ಸಚಿವ ಸ್ಥಾನ ಸಿಗದಿದ್ರೆ ಅತೃಪ್ತ ಶಾಸಕರು ಯಡ್ಯೂರಪ್ಪರನ್ನು ಹರಿದು ನುಂಗ್ತಾರೆ: ಡಿಕೆಶಿ
Team Udayavani, Jul 25, 2019, 6:56 PM IST
ಬೆಂಗಳೂರು: ಬಿ.ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಬಾಂಬೆಯಲ್ಲಿ ಕೂತಿರುವ ಸಂತೃಪ್ತರಿಗೆ ಸಚಿವ ಸ್ಥಾನ ನೀಡದಿದ್ದರೆ ಅವರು ಯಡಿಯೂರಪ್ಪನವರನ್ನು ಹರಿದು ನುಂಗಿ ಬಿಡುತ್ತಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಪ್ರಸ್ತುತ ರಾಜ್ಯ ರಾಜಕೀಯದ ವಿಚಾರವಾಗಿ ಗುರುವಾರ ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರ ಜತೆಗೆ ಮಾತನಾಡಿದ ಡಿಕೆ ಶಿವಕುಮಾರ್, ‘ರಾಜೀನಾಮೆ ಕೊಟ್ಟು ಹೋಗಿರುವ ಶಾಸಕರಿಗೆ ಸಚಿವ ಸ್ಥಾನ ಸಿಗದಿದ್ದರೆ ಯಡಿಯೂರಪ್ಪನವರ ಕಥೆ ಗೋವಿಂದಾ’ ಹಾಸ್ಯ ಚಟಾಕಿ ಹಾರಿಸಿದರು. ಈ ವೇಳೆ ಅವರು ಹೇಳಿದ್ದಿಷ್ಟು…
30-40 ವರ್ಷಗಳ ಕಾಲ ಸಾಕಿ ಸಲಹಿಸಿ ಇಷ್ಟು ದೊಡ್ಡಮಟ್ಟಕ್ಕೆ ಬೆಳೆಸಿದ ನಮ್ಮನ್ನು ಕಾರ್ಯಕರ್ತರನ್ನೇ ಸಂತೃಪ್ತರು ಬಿಡಲಿಲ್ಲ. ಇನ್ನು ಬಿಜೆಪಿ ಸರ್ಕಾರದಲ್ಲಿ ಅವರಿಗೆ ಸಚಿವ ಸ್ಥಾನ ಸಿಗದಿದ್ದರೆ ಬಿಡ್ತಾರಾ? ಯಡಿಯೂರಪ್ಪನವರನ್ನು ಹರಿದು ನುಂಗ್ತಾರೆ.
ಯಡಿಯೂರಪ್ಪನವರು ಪ್ರಮಾಣ ವಚನ ಸ್ವೀಕಾರ ಮಾಡಬೇಕಾದರೆ ಅಷ್ಟೂ 15 ಜನರಲ್ಲಿ ಕುಮಟಳ್ಳಿ ಒಬ್ಬ ಮಾತ್ರ ಸಚಿವ ಸ್ಥಾನ ಬಿಡಬಹುದು. ಮಿಕ್ಕ ಎಲ್ಲರೂ ಸಚಿವ ಸ್ಥಾನಕ್ಕೆ ಪಟ್ಟು ಹಿಡಿತಾರೆ. ಒಂದು ವೇಳೆ ಅವರಿಗೆ ಸಿಗದಿದ್ದರೆ ಯಡಿಯೂರಪ್ಪನವರ ಪ್ಯಾಂಟು, ಶರ್ಟು ಹರಿದುಹಾಕ್ತಾರೆ. ಒಬ್ಬ ಜೇಬು ಕಿತ್ತುಕೊಂಡರೆ, ಮತ್ತೊಬ್ಬ ಪ್ಯಾಂಟು, ಇನ್ನೊಬ್ಬ ಶರ್ಟು ಕಿತ್ತುಕೊಳ್ತಾರೆ. ಅಷ್ಟೇಅಲ್ಲ ಯಡಿಯೂರಪ್ಪನವರ ಸುತ್ತಮುತ್ತ ಇರುವ ಮುತ್ತು ರತ್ನಗಳನ್ನೆಲ್ಲಾ ಕಿತ್ತು ಹಾಕ್ತಾರೆ.’
ಯಡಿಯೂರಪ್ಪನವರಿಗೆ ಇನ್ನು ಅವರಿಗೆ ಗೊತ್ತಿಲ್ಲ. ಅಲ್ಲಿರುವವರ ಪೈಕಿ ಒಬ್ಬನಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವಸ್ಥಾನ ಬೇಕು, ಒಬ್ಬನಿಗೆ ಪವರ್ ಬೇಕು, ಒಬ್ಬನಿಗೆ ಡಿಡಬ್ಲ್ಯೂಡಿ, ಇನ್ನೊಬ್ಬನಿಗೆ ಜಲಸಂಪನ್ಮೂಲ ಬೇಕು ಎಂದು ಈಗಾಗಲೇ ಸಚಿವ ಸ್ಥಾನ ಹಂಚಿಕೊಂಡು ಕೂತಿದ್ದಾರೆ. ನನ್ನ ಹತ್ತಿರ ಅವರು ಮಾತನಾಡಿದ್ದು, ನನ್ನ ಬಳಿ ಯಾರಿಗೆ ಯಾವ ಖಾತೆ ಬೇಕು ಎಂಬ ಪಟ್ಟಿ ಇದೆ. ನಾನು ಅದನ್ನು ಮುಂದಿನ ಅಧಿವೇಶನದಲ್ಲಿ ಹೇಳ್ತೀನಿ.’
‘ಅವರನ್ನು ಬಿಜೆಪಿ ಹೈಕಮಾಂಡ್ ಕಂಟ್ರೋಲ್ ಮಾಡುತ್ತೋ ಬಿಡುತ್ತೋ ಗೊತ್ತಿಲ್ಲ. ಆದರೆ ನಮ್ಮ ಸ್ನೇಹಿತರ ಪರಿಸ್ಥಿತಿ ಏನಾಗುತ್ತೆ ಅಂತಾ ಗೊತ್ತು. ಅಷ್ಟು ಮಾತ್ರ ಹೇಳ್ತೀನಿ. ಯಡಿಯೂರಪ್ಪನವರು ತಮ್ಮ ಜತೆ ಇವರನ್ನು ಪ್ರಮಾಣವಚನ ಮಾಡಿಕೊಂಡರೆ ಅವರು ಬಚಾವಾಗ್ತಾರೆ. ಇಲ್ಲಂದ್ರೆ ಯಡಿಯೂರಪ್ಪ ಗೋವಿಂದಾ.. ಗೋವಿಂದ.’
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.