ಕೇರಳ ಮಳೆಯಬ್ಬರ : ತಿರುವನಂತಪುರದಲ್ಲಿ ರೆಡ್ ಅಲರ್ಟ್, 6 ಜಿಲ್ಲೆಗಳಲ್ಲಿ ಆರೆಂಟ್ ಅಲರ್ಟ್
6 ಜಿಲ್ಲೆಗಳಲ್ಲಿ ಆರೆಂಟ್ ಅಲರ್ಟ್
Team Udayavani, Nov 13, 2021, 9:00 PM IST
ತಿರುವನಂತಪುರಂ: ತಮಿಳುನಾಡಿನಲ್ಲಿ ಮಳೆಯ ಆರ್ಭಟ ಕಡಿಮೆಯಾಗುತ್ತಿದ್ದಂತೆ, ಕೇರಳದಲ್ಲಿ ವರುಣ ಅಬ್ಬರಿಸತೊಡಗಿದ್ದಾನೆ. ಶುಕ್ರವಾರ ರಾತ್ರಿಯಿಂದೀಚೆಗೆ ಕೇರಳದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ತಿರುವನಂತಪುರಂ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಾಗೂ 6 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.
ರಾತ್ರೋರಾತ್ರಿ ಆರಂಭವಾದ ಮಳೆಯು ಶನಿವಾರವಿಡೀ ನಿರಂತರವಾಗಿ ಸುರಿಯುತ್ತಿದ್ದು, ಹಲವು ತಗ್ಗುಪ್ರದೇಶಗಳು ಜಲಾವೃತವಾಗಿವೆ. ತಿರುವನಂತಪುರಂ, ಕೊಲ್ಲಂ, ಪಟ್ಟಣಂತಿಟ್ಟ, ಅಳಪ್ಪುಳ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ನ.25ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ.
ಇನ್ನು, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕಲ್ಲಿಕೋಟೆ, ಕಣ್ಣೂರು, ವಯನಾಡ್ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಿರಂತರ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಅಲ್ಪಪ್ರಮಾಣದ ಭೂಕುಸಿತ, ರೈಲು ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಮಳೆಯ ಹಿನ್ನೆಲೆಯಲ್ಲಿ ತುರ್ತು ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ ಎಂದು ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ತಮಿಳುನಾಡು, ಆಂಧ್ರದಲ್ಲಿ ಮುನ್ನೆಚ್ಚರಿಕೆ
ತಮಿಳುನಾಡಿನ ಕನ್ಯಾಕುಮಾರಿ, ತಿರುನ್ವೇಲಿ ಜಿಲ್ಲೆಗಳಲ್ಲಿ ನ. 14, 15ರಂದು ಭಾರೀ ಮಳೆ ಸುರಿಯಲಿದೆ ಎಂದು ಪ್ರಾಂತೀಯ ಹವಾಮಾನ ಇಲಾಖೆ (ಆರ್‌ಎಂಸಿ) ಮುನ್ನಚ್ಚರಿಕೆ ನೀಡಿದೆ. ತಮಿಳುನಾಡಿನ ಡೆಲ್ಟಾ ಜಿಲ್ಲೆಗಲಾದ ಅರಿಯಲೂರ್, ಕರೈಕಲ್, ನಾಗಪಟ್ಟಿಣಂ, ಪೆರಂಬದೂರ್, ಪುದುಕೊಟ್ಟೈ, ತಂಜಾವೂರು, ತಿರುಚನಾಪಲ್ಲಿ, ತಿರುವಾವೂರ್ ಹಾಗೂ ಸೇಲಂ ಜಿಲ್ಲೆಗಳಲ್ಲೂ ಅಪಾರ ಮಳೆ ಸುರಿಯಲಿದೆ ಎಂದು ಆರ್‌ಎಂಸಿ ಹೇಳಿದೆ.
ಪಾಲಿಕೆಯಿಂದ ಸೊಳ್ಳೆ ನಿಯಂತ್ರಣಕ್ಕೆ ಕ್ರಮ
ಚೆನ್ನೈನ ಹಲವಾರು ಪ್ರದೇಶಗಳು ಜಲಾವೃತವಾಗಿರುವ ಹಿನ್ನೆಲೆಯಲ್ಲಿ ಸೊಳ್ಳೆಗಳ ಹಾವಳಿಯನ್ನು ನಿಯಂತ್ರಿಸುವ ಸಲುವಾಗಿ ಚೆನ್ನೈ ಮಹಾನಗರ ಪಾಲಿಗೆ, ಸೊಳ್ಳೆ ನಿಯಂತ್ರಣ ಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಇದಕ್ಕಾಗಿ, 287 ಪೋರ್ಟಬಲ್ ಫಾಗಿಂಗ್ ಮೆಷೀನ್‌ಗಳನ್ನು ಬಳಸಲಾಗುತ್ತಿದೆ. ಜೊತೆಗೆ, 479 ಬ್ಯಾಟರಿ ಚಾಲಿತ ಸ್ಪ್ರೆàಯರ್‌ಗಳನ್ನು ಬಳಸಲಾರಂಭಿಸಲಾಗಿದೆ.
ಇದನ್ನೂ ಓದಿ : ಕಾರ್ಯಶೈಲಿ ಬದಲಿಸಿಕೊಳ್ಳಿ; ಹೆಚ್ ಡಿಕೆಯಿಂದ ಮುಖಂಡರಿಗೆ ಒಗ್ಗಟ್ಟು ಮತ್ತು ಸಂಘಟನೆ ಪಾಠ
ಮಳೆಬಾಧಿತ ಪ್ರದೇಶಗಳಿಗೆ ಸ್ಟಾಲಿನ್ ಭೇಟಿ
ಅಗಾಧ ಮಳೆಯಿಂದ ತೀವ್ರವಾಗಿ ಹಾನಿಗೀಡಾಗಿರುವ ತಮಿಳುನಾಡಿನ ಪ್ರಾಂತ್ಯಗಳಿಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಶನಿವಾರ ಭೇಟಿ ನೀಡಿದ್ದಾರೆ. ಕಡಲೂರ್ ಜಿಲ್ಲೆಯ ಕುರುಂಜಿಪಾಡಿ ಪಂಚಾಯ್ತಿಯಿಂದ ಪ್ರವಾಸ ಆರಂಭಿಸಿದ ಅವರು, ಆನಂತರ ಅಡೂರು ಅಗಾರಂ, ತರಂಗಂಪಾಡಿ, ಕೇಶವನ್‌ಪಾಳಯಂಗಳಿಗೆ ಭೇಟಿ ನೀಡಿ, ಅಲ್ಲಿ ಮಳೆಯ ನಿರಾಶ್ರಿತರಿಗೆ ಅಕ್ಕಿ, ಹೊದಿಕೆ ಹಾಗೂ ಇನ್ನಿತರ ಅಗತ್ಯ ವಸ್ತುಗಳನ್ನು ನೀಡಿದರು. ಈ ಪ್ರಾಂತ್ಯಗಳ ಆದಿ ದ್ರಾವಿಡರ್ ಸಮುದಾಯಕ್ಕೆ ಸೇರಿದ 18 ಕುಟುಂಬಗಳಿಗೆ 5.22 ಲಕ್ಷ ಮೌಲ್ಯದ ಮನೆ ನಿವೇಶನಗಳ ದಾಖಲೆಗಳನ್ನು (ಪಟ್ಟಾ) ಹಸ್ತಾಂತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.