![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Aug 26, 2024, 2:05 AM IST
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಕಾರಿಡಾರ್‌ನಲ್ಲಿ ರವವಿವಾರ ಸಂಜೆ ಅಂತಾರಾಷ್ಟ್ರೀಯ ದಾಖಲೆಗಾಗಿ 360 ನೃತ್ಯ ಕಲಾವಿದರಿಂದ ಏಕಕಾಲದಲ್ಲಿ ನೃತ್ಯ ಪ್ರದರ್ಶನ ನಡೆಯಿತು.
ಹಾಸನ ಜಿಲ್ಲೆ ಚನ್ನರಾಯಪಟ್ಟಣದ ನ್ಯಾಶನಲ್ ಕ್ಲಾಸಿಕಲ್ ಡ್ಯಾನ್ಸ್ ಅಕಾಡೆಮಿ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶ್ರೀಮಠದ ಪೀಠಾಧಿ ಪತಿ ಶ್ರೀ ಸುಬುಧೇಂದ್ರ ತೀರ್ಥರು ಕಾರ್ಯಕ್ರಮ ಉದ್ಘಾಟಿಸಿದರು.
ಕಲಾವಿದರು ನಾಮ ರಾಮಾಯಣಂ ನೃತ್ಯ ಪ್ರದರ್ಶನ ಮಾಡಿ ಗಮನ ಸೆಳೆದರು. ಏಕಕಾಲದಲ್ಲಿ ಮಾಡಿದ ಪ್ರದರ್ಶನ ನೋಡುಗರ ಹೃನ್ಮನ ಸೆಳೆಯಿತು. ಜಪಾನ್, ಜರ್ಮನಿ ಇಂಡೋನೇಷಿಯ ಸೇರಿದಂತೆ ದೇಶದ ಅನೇಕ ರಾಜ್ಯಗಳ ನೃತ್ಯ ಗುರುಗಳು ಮತ್ತು ನೃತ್ಯ ಕಲಾವಿದರು ಪಾಲ್ಗೊಂಡಿದ್ದರು.
ಆ ಮೂಲಕ ಇಂಟರ್ ನ್ಯಾಶನಲ್ ಬುಕ್ ಆಫ್ ರೆಕಾರ್ಡ್ ಪುಟಕ್ಕೆ ಸೇರಲಾಯಿತು. ಇಂಟರ್‌ನ್ಯಾಶನಲ್ ಬುಕ್ ಆಫ್ ರೆಕಾರ್ಡ್ ಸಂಸ್ಥೆಯ ಅರವಿಂದ ಸಿಂಗ್ ದಾಖಲೆ ಮಾಡಿದ ಸಂಸ್ಥೆಗೆ ಪ್ರಮಾಣ ಪತ್ರ ನೀಡಿದರು.
You seem to have an Ad Blocker on.
To continue reading, please turn it off or whitelist Udayavani.