ನಿರಾಶ್ರಿತರ ಕೇಂದ್ರ ಒತ್ತುವರಿಯಾಗಲು ಬಿಡಲ್ಲ: ಗೋವಿಂದ ಕಾರಜೋಳ
Team Udayavani, Oct 28, 2019, 8:30 PM IST
ಬೆಂಗಳೂರು: ಯಾವುದೇ ಕಾರಣಕ್ಕೂ ನಗರದಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರ ಒತ್ತುವರಿಯಾಗಲು ಬಿಡುವುದಿಲ್ಲ. ಇದನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಗೋವಿಂದ ಕಾರಜೋಳ ಹೇಳಿದರು.
ಸೋಮವಾರ ಮಾಗಡಿ ರಸ್ತೆಯ ಸುಮ್ಮನಹಳ್ಳಿ ಸಿಗ್ನಲ್ ಬಳಿ ಇರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, 1946ರಲ್ಲಿ ಜಯಚಾಮರಾಜೇಂದ್ರ ಒಡೆಯರ್ ಕೇಂದ್ರವನ್ನು ಆರಂಭಿಸಿ, 161 ಎಕರೆ ಮೀಸಲಿಟ್ಟಿದ್ದಾರೆ. ಆಸ್ತಿಯನ್ನು ಭೂಗಳ್ಳರು ಒತ್ತುವರಿ ಮಾಡಿಕೊಳ್ಳಲು ಸಂಚು ರೂಪಿಸುತ್ತಿದ್ದು, ಭೂಗಳ್ಳರ ಪಾಲಾಗದಂತೆ ನೋಡಿಕೊಳ್ಳುತ್ತೇವೆ ಎಂದರು.
ಭಿಕ್ಷಾಟನೆ ಸಾಮಾಜಿಕ ಪಿಡುಗಾಗಿದ್ದು, ಭಿಕ್ಷುಕರನ್ನು ಗುರುತಿಸಿ ಅವರನ್ನು ಇಲ್ಲಿಗೆ ಕರೆದುಕೊಂಡು ಬಂದು ಊಟ, ವಸತಿ ನೀಡಿ ತರಬೇತಿ ನೀಡಲಾಗುತ್ತಿದೆ. ಬೆಂಗಳೂರಿನ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ 150 ಮಹಿಳೆಯರು, 604 ಪುರಷರು ಸೇರಿ 754 ಮಂದಿ ಇದ್ದಾರೆ. ವಿಜಯಪುರ, ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ 14 ಕೇಂದ್ರಗಳಲ್ಲಿ ಒಟ್ಟಾರೆ 1850 ಜನರಿದ್ದಾರೆ ಎಂದು ತಿಳಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಗ್ರಾಮ ಪಂಚಾಯಿತಿ ಸೇರಿದಂತೆ ಸ್ಥಳೀಯ ಸರ್ಕಾರಗಳು ಸೆಸ್ ಸಂಗ್ರಹಿಸುತ್ತಿದ್ದು, ಸುಮಾರು 164 ಕೋಟಿ ರೂ. ಸೆಸ್ ಹಣ ಬಾಕಿ ಉಳಿಸಿಕೊಂಡಿವೆ. ಅದರಲ್ಲಿ ಬಿಬಿಎಂಪಿ 114 ಕೋಟಿ ರೂ. ನೀಡಬೇಕಿದ್ದು, ಈ ಬಗ್ಗೆ ಪತ್ರ ಬರೆಯಲಾಗಿದೆ ಎಂದರು.
