವ್ಯಾಪ್ತಿಗೆ ಬರದವರನ್ನು ಎಪಿಎಲ್‌ಗೆ ಪರಿವರ್ತಿಸಲಾಗಿದೆ.ಎಪಿಎಲ್‌ಗೆ ಸೇರಿಸಿದವರ ಕಾರ್ಡ್ ರದ್ದು ಮಾಡುವುದಿಲ್ಲ. ಅರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲು ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಅವರು ಮಾಧ್ಯಮದೊಂದಿಗೆ ಮಾತನಾಡಿದರು. ರಾಜ್ಯದಲ್ಲಿ 11 ಲಕ್ಷ ಪಡಿತರ ಚೀಟಿ ರದ್ದಾಗಿದೆ ಎನ್ನುವ ಶಾಸಕ ಸುನೀಲ್ ಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ 6.50 ಕೋಟಿ ಜನರಿದ್ದಾರೆ. 4.50 ಕೋಟಿ ಕಾರ್ಡ್ ಕೊಟ್ಟಿದ್ದೇವೆ. ಅರ್ಹರಲ್ಲದವರು ಜಾಸ್ತಿ ಇರುವ ಶಂಕೆಯಿರುವ ಕಾರಣ ಪರಿಷ್ಕರಣೆಗೆ ನಿಯಾಮವಳಿ ಹಾಕಿಕೊಂಡಿದ್ದೇವೆ.
ಪರಿಷ್ಕರಿಸುವಾಗ ಅರ್ಹರಿಗೆ ಬಿಪಿಎಲ್ ಕಾರ್ಡ್ ಕೊಡುತ್ತೇವೆ. ನಮ್ಮಲ್ಲಿ ಇದಕ್ಕಾಗಿ 8 ಸಾವಿರ ಕೋ. ರೂ. ಇದೆ. ಇದರಲ್ಲಿ ತಿಂಗಳಿಗೆ 650 ಕೋಟಿಯೂ ಖರ್ಚು ಆಗುವುದಿಲ್ಲ ಎಂದು ಸುನಿಲ್ ಕುಮಾರ್ ಅವರಿಗೆ ಮನವರಿಕೆ ಮಾಡುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.