Repo Rate: ಸತತ 11ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್ ಶಕ್ತಿಕಾಂತ್ ದಾಸ್
ಹಣಕಾಸು ನೀತಿ ಸಮಿತಿ ಸಭೆ ನಡೆದಿದ್ದು, ಶುಕ್ರವಾರ (ಡಿ. 06) ಬೆಳಗ್ಗೆ ಮುಕ್ತಾಯಗೊಂಡಿತ್ತು.
Team Udayavani, Dec 6, 2024, 11:47 AM IST
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (Reserve Bank Of india) ಸತತ 11ನೇ ಬಾರಿಯೂ ರೆಪೋ (Repo Rate) ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿಯಲ್ಲಿ ಮುಂದುವರಿಸುವ ನಿರ್ಧಾರ ಕೈಗೊಂಡಿರುವುದಾಗಿ ಶುಕ್ರವಾರ (ಡಿ.06) ತಿಳಿಸಿದೆ.
ಅತಿಯಾದ ಹಣದುಬ್ಬರ ಮತ್ತು ಪ್ರಸಕ್ತ ಆರ್ಥಿಕ ವರ್ಷದ ಹಣಕಾಸು ಪ್ರಗತಿಯ ಗುರಿ ಮುಟ್ಟುವ ಹಿನ್ನೆಲೆಯಲ್ಲಿ ರೆಪೋ ದರದಲ್ಲಿ ಈ ಹಿಂದಿನಂತೆ ಶೇ.6.5ರಲ್ಲೇ ಮುಂದುವರಿಸುವ ತೀರ್ಮಾನ ಮೂರು ದಿನಗಳ ಕಾಲ ನಡೆದ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಆರ್ ಬಿಐ (RBI) ಗವರ್ನರ್ ಶಕ್ತಿಕಾಂತ್ ದಾಸ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅಧ್ಯಕ್ಷತೆಯಲ್ಲಿ ಮೂರು ದಿನಗಳ ಕಾಲ ನಡೆದ ಹಣಕಾಸು ನೀತಿ ಸಮಿತಿ ಸಭೆ ನಡೆದಿದ್ದು, ಶುಕ್ರವಾರ (ಡಿ. 06) ಬೆಳಗ್ಗೆ ಮುಕ್ತಾಯಗೊಂಡಿತ್ತು.
ಇತ್ತೀಚೆಗಿನ ವರ್ಷಗಳಲ್ಲಿ ಜಗತ್ತಿನಲ್ಲಿ ಒಂದರ ನಂತರ ಮತ್ತೊಂದು ಬಿಕ್ಕಟ್ಟು ಉದ್ಭವಿಸುತ್ತಲೇ ಇದೆ. ಆದರೆ ಭಾರತದ ಆರ್ಥಿಕತೆ ಬಲಿಷ್ಠವಾಗುತ್ತಿದೆ. ಆದರೂ ನಾವು ಜಾಗತಿಕ ಮಟ್ಟದ ಬೆಳವಣಿಗೆ ಬಗ್ಗೆ ತೀವ್ರ ನಿಗಾ ಇರಿಸಬೇಕಾದ ಅಗತ್ಯವಿದೆ ಎಂದು ದಾಸ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.