ಆಶ್ರಯ ಮನೆ: ಆಯ್ಕೆ ಪಟ್ಟಿ ರದ್ದು; ಹೊಸ ಪಟ್ಟಿಗೆ ಚಿಂತನೆ?
Team Udayavani, Feb 5, 2022, 6:15 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ರಾಜ್ಯದ ವಿಶೇಷ ವರ್ಗದ ಫಲಾನುಭವಿಗಳಿಗೆ 25,000 ಆಶ್ರಯ ಮನೆಗಳನ್ನು ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಆದರೆ, ಈ ವರ್ಗದಡಿ ಹಿಂದಿನ ಸರಕಾರದಲ್ಲಿ ಆಯ್ಕೆಯಾದ ಫಲಾನುಭವಿಗಳ ಪಟ್ಟಿಯನ್ನು ರದ್ದುಪಡಿಸಿ ಹೊಸ ಫಲಾನುಭವಿಗಳ ಆಯ್ಕೆ ಮಾಡಲು ಸರಕಾರ ನಿರ್ಧರಿಸಿದೆ.
ರಾಜ್ಯ ಸರಕಾರ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ವಿಧವೆಯರು, ಅಂಗವಿಕಲರು, ತೃತೀಯ ಲಿಂಗಿಗಳು, ಪರಿತ್ಯಕ್ತರು ಸೇರಿದಂತೆ ಸುಮಾರು 67 ವರ್ಗಗಳ ಜನರಿಗೆ ಆಶ್ರಯ ಮನೆಗಳನ್ನು ಹಂಚಿಕೆ ಮಾಡುತ್ತದೆ. ಅನೇಕ ವರ್ಷಗಳಿಂದ ಈ ವರ್ಗಗಳ ಜನರಿಗೆ ಮನೆ ಹಂಚಿಕೆ ಮಾಡಿಲ್ಲ. ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಮೈತ್ರಿ ಸರಕಾರ ಹಾಗೂ ಬಿಜೆಪಿ ಸರಕಾರದ ಅವಧಿಯಲ್ಲಿ ವಿಶೇಷ ವರ್ಗಗಳಿಗೆ ಯಾವುದೇ ಮನೆಗಳು ಹಂಚಿಕೆಯಾಗಿಲ್ಲ.
ಜಿಲ್ಲಾಧಿಕಾರಿಗಳ ಸಮಿತಿ ಆಯ್ಕೆ
ರಾಜೀವ್ ಗಾಂಧಿ ವಸತಿ ನಿಗಮ ಜಿಲ್ಲಾವಾರು ಮನೆಗಳನ್ನು ಹಂಚಿಕೆ ಮಾಡಿದ ಅನಂತರ ಜಿಲ್ಲಾಧಿಕಾರಿಗಳ ನೇತೃತ್ವದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಮಿತಿಯಲ್ಲಿ ಪಂಚಾಯತ್‌ವಾರು ವಿವಿಧ ವಿಶೇಷ ವರ್ಗಗಳ ಫಲಾನುಭವಿಗಳ ಪಟ್ಟಿಯನ್ನು ಸಿದ್ದಪಡಿಸಿ ನಿಗಮಕ್ಕೆ ಕಳುಹಿಸಲಾಗುತ್ತದೆ. ಅನಂತರ ರಾಜೀವ್ ಗಾಂಧಿ ನಿಗಮದಿಂದ ಫಲಾನುಭವಿಗಳಿಗೆ ಅಧಿಕೃತ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.
ಇದನ್ನೂ ಓದಿ:ಪರಿಸರ ರಕ್ಷಣೆ ತುರ್ತು ಆದ್ಯತೆಯಾಗಲಿ: ಸಿಎಂ ಬಸವರಾಜ ಬೊಮ್ಮಾಯಿ
53 ಸಾವಿರ ರದ್ದು?
ಈಗಿರುವ ಮಾಹಿತಿ ಪ್ರಕಾರ ರಾಜ್ಯ ಸರಕಾರ ಹಿಂದಿನ ಸರಕಾರದ ಅವಧಿಯಲ್ಲಿ ಆಯ್ಕೆಯಾಗಿರುವ ವಿಶೇಷ ವರ್ಗಗಳ ಸುಮಾರು 53 ಸಾವಿರ ಫಲಾನುಭವಿಗಳ ಪಟ್ಟಿಯನ್ನು ರದ್ದುಪಡಿಸಿದ್ದು, ಹೊಸದಾಗಿ ಮತ್ತೆ ಫಲಾನುಭವಿಗಳ ಪಟ್ಟಿಯನ್ನು ಸಿದ್ದಪಡಿಸಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲು ರಾಜೀವ್ ಗಾಂಧಿ ವಸತಿ ನಿಗಮ ತೀರ್ಮಾನಿಸಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.