57,000 ಕೋ. ರೂ. ಲಾಭಾಂಶ ಪಾವತಿಗೆ ಆರ್‌ಬಿಐ ಅಸ್ತು
Team Udayavani, Aug 16, 2020, 1:02 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಸರಕಾರಕ್ಕೆ ವಾರ್ಷಿಕ 57 ಸಾವಿರ ಕೋಟಿ ರೂ.ಗಿಂತಲೂ ಅಧಿಕ ಲಾಭಾಂಶವನ್ನು ಪಾವತಿ ಮಾಡಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ನಿರ್ಧರಿಸಿದೆ. ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಆರ್‌ಬಿಐ ಕೇಂದ್ರೀಯ ಮಂಡಳಿ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಕೊರೊನಾ ಲಾಕ್‌ಡೌನ್ ಸರಕಾರದ ಆದಾಯ ಸಂಗ್ರಹದ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, ಎಪ್ರಿಲ್-ಜೂನ್ ಅವಧಿಯಲ್ಲಿ ವಿತ್ತೀಯ ಕೊರತೆಯು ದಾಖಲೆಯ 6.62 ಲಕ್ಷ ಕೋಟಿ ರೂ.ಗೆ ಏರಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಪ್ರಸ್ತುತ ಆರ್ಥಿಕ ಪರಿಸ್ಥಿತಿ, ಜಾಗತಿಕ ಮತ್ತು ದೇಶೀಯ ಸವಾಲುಗಳು ಸೇರಿದಂತೆ ಆರ್ಥಿಕತೆಗೆ ಸಂಬಂಧಿಸಿದ ವಿವಿಧ ಅಂಶಗಳನ್ನು ಪರಿಗಣಿಸಿ ಪ್ರಸಕ್ತ ವಿತ್ತೀಯ ವರ್ಷದಲ್ಲಿ ಸರಕಾರಕ್ಕೆ ಲಾಭಾಂಶ 57,128 ಕೋಟಿ ರೂ. ವರ್ಗಾಯಿಸಲು ಆರ್‌ಬಿಐ ನಿರ್ಧರಿಸಿದೆ. ಕಳೆದ ವರ್ಷ ಆರ್‌ಬಿಐ 1.23 ಲಕ್ಷ ಕೋಟಿ ರೂ. ಲಾಭಾಂಶ ಮತ್ತು ಹೆಚ್ಚುವರಿ ಬಂಡವಾಳದ ರೂಪದಲ್ಲಿ 52,640 ಕೋಟಿ ರೂ.ಗಳನ್ನು ಸರಕಾರಕ್ಕೆ ಪಾವತಿಸಿತ್ತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.