ಈ ಹಿಂದೆ ಕೂಡಾ ಸಮಾಜ ಕಲ್ಯಾಣ ಸಚಿವನಾಗಿ ಕೆಲಸ ನಿರ್ವಹಿಸಿದ್ದೆ. ಆಗ ಈ ಪರಿಹಾರ ಕೇಂದ್ರವನ್ನು ಅಭಿವೃದ್ಧಿ ಮಾಡಬೇಕೆಂದು ಕನಸಿತ್ತು. ಪ್ರಸ್ತುತ ಈ ಕೇಂದ್ರದಲ್ಲಿ ಬಾಳೆ, ಅಡಕೆ ಸೇರಿ ತರಕಾರಿ ಬೆಳೆಯಲಾಗುತ್ತಿದೆ. ಪ್ರತಿ ವರ್ಷ ನಮ್ಮ ಕುಟುಂಬದ ಜತೆ ಹಬ್ಬ ಆಚರಿಸುತ್ತೇನೆ. ಆದರೆ, ಈ ಬಾರಿ ನಿರಾಶ್ರಿತರ ಜತೆ ಹಬ್ಬ ಆಚರಿಸಲು ದಿಢೀರ್ ಭೇಟಿ ನೀಡಿದ್ದೇನೆ ಎಂದರು.
ಇದೇ ವೇಳೆ ಕೇಂದ್ರದಲ್ಲಿರುವ ಅನ್ನಪೂರ್ಣ ಭೋಜನಾಲಯಕ್ಕೆ ಭೇಟಿ ನೀಡಿ ಅನ್ನ, ಸಾರು, ಮಜ್ಜಿಗೆ ಸವಿದರು. ಬಾಳೆ ತೋಟಕ್ಕೆ ಹೋಗಿ ಬೆಳೆಗಳ ಬಗ್ಗೆ ಮಾಹಿತಿ ಪಡೆದರು.
ಡಿಸಿಎಂ ಕೈ ಹಿಡಿದು ಕಣ್ಣೀರಿಟ್ಟ ವೃದ್ಧೆ
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸಾಲಿನಲ್ಲಿ ಕುಳಿತಿದ್ದ ಪ್ರತಿಯೊಬ್ಬ ನಿರಾಶ್ರಿತರ ಹೆಸರನ್ನು ಕೇಳುತ್ತಿದ್ದರು. ಈ ವೇಳೆ ಕೇಂದ್ರದಲ್ಲಿರುವ ಬೆಳಗಾವಿ ಜಿಲ್ಲೆಯ ಮಮದಾಪುರ ಗ್ರಾಮದ ಪ್ರಭಾವತಿ ಎಂಬ ವೃದ್ಧೆ ಡಿಸಿಎಂ ಕೈ ಹಿಡಿದು ಕಣ್ಣೀರಿಡುತ್ತಾ, ದಯವಿಟ್ಟು ನಮ್ಮ ಊರಿಗೆ ಕಳಿಸಿ, ನಮ್ಮ ಜನರ ಜತೆ ಬದುಕಬೇಕೆಂಬ ಆಸೆ ಇದೆ ಎಂದರು. ಕೂಡಲೇ ನಿರಾಶ್ರಿತರ ಕೇಂದ್ರದ ಅಧಿಕಾರಿಗಳ ಬಳಿ ವೃದ್ಧೆಯ ಮಾಹಿತಿ ಕೇಳಿ ಬೆಳಗಾವಿಯ ಸದಲಗಾ ಪೊಲೀಸ್ ಠಾಣೆಗೆ ಕರೆ ಮಾಡಿ ವೃದ್ಧೆಯ ಸಂಬಂಧಿಕರ ಬಗ್ಗೆ ಮಾಹಿತಿ ಪಡೆದರು. ವೃದ್ಧೆಯನ್ನು ಶೀಘ್ರವೇ ಊರಿಗೆ ಬಿಟ್ಟು ಬನ್ನಿ ಎಂದು ಕೇಂದ್ರದ ಸಿಬ್ಬಂದಿಗೆ ಸೂಚನೆ ನೀಡಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಮಾಡಲ್ಲ ಎಂದು ಯಾವ ವಿಚಾರವಾಗಿ ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ಇದೊಂದು ರಾಜಕೀಯದ ಹೇಳಿಕೆ ಅಷ್ಟೇ. ಜೆಡಿಎಸ್ ಪಕ್ಷದ ಶಾಸಕರು ಆಚೀಚೆ ಹೋಗುತ್ತಿರುವುದಕ್ಕೆ ರೀತಿ ಹೇಳಿರಬಹುದು.
– ಗೋವಿಂದ ಕಾರಜೋಳ, ಉಪಮುಖ್ಯಮಂತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.