Reality Check: ʼನಮ್ಮ ಅತ್ತೆ ಹೊಡೆಯುತ್ತಿದ್ದಾರೆ ಸಹಾಯ ಮಾಡುವಿರಾʼ ಎಂದ ಸಚಿವೆ ಲಕ್ಷ್ಮೀ
ತುಮಕೂರಿನ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆ ಮಾಡಿದ ಹೆಬ್ಬಾಳ್ಕರ್
Team Udayavani, Sep 3, 2024, 9:04 PM IST
ತುಮಕೂರು: “ನಮ್ಮ ಅತ್ತೆ ನನಗೆ ಹೊಡೆಯುತ್ತಿದ್ದಾರೆ, ನನಗೆ ಸಹಾಯ ಮಾಡುತ್ತೀರಾ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಹಿಳಾ ಸಾಂತ್ವನ ಕೇಂದ್ರಕ್ಕೆ ದೂರವಾಣಿ ಕರೆ ಮಾಡಿ ಸಹಾಯ ಕೇಳುವ ಮೂಲಕ ರಿಯಾಲಿಟಿ ಚೆಕ್ ನಡೆಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಯುತ್ತಿದ್ದ ವೇಳೆ ಅಧಿಕಾರಿಗಳಿಗೆ ಇಲ್ಲಿ ಮಹಿಳಾ ಸಹಾಯವಾಣಿಗಳು ನೊಂದ ಮಹಿಳೆಯರಿಗೆ ಸರಿಯಾಗಿ ಸ್ಪಂದನೆ ಮಾಡುತ್ತಿವೆಯೇ ಎಂದು ಪ್ರಶ್ನಿಸಿದರು. ಸಭೆಯಲ್ಲಿದ್ದ ಮಹಿಳಾ ಸಹಾಯವಾಣಿಯ ಮೇಲ್ವಿಚಾರಕಿ ಪಾರ್ವತಮ್ಮ ರಾಜಕುಮಾರ್ ರನ್ನು ಪ್ರಶ್ನಿಸಿ, ಸಹಾಯವಾಣಿಯ ನಂಬರ್ ಕೇಳಿದರು.
ಬಳಿಕ, ಜಿಲ್ಲಾಧಿಕಾರಿ ಮೊಬೈಲ್‌ನಿಂದ ಸಭೆಯಲ್ಲಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ದೂರವಾಣಿ ಕರೆ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನಮ್ಮ ಅತ್ತೆ ಹೊಡೆದಿದ್ದಾರೆ, ಸಹಾಯ ಮಾಡ್ತೀರಾ ಎಂದು ತುಮಕೂರಿನ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆ ಮಾಡಿ ಶಾಕ್ ಕೊಟ್ಟರು. ಈ ಮೂಲಕ ಸಹಾಯವಾಣಿ ಕಾರ್ಯಕ್ಷಮತೆ ಪರಿಶೀಲಿಸಿದರು.
ಸಹಾಯವಾಣಿಯ ದೂರವಾಣಿ 24 ಗಂಟೆ ಸಕ್ರಿಯವಾಗಿರುತ್ತೆ ಎಂದ ತಕ್ಷಣ ಅಧಿಕಾರಿಗಳು, ಮೊದಲ ಬಾರಿಗೆ ಸಚಿವೆ ಕರೆ ಮಾಡಿದಾಗ ಸ್ವೀಕರಿಸಲಿಲ್ಲ, 2ನೇ ಬಾರಿಗೆ ಕರೆ ಸ್ವೀಕರಿಸಿದ ಸಹಾಯವಾಣಿ ಕೇಂದ್ರದ ಸಿಬ್ಬಂದಿ, ಒಂದು ಸಮಸ್ಯೆಯಿದೆ. ನನ್ನ ಅತ್ತೆ ಹೊಡೆದಿದ್ದಾರೆ. ನಾನು ಶಿರಾದಿಂದ ಕಾಲ್ ಮಾಡ್ತಿದ್ದೀನಿ ಎಂದಾಗ ಸಹಾಯವಾಣಿ ಸಿಬ್ಬಂದಿ ಬೆಳಗ್ಗೆ ಬಂದಿದ್ದವರಾ.. ನೀವು ಎಂದು ಕೇಳಿದರು.
ಅದಕ್ಕೆ ಸಚಿವೆ, ಇಲ್ಲ, ನಾನು ಈಗಷ್ಟೇ ಕಾಲ್ ಮಾಡಿದ್ದೇನೆಂದರು. ಕೊನೆಗೆ ನಾನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಂದು ಸಿಬ್ಬಂದಿ ಬಳಿ ಪರಿಚಯ ಹೇಳಿಕೊಂಡರು. ಸಹಾಯವಾಣಿ ಸಕ್ರಿಯವಾಗಿದ್ದಕ್ಕೆ ಸಚಿವೆ ಅಭಿನಂದನೆ ಸಲ್ಲಿಸಿದರು. ಸಹಾಯವಾಣಿ ವಿಭಾಗದಲ್ಲಿ ನಾಲ್ವರು ಹಗಲು-ರಾತ್ರಿ ಕೆಲಸ ಮಾಡುತ್ತಾರೆಂದು ಅಧಿಕಾರಿಗಳು ತಿಳಿಸಿದರು. ಈ ವೇಳೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಪಂ ಸಿಇಒ ಜಿ.ಪ್ರಭು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.